WPLನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕನ್ನಡತಿ ಶ್ರೇಯಾಂಕಾ ಪಾಟೀಲ್

Date:

WPLನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 5 ವಿಕೆಟ್​ ಕಬಳಿಸುವ ಮೂಲಕ. ಈ ಐದು ವಿಕೆಟ್​ಗಳೊಂದಿಗೆ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

ನವಿ ಮುಂಬೈನಲ್ಲಿ ನಡೆದ WPLನ 9ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ 3.5 ಓವರ್​ ಎಸೆದ ಶ್ರೇಯಾಂಕಾ ಪಾಟೀಲ್ ಕೇವಲ 23 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಇದರೊಂದಿಗೆ WPL ನಲ್ಲಿ 5 ವಿಕೆಟ್ ಕಬಳಿಸಿದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆ 23 ವರ್ಷದ ಶ್ರೇಯಾಂಕಾ ಪಾಲಾಯಿತು.

ಅಷ್ಟೇ ಅಲ್ಲದೆ WPL ಇತಿಹಾಸದಲ್ಲೇ ಮೂರು ಬಾರಿ 4 ವಿಕೆಟ್ ಕಬಳಿಸಿದ ಬೌಲರ್ ಎಂಬ ಹಿರಿಮೆಗೂ ಪಾತ್ರರಾದರು. ಅಂದರೆ ಶ್ರೇಯಾಂಕಾ ಪಾಟೀಲ್ WPL ನಲ್ಲಿ ಮೂರಕ್ಕಿಂತ ಹೆಚ್ಚು ವಿಕೆಟ್ ಪಡೆದಿರುವುದು ಇದು ಮೂರನೇ ಬಾರಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ವಿಶ್ವವಿಜೇತನ ಟ್ರೋಫಿಗಳೆಲ್ಲ ಅಮ್ಮನ ಕಪಾಟಿನಲ್ಲಿ ಭದ್ರ: ಕೊಹ್ಲಿ ಯಶಸ್ಸಿನ ಹಿಂದಿನ ‘ಸರೋಜ’ ವಾತ್ಸಲ್ಯ

2024ರ WPLನಲ್ಲಿ ಶ್ರೇಯಾಂಕಾ ಪಾಟೀಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 4 ಓವರ್​ಗಳಲ್ಲಿ 26 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು. ಇದಾದ ಬಳಿಕ 2024ರ WPL ಫೈನಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದವೇ ಕೇವಲ 12 ರನ್ ನೀಡಿ 4 ವಿಕೆಟ್ ಪಡೆದಿದ್ದರು

ಇದೀಗ ಗುಜರಾತ್ ಜೈಂಟ್ಸ್ ವಿರುದ್ಧ 5 ವಿಕೆಟ್ ಉರುಳಿಸುವ ಮೂಲಕ WPL​ ಇತಿಹಾಸದಲ್ಲೇ ಮೂರು ಬಾರಿ 4 ಅಥವಾ 4 ಕ್ಕಿಂತ ವಿಕೆಟ್ ಪಡೆದ ಏಕೈಕ ಆಟಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಈ ಮೂಲಕ WPL ನಲ್ಲಿ ಟಗರು ಪುಟ್ಟಿ ಖ್ಯಾತಿಯ ಶ್ರೇಯಾಂಕಾ ಪಾಟೀಲ್ ಭರ್ಜರಿ ದಾಖಲೆಯೊಂದನ್ನು ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...