ಸ್ಯಾಫ್ ಚಾಂಪಿಯನ್‌ಶಿಪ್‌ | ಛೆಟ್ರಿ ಹ್ಯಾಟ್ರಿಕ್‌; ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ

Date:

ಸ್ಯಾಫ್ ಚಾಂಪಿಯನ್‌ಶಿಪ್‌ ಫುಟ್‌ಬಾಲ್‌ ಟೂರ್ನಿಯಲ್ಲಿ ಹಾಲಿ ಚಾಂಪಿಯನ್‌ ಭಾರತ ಗೆಲುವಿನ ಆರಂಭ ಪಡೆದಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಭಾರತ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು  4-0 ಗೋಲುಗಳಿಂದ ಭರ್ಜರಿಯಾಗಿದೆ ಮಣಿಸಿದೆ.

ನಾಯಕ ಸುನಿಲ್‌ ಛೆಟ್ರಿ ಹ್ಯಾಟ್ರಿಕ್‌ ಗೋಲು ದಾಖಲಿಸಿ ಮಿಂಚಿದರೆ ,ಬದಲಿ ಆಟಗಾರನಾಗಿ ಕಣಕ್ಕಿಳಿದ ಉದಾಂತ ಸಿಂಗ್‌ ಭಾರತದ ತಂಡದ ನಾಲ್ಕನೇ ಗೋಲು ದಾಖಲಿಸಿದರು.

ಪಂದ್ಯದ ಮೊದಲಾರ್ಧದಲ್ಲಿ ಭಾರತ 2-0 ಗೋಲುಗಳಿಂದ ಮುನ್ನಡೆ ಕಾಯ್ದುಕೊಂಡಿತ್ತು. 10ನೇ ನಿಮಿಷದಲ್ಲಿ ಪಾಕಿಸ್ತಾನದ ಗೋಲ್‌ ಕೀಪರ್ ಸಾಕಿಬ್ ಹನೀಫ್, ಚೆಂಡನ್ನು ನಿಯಂತ್ರಿಸುವಲ್ಲಿ ವಿಫಲರಾದರು. ಈ  ಅವಕಾಶವನ್ನು ಬಳಸಿಕೊಂಡ ಭಾರತದ ನಾಯಕ ಛೆಟ್ರಿ ಸುಲಭವಾಗಿ ಗೋಲಿನ  ಖಾತೆ ತೆರೆದರು. ಆ  ನಂತರದಲ್ಲಿ ದೊರಕಿದ ಎರಡು ಪೆನಾಲ್ಟಿ ಕಾರ್ನರ್‌ ಅವಕಾಶಗಳನ್ನು ಛೆಟ್ರಿ ಗೋಲಾಗಿ ಪರಿವರ್ತಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಫುಟ್‌ಬಾಲ್‌ | ಛೆಟ್ರಿ ಗೋಲಿನ ಬಲದಲ್ಲಿ ಇಂಟರ್‌ಕಾಂಟಿನೆಂಟಲ್‌ ಕಪ್‌ ಗೆದ್ದ ಭಾರತ

ಸೆಪ್ಟೆಂಬರ್ 2018ರ ಬಳಿಕ ಇದೇ ಮೊದಲ ಬಾರಿಗೆ ಭಾರತ ಮತ್ತು ಪಾಕಿಸ್ತಾನದ ಫುಟ್‌ಬಾಲ್‌ ತಂಡಗಳು ಬುಧವಾರ ಮುಖಾಮುಖಿಯಾಗಿದ್ದವು. ಐದು ವರ್ಷಗಳ ಹಿಂದೆ ನಡೆದ ಸ್ಯಾಫ್ ಚಾಂಪಿಯನ್‌ಶಿಪ್‌ನ  ಸೆಮಿಫೈನಲ್‌ ಪಂದ್ಯದಲ್ಲೂ ಭಾರತ, 3-1 ಗೋಲುಗಳ ಅಂತರದಿಂದ ನೆರೆಯ ರಾಷ್ಟ್ರವನ್ನು ಮಣಿಸಿತ್ತು.

ಜೂನ್ 24ರಂದು ನಡೆಯಲಿರುವ ಪಂದ್ಯದಲ್ಲಿ ನೇಪಾಳವನ್ನು ಮತ್ತು ಜೂನ್ 27 ರಂದು ಕುವೈತ್ ತಂಡವನ್ನು ಭಾರತ ಎದುರಿಸಲಿದೆ. ಮತ್ತೊಂದೆಡೆ ಪಾಕಿಸ್ತಾನ, ಜೂನ್ 24 ರಂದು ಕುವೈತ್ ಮತ್ತು ಜೂನ್ 27 ರಂದು ನೇಪಾಳದ ವಿರುದ್ಧ ಪಂದ್ಯಗಳನ್ನಾಡಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...