ಐಪಿಎಲ್‌ ಇತಿಹಾಸದಲ್ಲಿಯೇ ದಾಖಲೆಯ ಹೆಚ್ಚು ಬೆಲೆಗೆ ಮಾರಾಟವಾದ ರಿಷಬ್‌ ಪಂತ್‌, ಶ್ರೇಯಸ್ ಅಯ್ಯರ್

Date:

ಬಹುನಿರೀಕ್ಷಿತ ಐಪಿಎಲ್ ಮೆಗಾ ಹರಾಜು 2025 ಆರಂಭವಾಗಿದೆ. ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಮೆಗಾ ಹರಾಜು ನಡೆಯುತ್ತಿದೆ. ಹಾಲಿ ಚಾಂಪಿಯನ್ ಕೆಕೆಆರ್ ತಂಡದ ನಾಯಕರಾಗಿದ್ದ ಶ್ರೇಯಸ್ ಅಯ್ಯರ್ ಅವರು ಮೂರನೇ ಆಟಗಾರನಾಗಿ ಹರಾಜಿಗೆ ಬಂದರು.

ಪಂಜಾಬ್ ಕಿಂಗ್ಸ್ ಮತ್ತು ಕೆಕೆಆರ್ ಆರಂಭದಲ್ಲಿ ಪೈಪೋಟಿ ನಡೆಸಿತು. ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಕೂಡಾ ಬಿಡ್ಡಿಂಗ್ ನಡೆಸಿತು. ನಾಯಕನಿಗಾಗಿ ಎದುರು ನೋಡುತ್ತಿರುವ ಪಂಜಾಬ್ ಮತ್ತು ಡೆಲ್ಲಿ ತಂಡಗಳು ನಡುವೆ ಅಯ್ಯರ್ ಗಾಗಿ ಭಾರಿ ಪ್ರಯತ್ನಗಳು ನಡೆದವು. ಕೊನೆಗೆ ಬಲಗೈ ಆಟಗಾರ ಅಯ್ಯರ್ ದಾಖಲೆಯ ಬರೋಬ್ಬರಿ 26.75 ಕೋಟಿ ರೂ ಬೆಲೆಗೆ ಪಂಜಾಬ್ ಕಿಂಗ್ಸ್ ತಂಡದ ಪಾಲಾದರು.

ಮತ್ತೊಬ್ಬ ಸ್ಫೋಟಕ ಆಟಗಾರ ಹಾಗೂ ವಿಕೆಟ್‌ ಕೀಪರ್‌ ರಿಷಬ್‌ ಪಂತ್‌ ಅವರು ಲಖನೌ ಸೂಪರ್‌ ಜೈಂಟ್ಸ್‌ ತಂಡಕ್ಕೆ 27 ಕೋಟಿಗೆ ಮಾರಾಟವಾದರು. ಇದು ಐಪಿಎಲ್‌ ಇತಿಹಾಸದಲ್ಲಿ ಅತೀ ಹೆಚ್ಚು ಬೆಲೆಗೆ ಮಾರಾಟವಾದ ಆಟಗಾರರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಆಸ್ಟ್ರೇಲಿಯಾದಲ್ಲಿ ಹೊಸ ಇತಿಹಾಸ ಬರೆದ ರಾಹುಲ್ – ಜೈಸ್ವಾಲ್

ಈ ಮೂಲಕ ಅತಿ ಹೆಚ್ಚು ಹಣ ಪಡೆದ ಆಟಗಾರ ಎಂಬ ಐಪಿಎಲ್ ದಾಖಲೆ ಬರೆದರು. ಇದುವರೆಗೆ 24.75 ಕೋಟಿ ರೂ ಪಡೆದಿದ್ದ ಮಿಚೆಲ್ ಸ್ಟಾರ್ಕ್‌ ಅವರು ಐಪಿಎಲ್ ನ ದುಬಾರಿ ಆಟಗಾರನಾಗಿದ್ದರು.  ಈ ಬಾರಿಯ ಹರಾಜಿನ ಮೊದಲ ಆಟಗಾರನಾಗಿ ಅರ್ಶದೀಪ್ ಸಿಂಗ್ ಅವರು 18 ಕೋಟಿ ರೂ ಗೆ ಮತ್ತೆ ಪಂಜಾಬ್ ಕಿಂಗ್ಸ್ ಪಾಲಾದರು.

ಸನ್ ರೈಸರ್ಸ್‌ಹೈದರಾಬಾದ್ ನಡೆಸಿದ ಬಿಡ್ಡಿಂಗ್‌ಗೆ ಪಂಜಾಬ್ ಆರ್‌ಎಂಟಿ ಕಾರ್ಡ್‌ ಖರೀದಿಸಿ ವೇಗಿಯನ್ನು ತಮ್ಮಲ್ಲೇ ಉಳಿಸಿಕೊಂಡಿತು. ಆ ಬಳಿಕ ಮುಂಬಯಿ ಹಾಗೂ ಗುಜರಾತ್ ನಡುವೆ ಪೈಪೋಟಿ ನಡೆಯಿತು. 10 ಕೋಟಿ ಅಧಿಕ ಬೆಲೆಗೆ ಕಗಿಸೋ ಅವರ ಬೆಲೆ ಏರಿಕೆ ಆಯಿತು. ಕೊನೆಯದಾಗಿ 10.75 ಕೋಟಿ ರೂಪಾಯಿಗೆ ಗುಜರಾತ್ ಟೈಟಾನ್ಸ್ ತಂಡ ರಬಾಡ ಅವರನ್ನು ಖರೀದಿ ಮಾಡಿತು.

ಮತ್ತೊಬ್ಬ ಟೀಂ ಇಂಡಿಯಾ ಆಟಗಾರ ಕೆ ಎಲ್‌ ರಾಹುಲ್‌ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ 14 ಕೋಟಿಗೆ ಹರಾಜಿನಲ್ಲಿ ಖರೀದಿಸಿತು.

ಇಂಗ್ಲೆಂಡ್‌ನ ಜಾಸ್‌ ಬಟ್ಲರ್‌ ಅವರು ಗುಜರಾತ್‌ ಟೈಟಾನ್‌ಗೆ 15.75 ಕೋಟಿ ರೂ.ಗೆ ಹರಾಜಾದರು. ಆಸೀಸ್‌ ಬೌಲರ್‌ ಮಿಷಲ್‌ ಸ್ಟಾರ್ಕ್‌ ಡೆಲ್ಲಿ ಕ್ಯಾಪಿಟಲ್‌ಗೆ 11.75 ಕೋಟಿ ರೂ.ಗೆ ಹರಾಜಾದರು. ಭಾರತೀಯ ಬೌಲರ್‌ ಮೊಹಮ್ಮದ್‌ ಶಮಿ ಹೈದರಾಬಾದ್‌ ತಂಡಕ್ಕೆ 10 ಕೋಟಿಗೆ ಹರಾಜಾದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...