ಇಂಡೋನೇಷ್ಯಾ ಓಪನ್ ಬ್ಯಾಡ್ಮಿಂಟನ್ | ಫೈನಲ್‌ ಪ್ರವೇಶಿಸಿದ ಸಾತ್ವಿಕ್ – ಚಿರಾಗ್ ಜೋಡಿ

Date:

ದಕ್ಷಿಣ ಕೊರಿಯಾ ಆಟಗಾರರ ವಿರುದ್ಧ ಪ್ರಬಲ ಸವಾಲೊಡ್ಡಿ ಗೆದ್ದು ಬೀಗಿದ ಭಾರತದ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ, ಇಂಡೋನೇಷ್ಯಾ ಓಪನ್ ವರ್ಲ್ಡ್ ಟೂರ್ ಸೂಪರ್ 1000 ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್‌ ಪ್ರವೇಶಿಸಿದ್ದಾರೆ.

ಆದರೆ, ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಎಚ್‌ಎಸ್‌ ಪ್ರಣೋಯ್‌, ಸೆಮಿಫೈನಲ್‌ನಲ್ಲಿ ಸೋತು ಟೂರ್ನಿಯಿಂದ ಹೊರ ನಡೆದಿದ್ದಾರೆ.

ಜಕಾರ್ತದಲ್ಲಿ ಶನಿವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತೀಯ ಜೋಡಿ,  ಕೊರಿಯಾದ ಕಾಂಗ್ ಮಿನ್ ಹ್ಯುಕ್-ಸಿಯೊ ಸೆಯುಂಗ್ ಜೇ ವಿರುದ್ಧ 17-21, 21-19, 21-18 ಸೆಟ್‌ಗಳ ಅಂತರದಿಂದ ಗೆಲುವು ಸಾಧಿಸಿ ಪ್ರಶಸ್ತಿ ಸುತ್ತು ಪ್ರವೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

67 ನಿಮಿಷಗಳ ಕಾಲ ನಡೆದ ಸೆಮಿಫೈನಲ್ ಪಂದ್ಯದಲ್ಲಿ, ಕಾಮನ್‌ವೆಲ್ತ್‌ ಗೇಮ್ಸ್‌ ಚಿನ್ನದ ಪ್ರಶಸ್ತಿ ವಿಜೇತ, ಪ್ರಸ್ತುತ ವಿಶ್ವ  6ನೇ ಶ್ರೇಯಾಂಕಿತ ಭಾರತೀಯ ಜೋಡಿ ಪ್ರಶಸ್ತಿ ಸುತ್ತಿಗೆ ಅರ್ಹತೆ ಪಡೆಯಿತು.  ಈ ಮೂಲಕ ʻಸೂಪರ್ 1000 ಬ್ಯಾಡ್ಮಿಂಟನ್‌ ಪಂದ್ಯಾವಳಿʼಯಲ್ಲಿ ಫೈನಲ್ ತಲುಪಿದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಇಂಡೋನೇಷ್ಯಾದ ಪ್ರಮುದ್ಯ ಕುಸುಮವರ್ಧನ – ಯೆರೆಮಿಯಾ ಎರಿಚ್ ಯೋಚೆ ಯಾಕೋಬ್ ರಾಂಬಿಟನ್ ಅಥವಾ ಎರಡನೇ ಶ್ರೇಯಾಂಕದ ಮಲೇಷ್ಯಾದ ಆರೋನ್ ಚಿಯಾ ಮತ್ತು ವೂಯಿ ಯಿಕ್ ಸೋಹ್ ಜೋಡಿಯನ್ನು ಫೈನಲ್‌ ಪಂದ್ಯದಲ್ಲಿ,  ಸಾತ್ವಿಕ್ – ಚಿರಾಗ್ ಎದುರಿಸಲಿದ್ದಾರೆ.

ಎಚ್‌ಎಸ್‌ ಪ್ರಣೋಯ್‌ಗೆ ನಿರಾಸೆ

ಮಲೇಷ್ಯಾ ಮಾಸ್ಟರ್ಸ್ ಚಾಂಪಿಯನ್ ಎಚ್‌ಎಸ್ ಪ್ರಣೋಯ್ ಅವರು ಪುರುಷರ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ಮುಗ್ಗರಿಸಿದ್ದಾರೆ.  ಅಗ್ರ ಶ್ರೇಯಾಂಕದ ಡೆನ್ಮಾರ್ಕ್‌ನ ವಿಕ್ಟರ್ ಅಕ್ಸೆಲ್ಸೆನ್ ವಿರುದ್ಧ, 15-21, 15-21 ಅಂತರದಲ್ಲಿ ನೇಟರ್‌ ಸೆಟ್‌ಗಳಿಂದ ಮಣಿದು ನಿರಾಸೆ ಅನುಭವಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...