ತೌಹಿದ್ ಹೃದೋಯ್ ಶತಕ; ಭಾರತಕ್ಕೆ 229 ರನ್‌ ಗುರಿ, ದಾಖಲೆ ಬರೆದ ಶಮಿ

Date:

ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಇಂದು (ಗುರುವಾರ) ದುಬೈನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಭಾರತದ ಗೆಲುವಿಗೆ 229 ರನ್‌ಗಳು ಅಗತ್ಯವಿದೆ. ಭಾರತದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಐದು ವಿಕೆಟ್‌ಗಳ ಸಾಧನೆ ಮಾಡಿದರೆ, ಅತ್ತ ದಿಟ್ಟ ಹೋರಾಟ ನೀಡಿದ ಬಾಂಗ್ಲಾದ ತೌಹಿದ್
ಹೃದೋಯ್ ಅಮೋಘ ಶತಕ ಗಳಿಸಿದರು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಬಾಂಗ್ಲಾದೇಶದ ಆರಂಭ ಉತ್ತಮವಾಗಿರಲಿಲ್ಲ. ಭಾರತೀಯ ವೇಗಿಗಳಾದ ಮೊಹಮ್ಮದ್ ಶಮಿ ಹಾಗೂ ಹರ್ಷೀತ್ ರಾಣಾ ಆರಂಭದಲ್ಲೇ ಬಲವಾದ ಪೆಟ್ಟು ನೀಡಿದರು. ಆರಂಭಿಕ ಬ್ಯಾಟರ್ ಸೌಮ್ಯ ಸರ್ಕಾರ್ ಹಾಗೂ ನಾಯಕ ನಜ್ಮುಲ್ ಹುಸೇನ್ ಶಾಂತೊ ಅವರನ್ನು ಶೂನ್ಯಕ್ಕೆ ಔಟ್‌ ಮಾಡಿದರು.

ಬಳಿಕ ದಾಳಿಗಿಳಿದ ಅಕ್ಷರ್ ಪಟೇಲ್ ತನ್ಜೀದ್ ಹಸನ್ (25) ಹಾಗೂ ಮುಶ್ಫೀಕರ್ ರಹೀಮ್ (0) ಅವರನ್ನು ಪೆವಿಲಿಯನ್‌ಗೆ ಕಳಿಸಿದರು. ಪರಿಣಾಮ 8.3 ಓವರ್‌ಗಳಲ್ಲಿ 35 ರನ್ ಗಳಿಸವುಷ್ಟರಲ್ಲಿ ಪ್ರಮುಖ ಐದು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಒದಿದ್ದೀರಾ? ಅಗರ್ಕರ್‌ – ಗಂಭೀರ್‌ ನಡುವೆ ಭಿನ್ನಾಭಿಪ್ರಾಯ; ರಾಹುಲ್‌ ಪರ ನಿಂತ ಟೀಂ ಇಂಡಿಯಾ ಕೋಚ್‌

ಈ ಮಧ್ಯೆ ನಾಯಕ ರೋಹಿತ್ ಶರ್ಮಾ ಸುಲಭ ಕ್ಯಾಚ್ ಕೈ ಚೆಲ್ಲಿದ ಪರಿಣಾಮ ಸ್ಪಿನ್ನರ್ ಅಕ್ಷರ್ ಪಟೇಲ್‌ಗೆ ಹ್ಯಾಟ್ರಿಕ್ ವಿಕೆಟ್‌ ಗಳಿಸುವ ಅವಕಾಶ ವಂಚಿತವಾಯಿತು. ಇದರ ಸ್ಪಷ್ಟ ಲಾಭ ಪಡೆದ ಜಾಕರ್ ಅಲಿ, ತೌಹಿದ್ ಹೃದೋಯ್ ಅವರೊಂದಿಗೆ ತಂಡವನ್ನು ನಿಧಾನವಾಗಿ ಮುನ್ನಡೆಸಿದರು. ಹೃದೋಯ್ ಹಾಗೂ ಜಾಕರ್ ಆರನೇ ವಿಕೆಟ್‌ಗೆ 154 ರನ್‌ಗಳ ಜೊತೆಯಾಟವಾಡಿ ಸವಾಲಿನ ಮೊತ್ತ ಪೇ ರಿಸಲು ನೆರವಾದರು.

ಜಾಕರ್ 114 ಎಸೆತಗಳಲ್ಲಿ 4 ಬೌಂಡರಿಗಳೊಂದಿಗೆ 68 ರನ್ ಗಳಿಸಿದರೆ, ಹೃದೋಯ್ 118 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್‌ಗಳೊಂದಿಗೆ 100 ರನ್ ಪೇರಿಸಿದರು.

ಭಾರತದ ಪರ ಶಮಿ 53 ರನ್‌ ನೀಡಿ ಐದು ವಿಕೆಟ್ ಗಳಿಸಿದರು. ಅಲ್ಲದೆ ಏಕದಿನದಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 200 ವಿಕೆಟ್ ಸಾಧನೆ ಮಾಡಿರುವ ಶಮಿ, ಐಸಿಸಿ ಟೂರ್ನಿಗಳಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ಭಾರತೀಯ ಬೌಲರ್ ಎನಿಸಿದರು. ಇನ್ನುಳಿದಂತೆ ಹರ್ಷಿತ್‌ ರಾಣಾ 3 ಹಾಗೂ ಅಕ್ಷರ್‌ ಪಟೇಲ್‌ 2 ವಿಕೆಟ್‌ ಕಬಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...