ಸಚಿನ್‌ ತೆಂಡೂಲ್ಕರ್‌ನ ಸಾರ್ವಕಾಲಿಕ ದಾಖಲೆ ಮುರಿದ ಇಂಗ್ಲೆಂಡ್‌ ಆಟಗಾರ

Date:

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಟೆಸ್ಟ್ ಕ್ರಿಕೆಟ್​​ನಲ್ಲಿ ಹೊಸ ಇತಿಹಾಸ ದಾಖಲಿಸಿದ್ದಾರೆ. ಭಾರತದ ಸ್ಟಾರ್ ಆಟಗಾರ ಸಚಿನ್‌ ತೆಂಡೂಲ್ಕರ್ ಅವರ ಸಾರ್ವಕಾಲಿಕ ವಿಶ್ವ ದಾಖಲೆಯನ್ನು ಮುರಿದಿರುವುದು ಪ್ರಮುಖ ವಿಶೇಷ.

ಕ್ರೈಸ್ಟ್​​ಚರ್ಚ್​ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದ ದ್ವಿತೀಯ ಇನಿಂಗ್ಸ್​​ನಲ್ಲಿ ಜೋ ರೂಟ್ 23 ರನ್ ಬಾರಿಸಿದ್ದರು. ಈ 23 ರನ್​​ಗಳೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 4ನೇ ಇನಿಂಗ್ಸ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಇದಕ್ಕೂ ಮುನ್ನ ಈ ವಿಶ್ಸವ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಸಚಿನ್ ನಾಲ್ಕನೇ ಇನಿಂಗ್ಸ್​​ನಲ್ಲಿ ಒಟ್ಟು 60 ಬಾರಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಒಟ್ಟು 1625 ರನ್ ಕಲೆಹಾಕುವ ಮೂಲಕ ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆ ಮುರಿಯುವಲ್ಲಿ ಜೋ ರೂಟ್ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಐಪಿಎಲ್ ಜನಪ್ರಿಯತೆ | ಮನರಂಜನೆ, ಬಹುಕೋಟಿ ಆದಾಯ ಹಾಗೂ ಕರಾಳ ಮುಖ

ನಾಲ್ಕನೇ ಇನಿಂಗ್ಸ್​ನಲ್ಲಿ 49 ಬಾರಿ ಬ್ಯಾಟಿಂಗ್ ಮಾಡಿರುವ ಜೋ ರೂಟ್ ಈವರೆಗೆ 1630 ರನ್ ಕಲೆ ಹಾಕಿದ್ದಾರೆ. ಈ ಮೂಲಕ 147 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ನಾಲ್ಕನೇ ಇನಿಂಗ್ಸ್​​​ನಲ್ಲಿ ಅತ್ಯಧಿಕ ರನ್ ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ರೂಟ್ ತಮ್ಮದಾಗಿಸಿಕೊಂಡಿದ್ದಾರೆ.

ಸದ್ಯ 150 ಟೆಸ್ಟ್ ಪಂದ್ಯಗಳ ಮೂಲಕ 12,777 ರನ್ ಕಲೆಹಾಕಿರುವ ಜೋ ರೂಟ್​ ರನ್​ ಸರದಾರರ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದು, ಸಚಿನ್ ತೆಂಡೂಲ್ಕರ್ (15,921 ರನ್ಸ್) ಅವರ ವಿಶ್ವ ದಾಖಲೆ ಮುರಿಯಲು ಇನ್ನೂ 3144 ರನ್​​ಗಳ ಅವಶ್ಯಕತೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...