ಪ್ರತಿಭಟನಾ ನಿರತ ಕುಸ್ತಿಪಟುಗಳ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

Date:

ಭಾರತೀಯ ಕುಸ್ತಿ ಫೆಡರೇಶನ್‌ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ದೇಶದ ಖ್ಯಾತನಾಮ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ 22ನೇ ದಿನವೂ ಮುಂದುವರಿದಿದೆ.

ಈ ನಡುವೆ, ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಸುವಂತೆ ಆಗ್ರಹಿಸಿ ಕುಸ್ತಿಪಟುಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಗುರುವಾರ ತಿರಸ್ಕರಿಸಿದೆ.

ಕುಸ್ತಿಪಟುಗಳ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆ ಬಿ ಪರ್ದಿವಾಲಾ ಅವರನ್ನು ಒಳಗೊಂಡ ಪೀಠ ʻ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಮತ್ತು ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಭದ್ರತೆ ಒದಗಿಸಬೇಕು ಎಂದು ನಿಮ್ಮ ಅರ್ಜಿಯಲ್ಲಿದೆ. ಈ ಎರಡೂ ಬೇಡಿಕೆಗಳ ಕುರಿತಾಗಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಉಳಿದಂತೆ ನಿಮ್ಮ ಯಾವುದೇ ಮನವಿಯಿದ್ದರೂ ಹೈಕೋರ್ಟ್ ಅಥವಾ ವ್ಯಾಪ್ತಿಪ್ರದೇಶದ ಮ್ಯಾಜಿಸ್ಟ್ರೇಟ್ ಅನ್ನು ಸಂಪರ್ಕಿಸಬಹುದುʼ ಎಂದು ಹೇಳಿದ ನ್ಯಾಯಪೀಠ ಸದ್ಯಕ್ಕೆ ವಿಚಾರಣಾ ಪ್ರಕ್ರಿಯೆಯನ್ನು ಕೊನೆಗೊಳಿಸುವುದಾಗಿ ತಿಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾ ನಿರತ ಕುಸ್ತಿಪಟುಗಳು ಹಾಗೂ ಪೊಲೀಸ್ ಸಿಬ್ಬಂದಿ ನಡುವೆ ಬುಧವಾರ ತಡರಾತ್ರಿ ಸಂಘರ್ಷ ಏರ್ಪಟ್ಟಿದೆ. ಇದರ ಬೆನ್ನಲ್ಲೇ ಜಂತರ್ ಮಂತರ್ ಸುತ್ತ ಬಿಗಿ ಭದ್ರತೆ ಆಯೋಜಿಸಲಾಗಿದೆ. ಕುಸ್ತಿಪಟುಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಪ್ರತಿಭಟನಾ ನಿರತರು ದೂರಿದ್ದಾರೆ.

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್‌ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್‌ ಬಂಧನಕ್ಕೆ ಆಗ್ರಹಿಸಿ ಒಲಿಂಪಿಯನ್ ಕುಸ್ತಿಪಟುಗಳಾದ ವಿನೇಶಾ ಫೋಗಟ್, ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್ ಸೇರಿದಂತೆ ದೇಶದ ಪ್ರಮುಖ ಕುಸ್ತಿಪಟುಗಳು ಏಪ್ರಿಲ್ 13 ರಿಂದ ಜಂತರ್ ಮಂತರ್ ನಲ್ಲಿ ಧರಣಿ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...