ಐಪಿಎಲ್ | ಅಲ್‌ಝಾರಿ ಜೋಸೆಫ್ ದುಬಾರಿ ಬೌಲಿಂಗ್; ಆರ್‌ಸಿಬಿಗೆ ಗೆಲ್ಲಲು 177 ರನ್‌ಗಳ ಗುರಿ ನೀಡಿದ ಪಂಜಾಬ್

Date:

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ನ 6ನೇ ಪಂದ್ಯವು ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್‌ ನಡುವೆ ನಡೆಯುತ್ತಿದ್ದು, ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಶಿಖರ್ ಧವನ್ ನೇತೃತ್ವದ ಪಂಜಾಬ್ ತಂಡವು ಆರ್‌ಸಿಬಿಗೆ ಗೆಲ್ಲಲು 177 ರನ್‌ಗಳ ಸವಾಲಿನ ಗುರಿ ನೀಡಿದೆ.

ಟಾಸ್ ಗೆದ್ದಿದ್ದ ಆರ್​ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿ, ಪಂಜಾಬ್‌ ಅನ್ನು ಬ್ಯಾಟಿಂಗ್‌ಗೆ ಇಳಿಸಿದರು. ನಿರೀಕ್ಷೆಯಂತೆಯೇ ಉತ್ತಮ ಬೌಲಿಂಗ್ ನಡೆಸಿದ್ದ ಆರ್‌ಸಿಬಿ ಬಳಗವು ಕೊನೆಯ ಓವರ್‌ನಲ್ಲಿ ಎಡವಿತು.

ಆರ್‌ಸಿಬಿ ಪರವಾಗಿ ಕೊನೆಯ ಓವರ್ ಎಸೆದ ಅಲ್‌ಝಾರಿ ಜೋಸೆಫ್ 20 ರನ್ ಬಿಟ್ಟುಕೊಟ್ಟು ದುಬಾರಿಯಾದ್ದರಿಂದ, ಪಂಜಾಬ್ ತಂಡವು ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 176 ರನ್ ದಾಖಲಿಸಿತು. 20ನೇ ಓವರ್‌ನಲ್ಲಿ ಜೋಸೆಫ್ ಎರಡು ಸಿಕ್ಸರ್, ಒಂದು ಬೌಂಡರಿ ಹಾಗೂ ವೈಡ್ ಸಹಿತ 20 ರನ್ ನೀಡುವ ಮೂಲಕ ದುಬಾರಿ ಎನಿಸಿದರು. 19ನೇ ಓವರ್ ಮುಗಿದಾಗ ಪಂಜಾಬ್‌ನ ಮೊತ್ತವು 156 ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಂಜಾಬ್ ಪರವಾಗಿ ಧವನ್ ಜೊತೆಗೆ ಇನ್ನಿಂಗ್ಸ್ ಆರಂಭಿಸಿದ್ದ ಬೈರ್​ಸ್ಟೋವ್, ತಂಡವು 17 ರನ್ ಗಳಿಸಿದ್ದಾಗ ಔಟಾದರು. ಕೇವಲ ಎಂಟು ರನ್ ಗಳಿಸಿ ಸಿರಾಜ್​ಗೆ ವಿಕೆಟ್ ಒಪ್ಪಿಸಿದರು. ಭಾಸಿಮ್ರಾನ್ ಸಿಂಗ್ 17 ಎಸೆತಗಳಲ್ಲಿ 25 ರನ್ ಗಳಿಸಿ ಔಟಾದರು. ಪ್ರಭಾಸಿಮ್ರಾನ್ ಸಿಂಗ್ ಅವರ ವಿಕೆಟ್ ಪಡೆಯುವಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಯಶಸ್ವಿಯಾದರು. ಬಳಿಕ ಬಂದ ಲಿಯಾಮ್ ಲಿವಿಂಗ್‌ಸ್ಟನ್ 13 ಎಸೆತಗಳಲ್ಲಿ 17 ರನ್ ಗಳಿಸಿ ಔಟಾದರು. ಆ ಬಳಿಕ ನಾಯಕ ಶಿಖರ್ ಧವನ್ 45 ರನ್ ಗಳಿಸಿ ಔಟಾದರು. ಆ ಮೂಲಕ ಒಂದೇ ಓವರ್​ನಲ್ಲಿ ಮ್ಯಾಕ್ಸ್​ವೆಲ್​ಗೆ 2 ವಿಕೆಟ್​ ಕಬಳಿಸುವ ಮೂಲಕ ರನ್‌ಗೆ ಕಡಿವಾಣ ಹಾಕಿದರು.

ಬಳಿಕ ಸ್ಯಾಮ್ ಕರನ್ 23 ರನ್ ಗಳಿಸಿದ್ದಾಗ, ಯಶ್ ದಯಾಳ್ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ ವಿಫಲರಾದರು. ವಿಕೆಟ್ ಹಿಂಬದಿ ಕೀಪಿಂಗ್ ಮಾಡುತ್ತಿದ್ದ ಅನುಜ್ ರಾವತ್ ಹಿಡಿದ ಅದ್ಭುತ ಕ್ಯಾಚ್‌ಗೆ ಬಲಿಯಾದರು.

ಪಂಜಾಬ್ ಪರ ಜಿತೇಶ್ ಶರ್ಮಾ 27 ರಮ್ ಗಳಿಸುವ ಮೂಲಕ ತಮ್ಮದೇ ಕೊಡುಗೆ ನೀಡಿದರು. ಕೊನೆಯಲ್ಲಿ ಪಂಜಾಬ್ ಪರವಾಗಿ ಅಬ್ಬರಿಸಿದ ಶಶಾಂಕ್ ಸಿಂಗ್ ಕೇವಲ 8 ಎಸೆತಗಳನ್ನು ಎದುರಿಸಿ 2 ಭರ್ಜರಿ ಸಿಕ್ಸ್ ಹಾಗೂ ಒಂದು ಬೌಂಡರಿಯ ನೆರವಿನಿಂದ 21 ರನ್ ಗಳಿಸುವ ಮೂಲಕ, ತಂಡದ ಮೊತ್ತವನ್ನು 176ಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾದರು.

ಆರ್‌ಸಿಬಿ ಪರವಾಗಿ ಬೌಲಿಂಗ್‌ನಲ್ಲಿ ಮೊಹಮ್ಮದ್ ಸಿರಾಜ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ 2 ವಿಕೆಟ್ ಪಡೆದರೆ, ಯಶ್ ದಯಾಳ್ ಹಾಗೂ ಅಲ್‌ಝಾರಿ ಜೋಸೆಫ್ ತಲಾ ಒಂದು ವಿಕೆಟ್ ಪಡೆಯುವಲ್ಲಿ ಸಫಲರಾದರು. 4 ಓವರ್ ಎಸೆದಿದ್ದ ಜೋಸೆಫ್ 43 ರನ್ ನೀಡಿ, ಬಹಳ ದುಬಾರಿ ಎನಿಸಿಕೊಂಡರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...