ಪಾಕಿಸ್ತಾನ ಕ್ರಿಕೆಟ್ ತಂಡದ ನೂತನ ಸಾರಥ್ಯ ಶಾಹೀನ್ ಶಾ ಅಫ್ರಿದಿ ಹೆಗಲಿಗೆ

Date:

ವಿಶ್ವಕಪ್‌ನಲ್ಲಿ ನೀರಸ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ಪಾಕಿಸ್ತಾನದ ತಂಡದ ನಾಯಕತ್ವವವನ್ನು ಬಾಬರ್ ಆಝಂ ತ್ಯಜಿಸಿದ ಬೆನ್ನಲ್ಲೇ, ನೂತನ ನಾಯಕನಾಗಿ ತಂಡದ ವೇಗದ ಬೌಲರ್ ಶಾಹೀನ್ ಶಾ ಅಫ್ರಿದಿಯವರಿಗೆ ನೀಡಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ, ಶಾಹೀನ್ ಶಾ ಅಫ್ರಿದಿ ಟಿ20 ತಂಡದ ನಾಯಕನಾಗಿ ನೇಮಕಗೊಂಡಿದ್ದಾರೆ. ಶಾನ್ ಮಸೂದ್ ಟೆಸ್ಟ್ ನಾಯಕತ್ವ ವಹಿಸಲಿದ್ದಾರೆ ಎಂದು ತಿಳಿಸಿದೆ. ಎಲ್ಲ ಮಾದರಿಯ ನಾಯಕತ್ವದಿಂದ ಕೆಳಗಿಳಿಯುವುದಾಗಿ ಬಾಬರ್ ಆಝಂ ಘೋಷಿಸಿದ ಬೆನ್ನಲ್ಲೇ ಈ ನೇಮಕ ಮಾಡಲಾಗಿದೆ. ಆದರೆ ಏಕದಿನ ಪಂದ್ಯದ ನಾಯಕ ಯಾರು ಎಂದು ಪಿಸಿಬಿ ಇನ್ನೂ ಘೋಷಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಿಸಿಬಿ ಅಧ್ಯಕ್ಷ ಝಾಕಾ ಅಶ್ರಫ್ ಮತ್ತು ಬಾಬರ್ ಅಝಮ್ ಅವರು ಇಂದು ಲಾಹೋರ್‌ನಲ್ಲಿರುವ ಪಿಸಿಬಿ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ನಾನಾ ವಿಚಾರ ಸೇರಿದಂತೆ ವಿಶ್ವಕಪ್ ಪ್ರದರ್ಶನದ ಕುರಿತು ಚರ್ಚಿಸಲು ಸಭೆ ನಡೆಸಿದರು. ಬೌಲರ್ ಶಾಹೀನ್ ಶಾ ಅಫ್ರಿದಿ ಅವರು ಪಾಕ್‌ನ ಮಾಜಿ ಕ್ರಿಕೆಟಿಗ ಶಾಹೀದ್ ಅಫ್ರಿದಿಯವರ ಅಳಿಯನಾಗಿದ್ದಾರೆ.

‘ಟೆಸ್ಟ್ ನಾಯಕನಾಗಿ ಮುಂದುವರಿಯಲು ಬಾಬರ್ ಅವರನ್ನು ಕೇಳಲಾಯಿತು. ಆದರೆ ಅವರು ಅದನ್ನು ನಿರಾಕರಿಸಿದರು. ಅವರ ನಿರ್ಧಾರವನ್ನು ಪಿಸಿಬಿ ಗೌರವಿಸುತ್ತದೆ. ಹಾಗಾಗಿ, ವೈಟ್-ಬಾಲ್ ಕ್ರಿಕೆಟ್‌ನ ನಾಯಕತ್ವದಿಂದ ಅವರನ್ನು ಮುಕ್ತಿಗೊಳಿಸಲಾಗಿದೆ. ಆಟಗಾರನಾಗಿ ಬೆಳೆಯಲು ನಾವು ಬೆಂಬಲಿಸಲಿದ್ದೇವೆ’ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಝಾಕಾ ಅಶ್ರಫ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕ್ರಿಕೆಟ್ | ವಿಶ್ವಕಪ್‌ನಲ್ಲಿ ನೀರಸ ಪ್ರದರ್ಶನ: ಪಾಕ್ ತಂಡದ ನಾಯಕತ್ವ ತ್ಯಜಿಸಿದ ಬಾಬರ್ ಆಝಂ

ಬಾಬರ್ ಅವರ ನಾಯಕತ್ವದಲ್ಲಿ ಪಾಕ್ ತಂಡವು ಈ ಬಾರಿಯ ವಿಶ್ವಕಪ್‌ನಲ್ಲಿ ದಯನೀಯವಾಗಿ ವಿಫಲವಾಗಿದ್ದು, ಕ್ರೀಡಾ ವಲಯದಲ್ಲಿ ಭಾರೀ ಚರ್ಚೆಗೀಡಾಗಿತ್ತು. ವಿಶ್ವಕಪ್‌ನಲ್ಲಿ ಆಡಿದ್ದ 9 ಲೀಗ್‌ ಪಂದ್ಯಗಳಲ್ಲಿ ಐದರಲ್ಲಿ ಸೋತು, 4ರಲ್ಲಿ ಮಾತ್ರ ಜಯ ದಾಖಲಿಸಿತ್ತು. ಆ ಮೂಲಕ ಅಂಕಪಟ್ಟಿಯಲ್ಲಿ 5ನೇ ಸ್ಥಾನ ಪಡೆಯುವುದರೊಂದಿಗೆ ಸೆಮಿಫೈನಲ್‌ಗೇರಲು ವಿಫಲವಾಗಿತ್ತು.

ಆಸ್ಟ್ರೇಲಿಯಾ ಮತ್ತು ನ್ಯೂಝಿಲ್ಯಾಂಡ್‌ನಲ್ಲಿ ಮುಂಬರುವ ಸರಣಿಗಳಿಗೆ ಹೊಸ ಕೋಚಿಂಗ್ ಸಿಬ್ಬಂದಿಯನ್ನು ಸರಿಯಾದ ಸಮಯದಲ್ಲಿ ಘೋಷಿಸಲಿದ್ದೇವೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...