ಕೆ ಎಲ್ ರಾಹುಲ್-ಶ್ರೇಯಸ್ ಅಯ್ಯರ್ ಭರ್ಜರಿ ಶತಕ: ನೆದರ್‌ಲ್ಯಾಂಡ್ಸ್‌ಗೆ ಗೆಲುವಿಗೆ ಬೃಹತ್ ಗುರಿ

Date:

ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ವಿಶ್ವಕಪ್ 2023ರ ಲೀಗ್‌ ಹಂತದಲ್ಲಿ ನೆದರ್‌ಲ್ಯಾಂಡ್ಸ್‌ ವಿರುದ್ಧ ಕೊನೆಯ ಪಂದ್ಯವನ್ನಾಡುತ್ತಿರುವ ಟೀಮ್ ಇಂಡಿಯಾ, ಕೆ ಎಲ್ ರಾಹುಲ್-ಶ್ರೇಯಸ್ ಅಯ್ಯರ್ ಭರ್ಜರಿ ಶತಕದ ನೆರವಿನಿಂದ ಗೆಲುವಿಗೆ 411 ರನ್‌ಗಳ ಬೃಹತ್ ಗುರಿ ನೀಡಿದೆ.

ಭಾರತದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಾದ ಶ್ರೇಯಸ್ ಅಯ್ಯರ್ ಔಟಾಗದೆ 128 ರನ್ ಹಾಗೂ ಕೆ.ಎಲ್ ರಾಹುಲ್ 102 ರನ್ ಗಳಿಸಿದರು. ಈ ಜೋಡಿ 4ನೇ ವಿಕೆಟ್‌ಗೆ 208 ರನ್‌ಗಳ ಜೊತೆಯಾಟ ನಡೆಸಿದ ಪರಿಣಾಮ ನಿಗದಿತ 50 ಓವರ್‌ಗಳಲ್ಲಿ ಟೀಮ್ ಇಂಡಿಯಾ, 4 ವಿಕೆಟ್ ಕಳೆದುಕೊಂಡು 410 ರನ್ ಗಳಿಸಿತು. ಆ ಮೂಲಕ ಟೀಮ್ ಇಂಡಿಯಾ ಈ ವರ್ಷದ ವಿಶ್ವಕಪ್‌ನಲ್ಲಿ ಅತ್ಯಧಿಕ ಸ್ಕೋರ್ ದಾಖಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಕದಿನ ವಿಶ್ವಕಪ್‌ನ ಇತಿಹಾಸದಲ್ಲಿ ಟಾಪ್-5 ಆಟಗಾರರು ಒಂದು ತಂಡಕ್ಕೆ 50ಕ್ಕಿಂತ ಹೆಚ್ಚು ರನ್ ಗಳಿಸಿದ್ದು ಇದೇ ಮೊದಲು. ರೋಹಿತ್ ಶರ್ಮಾ 61(54 ಎಸೆತ, 2 ಸಿಕ್ಸ್, 8 ಬೌಂಡರಿ) ಶುಭಮನ್ ಗಿಲ್ 51 (32 ಎಸೆತ, 4 ಸಿಕ್ಸ್, 3 ಬೌಂಡರಿ), ವಿರಾಟ್ ಕೊಹ್ಲಿ 51(56 ಎಸೆತ, 1 ಸಿಕ್ಸ್, 5 ಬೌಂಡರಿ), ಶ್ರೇಯಸ್ ಅಯ್ಯರ್ ಔಟಾಗದೆ 128*(94 ಎಸೆತ, 5 ಸಿಕ್ಸ್, 10 ಬೌಂಡರಿ) & ಕೆ ಎಲ್ ರಾಹುಲ್ 102(64 ಎಸೆತ, 4 ಸಿಕ್ಸ್, 11 ಬೌಂಡರಿ) ರನ್ ಗಳಿಸಿದರು. ಈ ಮೂಲಕ ಒಟ್ಟಾರೆ ವಿಶ್ವಕಪ್ ಟೂರ್ನಿಯಲ್ಲಿ ಟಾಪ್ 5 ಆಟಗಾರರ ಪೈಕಿ ಮೂವರು ಅರ್ಧಶತಕ ಗಳಿಸಿದರೆ, ಇಬ್ಬರು ಶತಕ ಗಳಿಸಿ ಇತಿಹಾಸ ನಿರ್ಮಿಸಿದರು.

ವಿಶ್ವಕಪ್‌ನಲ್ಲಿ ಮೊದಲ ಶತಕ ಬಾರಿಸಿದ ಶ್ರೇಯಸ್ ಅಯ್ಯರ್

ಇಂದಿನ ಪಂದ್ಯದಲ್ಲಿ 94 ಎಸೆತಗಳಲ್ಲಿ 5 ಸಿಕ್ಸ್, 10 ಬೌಂಡರಿಯ ನೆರವಿನೊಂದಿಗೆ ಔಟಾಗದೆ 128* ರನ್ ಗಳಿಸಿದ ಟೀಮ್ ಇಂಡಿಯಾದ ಬಲಗೈ ಬ್ಯಾಟರ್ ಶ್ರೇಯಸ್ ಅಯ್ಯರ್, ವಿಶ್ವಕಪ್‌ನಲ್ಲಿ ಮೊದಲ ಶತಕ ಬಾರಿಸಿದ ಸಾಧನೆ ಮಾಡಿದ್ದಾರೆ. ಈ ಶತಕದ ಮೂಲಕ ಶ್ರೇಯಸ್ ಅಯ್ಯರ್ ಏಕದಿನ ಕ್ರಿಕೆಟ್‌ನಲ್ಲಿ ತಮ್ಮ ನಾಲ್ಕನೇ ಶತಕ ಬಾರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...