ಶ್ರೇಯಸ್‌ ಅಯ್ಯರ್‌ ಮುಂಬೈ ತಂಡದ ನಾಯಕನಾಗಿ ನೇಮಕ

Date:

ಮುಂಬೈ ಕ್ರಿಕೆಟ್ ಸಂಸ್ಥೆಯ ಹಿರಿಯ ಆಯ್ಕೆ ಸಮಿತಿಯು ಸೈಯದ್ ಮುಷ್ತಾಕ್ ಅಲಿ ಟ್ರೋಫಿಗಾಗಿ ಮುಂಬೈ ಟಿ20 ತಂಡದ ನಾಯಕರಾಗಿ ಶ್ರೇಯಸ್ ಅಯ್ಯರ್ ಅವರನ್ನು ನೇಮಿಸಿದೆ.

2025 ರ ಐಪಿಎಲ್​ನ ಮೆಗಾ ಹರಾಜು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಈ ಹರಾಜಿನಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್‌ ಶ್ರೇಯಸ್ ಅಯ್ಯರ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಆವೃತ್ತಿಯಲ್ಲಿ ಶ್ರೇಯಸ್ ಅಯ್ಯರ್ ತಮ್ಮ ನಾಯಕತ್ವದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಗೆಲ್ಲಿಸಿಕೊಟ್ಟಿದ್ದರು. ಆದರೆ ಈ ಬಾರಿ ಕೆಕೆಆರ್ ಅವರನ್ನು ತಂಡದಲ್ಲಿ ಉಳಿಸಿಕೊಂಡಿಲ್ಲ.

ಐಪಿಎಲ್‌ನಲ್ಲಿ ಅಯ್ಯರ್ ಅವರು ನಾಯಕತ್ವದ ಉತ್ತಮ ದಾಖಲೆ ಹೊಂದಿದ್ದಾರೆ. ಆದ್ದರಿಂದ ಮೆಗಾ ಹರಾಜಿನಲ್ಲಿ ಅವರಿಗೆ ಹೆಚ್ಚಿನ ಬೇಡಿಕೆಯಿದೆ. ಇದಕ್ಕೆ ಪೂರಕವಾಗಿ ಅನೇಕ ತಂಡಗಳು ಈ ಬಾರಿ ಹೊಸ ನಾಯಕರನ್ನು ಹುಡುಕುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? 428 ರನ್‌ ಸಿಡಿಸಿ ಲಾರಾ ದಾಖಲೆಗೆ ಹತ್ತಿರವಾದ ಹರಿಯಾಣ ಬ್ಯಾಟರ್

ಮುಂಬೈ ಕ್ರಿಕೆಟ್ ಸಂಸ್ಥೆಯ (ಎಂಸಿಎ) ಹಿರಿಯ ಆಯ್ಕೆ ಸಮಿತಿಯು ಸೈಯದ್ ಮುಷ್ತಾಕ್ ಅಲಿ ಟ್ರೋಫಿಗಾಗಿ ಮುಂಬೈ ಟಿ20 ತಂಡದ ನಾಯಕರಾಗಿ ಶ್ರೇಯಸ್ ಅಯ್ಯರ್ ಅವರನ್ನು ನೇಮಿಸಿದೆ. ಅಯ್ಯರ್ ಅವರ ಯಶಸ್ವಿ ನಾಯಕತ್ವವನ್ನು ಗಮನದಲ್ಲಿಟ್ಟುಕೊಂಡು ಮುಂಬೈ ಮುಖ್ಯವಾದ ಜವಾಬ್ದಾರಿಯನ್ನು ನೀಡಿದೆ.

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಇದೇ ನವೆಂಬರ್ 23 ರಿಂದ ಪ್ರಾರಂಭವಾಗಲಿದೆ. ಕಳೆದ ಬಾರಿ ಈ ಟೂರ್ನಿಯಲ್ಲಿ ಅಜಿಂಕ್ಯ ರಹಾನೆ, ಮುಂಬೈ ತಂಡವನ್ನು ಮುನ್ನಡೆಸಿದ್ದರು. ಇದೀಗ ರಹಾನೆ ಬದಲಿಗೆ ಅಯ್ಯರ್ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಅಜಿಂಕ್ಯ ರಹಾನೆ ಈಗ ಅಯ್ಯರ್ ನಾಯಕತ್ವದಲ್ಲಿ ಆಡಲಿದ್ದಾರೆ. ಫಿಟ್ನೆಸ್ ಕಾರಣಗಳಿಂದ ತಂಡದಿಂದ ಹೊರಬಿದ್ದಿದ್ದ ಪೃಥ್ವಿ ಶಾ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಆಡಲಿದ್ದಾರೆ.

ಮೆಗಾ ಹರಾಜಿನಲ್ಲಿ ಶ್ರೇಯಸ್ ಅಯ್ಯರ್ ತಮ್ಮ ಮೂಲ ಬೆಲೆಯನ್ನು 2 ಕೋಟಿ ರೂ.ಗೆ ನಿಗದಿಪಡಿಸಿದ್ದು, ಅವರ ಹೆಸರು ಮೊದಲ ಸೆಟ್‌ನಲ್ಲಿಯೇ ಕಾಣಿಸಿಕೊಳ್ಳಲಿದೆ. ಅಂದರೆ ಮೆಗಾ ಹರಾಜಿನ ಆರಂಭದಲ್ಲಿಯೇ ಅಯ್ಯರ್‌ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಶ್ರೇಯಸ್ ಅಯ್ಯರ್ ಐಪಿಎಲ್‌ನಲ್ಲಿ ಇದುವರೆಗೆ ಒಟ್ಟು 115 ಪಂದ್ಯಗಳನ್ನು ಆಡಿದ್ದು, ಈ ಅವಧಿಯಲ್ಲಿ ಅವರು 32.24ರ ಸರಾಸರಿಯಲ್ಲಿ 3127 ರನ್ ಗಳಿಸಿದ್ದಾರೆ. ಅಯ್ಯರ್ ತಮ್ಮ ನಾಯಕತ್ವದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೆ ಏರಿಸುವುದರ ಜೊತೆಗೆ, ದೆಹಲಿ ತಂಡವನ್ನು ಒಮ್ಮೆ ಫೈನಲ್‌ಗೆ ಕೊಂಡೊಯ್ದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...