ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ನಿವೃತ್ತಿ

Date:

ಭಾರತೀಯ ಕ್ರೀಡಾ ರಂಗದಲ್ಲಿ ಮಹಿಳಾ ಶಕ್ತಿಯ ಪ್ರತೀಕದಂತಿದ್ದ, ದೇಶದ ಬ್ಯಾಡ್ಮಿಂಟನ್ ಕೀರ್ತಿಯನ್ನು ಜಾಗತಿಕ ಮಟ್ಟದಲ್ಲಿ ಎತ್ತಿಹಿಡಿದ ಖ್ಯಾತ ಶಟ್ಲರ್ ಸೈನಾ ನೆಹ್ವಾಲ್ ಅವರು ತಮ್ಮ ಸುದೀರ್ಘ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ.

​ಭಾರತದಲ್ಲಿ ರಾಕೆಟ್ ಕ್ರೀಡೆಗಳನ್ನು, ಅದರಲ್ಲೂ ವಿಶೇಷವಾಗಿ ಹೆಣ್ಣುಮಕ್ಕಳಲ್ಲಿ ಜನಪ್ರಿಯಗೊಳಿಸಿದ ಶ್ರೇಯಸ್ಸು ನಿಸ್ಸಂದೇಹವಾಗಿ ಸೈನಾ ನೆಹ್ವಾಲ್ ಮತ್ತು ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರಿಗೆ ಸಲ್ಲುತ್ತದೆ. ಇವರಿಬ್ಬರೂ ಭಾರತೀಯ ಕ್ರೀಡೆಯ ಅತ್ಯಂತ ಗುರುತಿಸಬಹುದಾದ ಮುಖಗಳಾಗಿದ್ದರು.

ಸೈನಾ ನೆಹ್ವಾಲ್ ಅವರು ಕ್ರೀಡಾ ಲೋಕಕ್ಕೆ ಕಾಲಿಟ್ಟಾಗ, ಸಾನಿಯಾ ಮಿರ್ಜಾ ಆಗಲೇ ದೊಡ್ಡ ತಾರೆಯಾಗಿದ್ದರು. ಆರಂಭದ ದಿನಗಳಲ್ಲಿ ಪತ್ರಕರ್ತರು ಸೇರಿದಂತೆ ಹಲವರು ‘ಸೈನಾ’ ಮತ್ತು ‘ಸಾನಿಯಾ’ ಹೆಸರಿನ ನಡುವೆ ಗೊಂದಲ ಮಾಡಿಕೊಳ್ಳುತ್ತಿದ್ದರು. 2008ರಲ್ಲಿ ಸೈನಾ ವಿಶ್ವ ಜೂನಿಯರ್ ಚಾಂಪಿಯನ್‌ಶಿಪ್ ಚಿನ್ನ ಗೆದ್ದಾಗಲೂ ಸಾನಿಯಾ ಮಿರ್ಜಾ ಗ್ರ್ಯಾಂಡ್‌ಸ್ಲಾಮ್‌ಗಳಲ್ಲಿ ಮಿಂಚುತ್ತಿದ್ದರು. ಆದರೆ, 2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಸೈನಾ ಕಂಚಿನ ಪದಕ ಗೆಲ್ಲುವ ಮೂಲಕ ಅಂತಹ ಎಲ್ಲ ಗೊಂದಲಗಳಿಗೆ ಶಾಶ್ವತ ತೆರೆ ಎಳೆದರು. ಅಂದು ‘ಸೈನಾ’ ಎಂಬ ಹೆಸರು ಭಾರತೀಯರ ಮನದಲ್ಲಿ ಅಚ್ಚೊತ್ತಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ‘ನನ್ನ ಆಟದ ಸ್ಫೂರ್ತಿ ಹಾರ್ದಿಕ್’ ಎಂದ ಆರ್‌ಸಿಬಿ ತಾರೆಗೆ ವಿಶೇಷ ಸಂದೇಶ

ಸುಮಾರು ಎರಡು ದಶಕಗಳ ಕಾಲ ಬ್ಯಾಡ್ಮಿಂಟನ್ ಅಂಗಳದಲ್ಲಿ ಮಿಂಚಿದ್ದ 35ರ ಹರೆಯದ ಸೈನಾ, ಕಳೆದ ಎರಡು ವರ್ಷಗಳಿಂದ ಮೊಣಕಾಲು ನೋವಿನಿಂದಾಗಿ ಸ್ಪರ್ಧಾತ್ಮಕ ಕ್ರೀಡೆಯಿಂದ ದೂರವಿದ್ದರು. ಸೋಮವಾರ ಪಾಡ್‌ಕಾಸ್ಟ್‌ ಒಂದರಲ್ಲಿ ಮಾತನಾಡುತ್ತಾ ಅವರು ಅಧಿಕೃತವಾಗಿ ನಿವೃತ್ತಿ ಘೋಷಿಸಿದರು.

​”ನಾನು ನನ್ನದೇ ಆದ ಷರತ್ತುಗಳ ಮೇಲೆ ಕ್ರೀಡೆಗೆ ಬಂದೆ ಮತ್ತು ನನ್ನದೇ ಆದ ರೀತಿಯಲ್ಲಿ ನಿರ್ಗಮಿಸುತ್ತಿದ್ದೇನೆ. ಹಾಗಾಗಿ ಈ ಬಗ್ಗೆ ದೊಡ್ಡ ಘೋಷಣೆಯ ಅಗತ್ಯವಿರಲಿಲ್ಲ,” ಎಂದು ಸೈನಾ ಹೇಳಿದ್ದಾರೆ. ತಮ್ಮ ನಿವೃತ್ತಿಯ ಕಾರಣವನ್ನು ವಿವರಿಸಿದ ಅವರು, “ನನ್ನ ಮೊಣಕಾಲಿನ ಕಾರ್ಟಿಲೆಜ್ ಸಂಪೂರ್ಣವಾಗಿ ಸವೆದುಹೋಗಿದೆ, ನನಗೆ ಸಂಧಿವಾತ ಇದೆ. ಇನ್ನು ಮುಂದೆ ಆಟ ಮುಂದುವರಿಸುವುದು ಕಷ್ಟ ಎಂದು ಪೋಷಕರು ಮತ್ತು ಕೋಚ್‌ಗಳಿಗೆ ತಿಳಿಸಿದ್ದೇನೆ,” ಎಂದು ಭಾವುಕರಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...