ಕ್ರೀಡಾಂಗಣದಲ್ಲಿ ಸಿಗರೇಟ್ ಸೇದಿದ ಶಾರೂಖ್ ಖಾನ್‌ ವಿಡಿಯೋ ವೈರಲ್

Date:

ನಿನ್ನೆ(ಮಾ.24) ನಡೆದ ಐಪಿಎಲ್‌ 2024 ಐಪಿಎಲ್ ಟೂರ್ನಿಯ ಕೆಕೆಆರ್‌ ಹಾಗೂ ಎಸ್‌ಆರ್‌ಎಚ್‌ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತ ನೈಟ್‌ ರೈಡರ್ಸ್ ತಂಡ ಹೈದರಾಬಾದ್‌ ವಿರುದ್ಧ 4 ರನ್‌ಗಳ ರೋಚಕ ಗೆಲುವು ಸಾಧಿಸಿತು. ಇದೇ ಸಂದರ್ಭದಲ್ಲಿ ಕ್ರೀಡಾಂಗಣದಲ್ಲಿ ಸಿಗರೇಟ್ ಸೇದಿದ ಕೆಕೆಆರ್‌ ತಂಡದ ಮಾಲೀಕ ಶಾರೂಖ್ ಖಾನ್ ವಿಡಿಯೋ ವೈರಲ್‌ ಆಗಿದ್ದು, ವಿವಾದಕ್ಕೆ ಮಾರ್ಪಟ್ಟಿದೆ.

ಕ್ರೀಡಾಂಗಣದ ವಿಐಪಿ ಬಾಕ್ಸ್‌ನಲ್ಲಿ ಕುಳಿತ್ತಿದ್ದ ಬಾಲಿವುಡ್‌ ನಟ ಹಾಗೂ ಕೆಕೆಆರ್‌ ತಂಡದ ಮಾಲೀಕ ಶಾರೂಖ್ ಖಾನ್ ಸಿಗರೇಟ್‌ ಸೇವನೆ ಮಾಡಿದ್ದಾರೆ.

ಶಾರೂಖ್ ಖಾನ್ ಸೇವನೆಯ ದೃಶ್ಯಗಳು ಹಾಗೂ ವಿಡಿಯೋಗಳು ಸಾಮಾಜಿಕ ಮಾಧ್ಯಗಳಲ್ಲಿ ವೈರಲ್‌ ಆಗಿದ್ದು ಪಂದ್ಯ ನಡೆಯುತ್ತಿರುವ ಸಂದರ್ಭದಲ್ಲಿ ನಟನ ನಡೆತೆಯ ಬಗ್ಗೆ ಹಲವರು ಟೀಕಿಸಿದ್ದಾರೆ. ಸಾರ್ವಜನಿಕರಿಗೆ ಮಾದರಿಯಾಗಬೇಕಿದ್ದ ಜವಾಬ್ದಾರಿಯುತ ವ್ಯಕ್ತಿಯೊಬ್ಬರು ಎಲ್ಲರೆದುರು ಸಿಗರೇಟ್ ಸೇವನೆ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣೆ – ಐಪಿಎಲ್‌ ಕ್ರಿಕೆಟ್‌ನಲ್ಲಿ ಅಪ್ಪ-ಮಗನ ಆಟ

ಸಿಗರೇಟ್ ಸೇವನೆಯ ದೃಶ್ಯ ಪಾಕಿಸ್ತಾನ ಸೂಪರ್‌ ಲೀಗ್‌ ಫೈನಲ್‌ ಪಂದ್ಯದಲ್ಲೂ ಸಂಂಭವಿಸಿದ್ದು, ಪಾಕ್‌ನ ಆಟಗಾರ ಇಮಾದ್‌ ವಾಸೀಮ್‌ ಡ್ರಸಿಂಗ್‌ ರೂಮ್‌ನಲ್ಲಿ ಕುಳಿತು ಸಿಗರೇಟ್‌ ಸೇವನೆ ಮಾಡಿದ್ದರು.

ಕೊಲ್ಕತ್ತದ ಈಡನ್‌ ಗರ್ಡನ್‌ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಆಂಡ್ರೆ ರಸ್ಸೆಲ್ ಅವರ ಸ್ಫೋಟಕ ಅರ್ಧ ಶತಕದ(64) ನೆರವಿನಿಂದ ಕೆಕೆಆರ್ ತಂಡ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವನ್ನು ನಾಲ್ಕು ರನ್ನುಗಳಿಂದ ರೋಚಕವಾಗಿ ಮಣಿಸಿತ್ತು.

ಎದುರಾಳಿ ತಂಡ ಹೈದರಾಬಾದ್‌ ಪರ ಮಧ್ಯಮ ಕ್ರಮಾಂಕದ ಆಟಗಾರ ಹೇನ್‌ರಿಚ್‌ ಕ್ಲಾಸೆನ್ ಅವರು 29 ಚೆಂಡುಗಳಲ್ಲಿ 8 ಸಿಕ್ಸರ್‌ಗಳೊಂದಿಗೆ 63 ಬಾರಿಸಿ ಪಂದ್ಯವನ್ನು ಗೆಲುವಿನ ಸಮೀಪ ತೆಗೆದುಕೊಂಡು ಹೋಗಿದ್ದರು. ಆದರೆ ಹರ್ಷಿತ್‌ ರಾಣಾ ಅವರ ಕೊನೆಯ ಓವರ್‌ ಪಂದ್ಯದ ಗತಿಯನ್ನು ಬದಲಾಯಿಸಿತು.

ಕೊಲ್ಕತ್ತ ನೈಟ್‌ ರೈಡರ್ಸ್‌ ಗಳಿಸಿದ 209 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಸನ್‌ ರೈಸರ್ಸ್‌ ಹೈದಾರಾಬಾದ್ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 204 ರನ್‌ ಮಾತ್ರ ಗಳಿಸಲು ಸಾಧ್ಯವಾಯಿತು.

ಇಂದು(ಮಾ.24) ಜೈಪುರದಲ್ಲಿ ರಾಜಸ್ಥಾನ್ ರಾಯಲ್ಸ್‌ ಹಾಗೂ ಲಖನೌ ಸೂಪರ್‌ ಜೈಂಟ್ಸ್ ಮತ್ತು ಅಹಮದಾಬಾದ್‌ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಲಯನ್ಸ್ ತಂಡಗಳ ನಡುವೆ ಪಂದ್ಯಗಳು ನಡೆಯಲಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...