ಮೊದಲ ಟೆಸ್ಟ್ : ಭಾರತದ ವಿರುದ್ಧ ಇಂಗ್ಲೆಂಡ್‌ಗೆ 28 ರನ್‌ಗಳ ರೋಚಕ ಜಯ: ಮಿಂಚಿದ ಪೋಪ್, ಹಾರ್ಟ್ಲಿ

Date:

ಭಾರತ ವಿರುದ್ಧ ನಡೆದ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದ ರೋಚಕ ಹಣಾಹಣಿಯಲ್ಲಿ ಇಂಗ್ಲೆಂಡ್ ತಂಡ 28 ರನ್‌ಗಳ ಅಂತರದ ಗೆಲುವು ಸಾಧಿಸಿದೆ.

ಹೈದರಾಬಾದ್‌ನಲ್ಲಿ ನಡೆದ ಪಂದ್ಯದ 4ನೇ ದಿನದಲ್ಲಿ ಆಂಗ್ಲ ಪಡೆ ಎರಡನೇ ಇನಿಂಗ್ಸ್‌ನಲ್ಲಿ 420 ರನ್‌ಗಳೊಂದಿಗೆ ನೀಡಿದ 231 ರನ್‌ಗಳ ಸವಾಲನ್ನು ಬೆನ್ನಟ್ಟಿದ ಟೀಂ ಇಂಡಿಯಾ ತನ್ನ 2ನೇ ಇನಿಂಗ್ಸ್‌ನಲ್ಲಿ 202 ರನ್‌ಗಳಿಗೆ ತನ್ನ ಎಲ್ಲ ವಿಕೆಟ್‌ಗಳನ್ನು ಕಳೆದುಕೊಂಡು ಸೋಲನ್ನೊಪ್ಪಿಕೊಂಡಿತು.

ಭಾರತದ ಪರವಾಗಿ ನಾಯಕ ರೋಹಿತ್ ಶರ್ಮಾ 39, ಶ್ರೀಕರ್ ಭರತ್ 28, ಆರ್‌ ಅಶ್ವಿನ್ 28 ಹಾಗೂ ಕೆ ಎಲ್ ರಾಹುಲ್ 22 ರನ್ ಗಳಿಸಿದ್ದನ್ನು ಬಿಟ್ಟರೆ ಉಳಿದವರು 20ರ ಗಡಿ ದಾಟಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೀಂ ಇಂಡಿಯಾ ಬ್ಯಾಟರ್‌ಗಳನ್ನು ಪೆವಿಲಿಯನ್‌ ಪಡೆ ದಾರಿ ತೋರಿಸಿದ ಸ್ಪಿನ್ನರ್ ಟಾಮ್ ಹಾರ್ಟ್ಲಿ 7 ವಿಕೆಟ್ ಪಡೆದು ಗೆಲುವಿನ ರೂವಾರಿಯಾದರು. 26.2 ಓವರ್‌ಗಳನ್ನು ಮಾಡಿದ ಟಾಮ್ ಹಾರ್ಟ್ಲಿ 62 ರನ್‌ಗಳಿಗೆ 7 ವಿಕೆಟ್ ಕಬಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂವರು ಮಾನಗೆಟ್ಟ ನಾಯಕರು ಮತ್ತು ರಾಮ ರಾಜಕಾರಣ

ಎರಡನೇ ಇನಿಂಗ್ಸ್‌ನಲ್ಲಿ 316/6 ವಿಕೆಟ್‌ನೊಂದಿಗೆ ನಾಲ್ಕನೇ ದಿನವನ್ನು ಆರಂಭಿಸಿದ ಆಂಗ್ಲರ ಪಡೆ ಓಲಿ ಪೋಪ್ ಅವರ 196 ರನ್‌ಗಳ ನೆರವಿನಿಂದ 102 ಓವರ್‌ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 420 ರನ್‌ ಗಳಿಸಿ ಭಾರತಕ್ಕೆ 231 ರನ್ ಗುರಿ ನೀಡಿತು. 278 ಚೆಂಡುಗಳಲ್ಲಿ 21 ಬೌಂಡರಿಯೊಂದಿಗೆ 196 ರನ್‌ ಗಳಿಸಿದ ಪೋಪ್ ಕೇವಲ 4 ರನ್‌ಗಳಿಂದ ದ್ವಿಶತಕ ವಂಚಿತರಾದರು.

2ನೇ ಇನಿಂಗ್ಸ್‌ನಲ್ಲಿ ಭಾರತದ ಪರ ಬುಮ್ರಾ 41/4, ಆರ್‌ ಅಶ್ವಿನ್ 126/3, ರವೀಂದ್ರ ಜಡೇಜಾ 131/2 ವಿಕೆಟ್ ಕಿತ್ತು ಇಂಗ್ಲೆಂಡ್ ಪತನಕ್ಕೆ ಕಾರಣರಾದರು.

ಇದಕ್ಕೂ ಮೊದಲು ಇಂಗ್ಲೆಂಡ್ ಮೊದಲ ಇನಿಂಗ್ಸ್‌ನಲ್ಲಿ 246 ರನ್‌ ಗಳಿಸಿದರೆ, ಇದಕ್ಕುತ್ತರವಾಗಿ ಟಿಂ ಇಂಡಿಯಾ 436 ರನ್‌ ಕಲೆ ಹಾಕಿತ್ತು.

ಈ ಗೆಲುವಿನಿಂದ ಇಂಗ್ಲೆಂಡ್ ಐದು ಪಂದ್ಯಗಳ ಸರಣಿಯಲ್ಲಿ 1-0 ಯಿಂದ ಮುನ್ನಡೆ ಸಾಧಿಸಿದೆ. ಎರಡನೇ ಟೆಸ್ಟ್‌ ಮಾ.2ರಿಂದ ವಿಶಾಖಪಟ್ಟಣಂನಲ್ಲಿ ಆರಂಭವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...