SA vs IND | ಯುವತಿಯ ಮುಖಕ್ಕೆ ಬಡಿದ ಸಂಜು ಸ್ಯಾಮ್ಸನ್ ಹೊಡೆದ ಚೆಂಡು; ಕ್ಷಮೆ ಕೇಳಿದ ಬ್ಯಾಟರ್

Date:

ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ T20 ಪಂದ್ಯದಲ್ಲಿ ಭಾರತ ತಂಡದ ವಿಕೆಟ್ ಕೀಪರ್, ಬ್ಯಾಟರ್ ಸಂಜು ಸ್ಯಾಮ್ಸನ್ ಅವರು ಭಾರೀ ಸಿಕ್ಸ್‌ ಬಾರಿಸಿದ್ದಾರೆ. ಆ ಚೆಂಡು ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಮಹಿಳಾ ಅಭಿಮಾನಿಯೊಬ್ಬರನ್ನು ಮುಖಕ್ಕೆ ಬಿದ್ದಿದ್ದು, ಯುವತಿ ಕಣ್ಣೀರು ಹಾಕಿದ್ದಾರೆ. ಆಕೆಗೆ ಚೆಂಡು ತಗುಲಿದ್ದಕ್ಕಾಗಿ ಆಕೆಯ ಬಳಿ ಸಂಜು ಕ್ಷಮೆ ಕೇಳಿದ್ದಾರೆ.

ಶುಕ್ರವಾರ ನಡೆದ ಪಂದ್ಯದಲ್ಲಿ ಕೇವಲ 56 ಎಸೆತಗಳಲ್ಲಿ 9 ಸಿಕ್ಸರ್‌ಗಳೊಂದಿಗೆ 109 ರನ್ ಪೇರಿಸಿದ ಸಂಜು, ಅಜೇಯರಾಗಿ ಉಳಿದು, ಅದ್ಭುತ ಪ್ರದರ್ಶನ ನೀಡಿದ್ದಾರೆ. ಇನ್ನಿಂಗ್ಸ್‌ನ 10ನೇ ಓವರ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಸಂಜು ಸ್ಯಾಮ್ಸನ್‌ ಅವರು ಟ್ರಿಸ್ಟಾನ್ ಸ್ಟಬ್ಸ್ ಅವರ ಬೌಲಿಂಗ್‌ಗೆ ದೊಡ್ಡ ಹೊಡೆತದ ಮೂಲಕ ಸಿಕ್ಸರ್ ಬಾರಿಸಿದರು. ಈ ವೇಳೆ, ನೇರವಾಗಿ ಪ್ರೇಕ್ಷಕರ ಗ್ಯಾಲರಿಗೆ ಬಿದ್ದ ಚೆಂಡು, ಮೈದಾನದಲ್ಲಿ ಕುಳಿತಿದ್ದ ಯುವತಿಯ ಮುಖಕ್ಕೆ ಬಡಿದಿದೆ.

ಆಕೆಯ ಕೆನ್ನೆಗೆ ಭಾರೀ ಪೆಟ್ಟು ಬಿದ್ದಿದ್ದು, ಗಾಯದ ಮೇಲೆ ಲೇಪಿಸಲು ಮಂಜುಗಡ್ಡೆಯನ್ನು ನೀಡಲಾಗಿತ್ತು. ಬಳಿಕ, ಆಕೆ ಚೇತರಿಸಿಕೊಂಡರು. ಆಕೆಗೆ ಚೆಂಡು ತಗುಲಿದ ದೃಶ್ಯವುಳ್ಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಆಕೆಯ ಬಳಿ ಸಂಜು ಕೂಡ ಕ್ಷಮೆಯಾಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

4ನೇ ಟಿ20 ಪಂದ್ಯದಲ್ಲಿ ಭಾರತವು ದಕ್ಷಿಣ ಆಫ್ರಿಕಾವನ್ನು 135 ರನ್‌ಗಳಿಂದ ಸೋಲಿಸಿದೆ. ಅದರೊಂದಿಗೆ 3-1ರ ಅಂತರದಲ್ಲಿ ಸರಣಿಯನ್ನು ಗೆದ್ದಿದೆ.

ಸ್ಯಾಮ್ಸನ್ 56 ಎಸೆತಗಳಲ್ಲಿ ಔಟಾಗದೆ 109 ರನ್ ಗಳಿಸಿರೆ, ತಿಲಕ್ ವರ್ಮಾ ಅವರು ಕೇವಲ 47 ಎಸೆತಗಳಲ್ಲಿ ಔಟಾಗದೆ 120 ರನ್ ಗಳಿಸಿದ್ದರು. ಭಾರತ ತಂಡವು 20 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 283 ರನ್ ಗಳಿಸಿತ್ತು. ಬೃಹತ್ ಮೊತ್ತದ ರನ್‌ ಬೆನ್ನತ್ತಿದ ದಕ್ಷಿಣ ಆಫ್ರಿಕಾ, 18.2 ಓವರ್‌ಗಳಲ್ಲಿ 148 ರನ್‌ ಗಳಿಸುವಷ್ಟರಲ್ಲಿ ಆಲೌಟ್‌ ಆಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...