ಮತ್ತೆ ಸ್ಫೋಟಕ ಆಟವಾಡಿ ದ್ವಿಶತಕ ಸಿಡಿಸಿದ ಸರ್ಫರಾಜ್ ಖಾನ್

Date:

ಮುಂಬೈ ಕ್ರಿಕೆಟ್ ತಂಡದ ಬ್ಯಾಟರ್ ಸರ್ಫರಾಜ್‌ ಖಾನ್ ಶುಕ್ರವಾರ ರಣಜಿ ಟ್ರೋಫಿ ‘ಡಿ’ ಗುಂಪಿನ ಪಂದ್ಯದಲ್ಲಿ ಹೈದರಾಬಾದ್ ತಂಡದ ವಿರುದ್ಧ 206 ಎಸೆತಗಳಲ್ಲಿ ದ್ವಿಶತಕ ದಾಖಲಿಸಿದರು. ಇದು ಅವರ ವೃತ್ತಿಜೀವನದ ಪ್ರಥಮ ದರ್ಜೆ ಕ್ರಿಕೆಟ್‌ ನಲ್ಲಿ ಐದನೇ ದ್ವಿಶತಕವಾಗಿದೆ. ಈ ಮೂಲಕ ಅಜಿತ್ ಅಗರ್ಕರ್ ನೇತೃತ್ವದ ರಾಷ್ಟ್ರೀಯ ಆಯ್ಕೆ ಸಮಿತಿಗೆ ಸ್ಪಷ್ಟ ಸಂದೇಶ ರವಾನಿಸಿದರು.

ಸರ್ಫರಾಜ್ ಅವರ ದ್ವಿಶತಕ ಹಾಗೂ ನಾಯಕ ಸಿದ್ದೇಶ್ ಲಾಡ್ (104 ರನ್, 179 ಎಸೆತ) ಶತಕ, ಸುವೇದ್ ಪಾರ್ಕರ್ (75 ರನ್, 98 ಎಸೆತ) ಅರ್ಧಶತಕದ ನೆರವಿನಿಂದ ಮುಂಬೈ ತಂಡವು ಎರಡನೇ ದಿನದಾಟದ ಅಂತ್ಯಕ್ಕೆ ತನ್ನ ಮೊದಲ ಇನಿಂಗ್ಸ್‌ ನಲ್ಲಿ 560 ರನ್ ಕಲೆ ಹಾಕಿದೆ.

ಹೈದರಾಬಾದ್ ಪರ ರಕ್ಷಣ್ ರೆಡ್ಡಿ (4-107) ಯಶಸ್ವಿ ಪ್ರದರ್ಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಫರಾಜ್‌ ಇದಕ್ಕೂ ಮೊದಲು ತನ್ನ 17ನೇ ಪ್ರಥಮ ದರ್ಜೆ ಶತಕ ಹಾಗೂ 2025-26ರ ಋತುವಿನ ಮೊದಲ ಶತಕವನ್ನು ಸಿಡಿಸಿದ್ದರು. 2019-20ರ ನಂತರ ಕೇವಲ ಅಮನ್‌ದೀಪ್ ಖರೆ ಹಾಗೂ ಅನುಸ್ತುಪ್ ಮಜುಂದಾರ್ ಮಾತ್ರ ರಣಜಿಯಲ್ಲಿ ಸರ್ಫರಾಜ್‌ ಗಿಂತ ಹೆಚ್ಚು ಶತಕಗಳನ್ನು ಸಿಡಿಸಿದ್ದಾರೆ.

ಸರ್ಫರಾಜ್‌ 219 ಎಸೆತಗಳಲ್ಲಿ 227 ರನ್ ಗಳಿಸಿ ಔಟಾದರು. 103.65ರ ಸ್ಟ್ರೈಕ್‌ರೇಟ್‌ನಲ್ಲಿ 19 ಬೌಂಡರಿ ಹಾಗೂ 9 ಸಿಕ್ಸರ್‌ಗಳನ್ನು ಸಿಡಿಸಿದರು.

ಇದನ್ನು ಓದಿದ್ದೀರಾ? ಗೌತಮ್‌ ಗಂಭೀರ್; ತಂಡವನ್ನು ಗೆಲ್ಲಿಸುತ್ತಿಲ್ಲ, ತಾವೂ ಬದಲಾಗುತ್ತಿಲ್ಲ

ಸರ್ಫರಾಜ್‌ ಸದ್ಯ ಅತ್ಯುತ್ತಮ ಫಾರ್ಮ್‌ ನಲ್ಲಿದ್ದಾರೆ. 2025-26ರ ಸಾಲಿನ ವಿಜಯ್ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಪಂಜಾಬ್ ತಂಡದ ವಿರುದ್ಧ 15 ಎಸೆತಗಳಲ್ಲಿ ಅರ್ಧಶತಕವನ್ನು ಸಿಡಿಸಿದ್ದರು. ಲಿಸ್ಟ್ ‘ಎ’ ಕ್ರಿಕೆಟ್‌ನಲ್ಲಿ ವೇಗದ ಅರ್ಧಶತಕ ಗಳಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು. ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಆರು ಇನಿಂಗ್ಸ್‌ಗಳಲ್ಲಿ 75.75ರ ಸರಾಸರಿಯಲ್ಲಿ 190.56ರ ಸ್ಟ್ರೈಕ್‌ರೇಟ್‌ ನಲ್ಲಿ ಒಟ್ಟು 303 ರನ್ ಗಳಿಸಿ ಮುಂಬೈ ಪರ ಗರಿಷ್ಠ ರನ್ ಸ್ಕೋರರ್ ಆಗಿದ್ದರು.

ಸರ್ಫರಾಜ್‌ 2024ರ ನವೆಂಬರ್‌ ನಲ್ಲಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಕೊನೆಯ ಬಾರಿ ಆಡಿದ್ದರು. ಆ ನಂತರ ದೇಶೀಯ ಕ್ರಿಕೆಟ್‌ನಲ್ಲಿ ರನ್ ಹೊಳೆ ಹರಿಸುತ್ತಲೇ ಇದ್ದಾರೆ. 2025-26ರ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಏಳು ಪಂದ್ಯಗಳಲ್ಲಿ 329 ರನ್ ಗಳಿಸಿರುವ ಸರ್ಫರಾಜ್‌, ಮುಂಬೈ ತಂಡದ ಪರ ಎರಡನೇ ಗರಿಷ್ಠ ರನ್ ಸ್ಕೋರರ್ ಆಗಿದ್ದರು.

2026ರ ಐಪಿಎಲ್ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೂಲ ಬೆಲೆ 75 ಲಕ್ಷ ರೂ.ಗೆ ಸರ್ಫರಾಜ್‌ ಅವರನ್ನು ತನ್ನ ತೆಕ್ಕೆಗೆ ಸೇರಿಸಿಕೊಂಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...