ಐಪಿಎಲ್‌ 2023 | ಕೊಹ್ಲಿ-ಕ್ಲಾಸೆನ್‌ ಶತಕದ ಮಿಂಚು; ಹೈದರಾಬಾದ್‌ ವಿರುದ್ಧ ಆರ್‌ಸಿಬಿಗೆ ಮಹತ್ವದ ಗೆಲುವು

Date:

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಆರ್‌ಸಿಬಿ ತಂಡ 8 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ.

ಹೈದರಾಬಾದ್‌ನ ರಾಜೀವ್‌ಗಾಂಧಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ʻಕಿಂಗ್ ಕೊಹ್ಲಿʼ ದಾಖಲಿಸಿದ ಅಮೋಘ ಶತಕ ಮತ್ತು ನಾಯಕ ಫಾಫ್ ಡು ಪ್ಲೆಸಿಸ್ ಅವರ ʻಕ್ಲಾಸಿಕ್‌ ಫಿಫ್ಟಿʼ ನೆರವಿನಿಂದ ಆರ್‌ಸಿಬಿ, ಇನ್ನೂ 4 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಆತಿಥೇಯ ಹೈದರಬಾದ್‌ ತಂಡ, ಹೆನ್ರಿಕ್ ಕ್ಲಾಸೆನ್ ಅಬ್ಬರದ ಶತಕದ ಬಲದಲ್ಲಿ 5 ವಿಕೆಟ್‌ ನಷ್ಟದಲ್ಲಿ 186 ರನ್‌ಗಳಿಸಿತ್ತು. 51 ಎಸೆತಗಳನ್ನು ಎದುರಿಸಿದ ಕ್ಲಾಸೆನ್‌ 6 ಸಿಕ್ಸರ್‌ ಮತ್ತು 8 ಬೌಂಡರಿಗಳ ನೆರವಿನಿಂದ 104 ರನ್‌ಗಳಿಸಿ ಹರ್ಷಲ್‌ ಪಟೇಲ್‌ ಬೌಲಿಂಗ್‌ನಲ್ಲಿ ಕ್ಲೀನ್‌ ಬೌಲ್ಡ್‌ ಆದರು. ಆದರೆ ಕ್ಲಾಸೆನ್‌ ಅವರ ಸ್ಮರನೀಯ ಶತಕವು ಸೋಲಿನಲ್ಲಿ ಕೊನೆಯಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾಖಲೆ ಸರಿಗಟ್ಟಿದ ಕೊಹ್ಲಿ!

ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ, ಐಪಿಎಲ್‌ನಲ್ಲಿ ತಮ್ಮ 6ನೇ ಶತಕವನ್ನು ಪೂರ್ತಿಗೊಳಿಸಿದರು. ಆ ಮೂಲಕ  ಐಪಿಎಲ್‌ ಟೂರ್ನಿಯ ಇತಿಹಾಸದಲ್ಲಿ ಅತಿಹೆಚ್ಚು ಶತಕದ ದಾಖಲೆ ಹೊಂದಿದ್ದ ಕ್ರಿಸ್ ಗೇಲ್ ಅವರ ದಾಖಲೆಯನ್ನು ಕೊಹ್ಲಿ ಸರಿಗಟ್ಟಿದರು. ನಾಯಕ ಫಾಫ್ ಡು ಪ್ಲೆಸಿಸ್ 47 ಎಸೆತಗಳಲ್ಲಿ 71 ರನ್ ಗಳಿಸಿದರು. 108 ಎಸೆತಗಳಲ್ಲಿ 172 ರನ್‌ಗಳ ಜೊತೆಯಾದಲ್ಲಿ ಭಾಗಿಯಾದ ಈ ಜೋಡಿ ತಂಡವನ್ನು ಸುಲಭ ಗೆಲುವಿನತ್ತ ಮುನ್ನಡೆಸಿದರು. ಆ ಮೂಲಕ ಪ್ಲೇಆಫ್‌ ಆಸೆಯನ್ನು ಜೀವಂತವಾಗಿರಿಸಿದೆ.

14 ಪಂದ್ಯಗಳ ಪೈಕಿ 13 ಪಂದ್ಯಗಳನ್ನಾಡಿರುವ ಆರ್‌ಸಿಬಿ, 7 ಗೆಲುವು ಹಾಗೂ 6 ಸೋಲು ಕಂಡಿದ್ದು, 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಸದ್ಯ ನಾಲ್ಕನೇ ಸ್ಥಾನದಲ್ಲಿದೆ. ಆರ್‌ಸಿಬಿ ತನ್ನ ಮುಂದಿನ ಪಂದ್ಯದಲ್ಲಿ ಬಲಿಷ್ಠ ಗುಜರಾತ್‌ ಟೈಟನ್ಸ್‌ ತಂಡವನ್ನು ಎದುರಿಸಲಿದೆ.

ಪ್ರಸಕ್ತ ಆವೃತ್ತಿಯ ಲೀಗ್‌ ಹಂತದ ಒಟ್ಟು 70 ಪಂದ್ಯಗಳಲ್ಲಿ 65 ಪಂದ್ಯಗಳು ಮುಕ್ತಾಯ ಕಂಡಿದೆ. ಅದಾಗಿಯೂ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡ ಮಾತ್ರವೇ ಕ್ವಾಲಿಫೈಯರ್‌ ಹಂತಕ್ಕೆ ತೇರ್ಗಡೆಯಾಗಿದೆ.

ಉಳಿದ ಮೂರು ಸ್ಥಾನಗಳಿಗಾಗಿ ನಾಲ್ಕು ತಂಡಗಳ ನಡುವೆ (ಸಿಎಸ್‌ಕೆ, ಮುಂಬೈ, ಲಕ್ನೋ, ಆರ್‌ಸಿಬಿ) ತೀವ್ರ ಪೈಪೋಟಿ ಎದುರಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...