ಐಪಿಎಲ್ 2024 | ಕೊಹ್ಲಿ ದಾಖಲೆ ಮುರಿದ ಗಿಲ್; ಬಟ್ಲರ್ ಹಿಂದಿಕ್ಕಿದ ಸ್ಯಾಮ್ಸನ್

Date:

ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್) ಟೂರ್ನಿಯ ನಿನ್ನೆ(ಏ.10) ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್ ತಂಡದ ನಾಯಕ ಶುಭಮನ್‌ ಗಿಲ್‌ ಆರ್‌ಸಿಬಿಯ ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ.

ಶುಭಮನ್‌ ಗಿಲ್‌ ಅರ್ಧಶತಕ ಸಿಡಿಸುವ ಮೂಲಕ ಐಪಿಎಲ್‌ನಲ್ಲಿ 3000 ರನ್‌ಗಳನ್ನು ಪೂರ್ಣಗೊಳಿಸಿದ್ದು, ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿಯ ದಾಖಲೆಯನ್ನು ಮುರಿದಿದ್ದಾರೆ.

ಆ ಮೂಲಕ ಶುಭಮನ್‌ ಗಿಲ್‌ ಅತ್ಯಂತ ಕಿರಿಯ ವಯಸ್ಸಿನಲ್ಲಿ ಈ ದಾಖಲೆ ಬರೆದ ಬ್ಯಾಟ್ಸ್‌ಮನ್‌ ಎನಿಸಿಕೊಳ್ಳುವ ಮೂಲಕ ವಿರಾಟ್‌ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. 26ನೇ ವರ್ಷ, 816 ದಿನಗಳ ವಯಸ್ಸಿನಲ್ಲಿ ಕೊಹ್ಲಿ 3000 ಐಪಿಎಲ್ ರನ್‌ಗಳನ್ನು ಪೂರ್ಣಗೊಳಿಸಿದ್ದರು. ಇದೀಗ ಗಿಲ್‌ ತನ್ನ 24ನೇ ವಯಸ್ಸಿನಲ್ಲಿ ಇಷ್ಟು ರನ್‌ಗಳನ್ನು ಕಲೆ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಭಮನ್ ಗಿಲ್‌ 3000 ಐಪಿಎಲ್‌ ರನ್‌ಗಳನ್ನು 94 ಇನಿಂಗ್ಸ್‌ಗಳಲ್ಲಿ ಗಳಿಸಿದ್ದಾರೆ. ಕೆಎಲ್‌ ರಾಹುಲ್‌ ಬಳಿಕ ಎರಡನೇ ಅತ್ಯಂತ ವೇಗವಾಗಿ ಗಿಲ್‌ ಈ ಸಾಧನೆ ಮಾಡಿದ್ದಾರೆ.

ಜೈಪುರದ ಸವಾಯ್‌ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್ ನೀಡಿದ್ದ 197 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಗುಜರಾತ್‌ ಟೈಟನ್ಸ್ ಪರ ಅತ್ಯುತ್ತಮ ಬ್ಯಾಟ್‌ ಮಾಡಿದ ಶುಭಮನ್ ಗಿಲ್‌ ಸ್ಪೋಟಕ ಅರ್ಧಶತಕವನ್ನು ಸಿಡಿಸಿದರು. ಎದುರಿಸಿದ ಕೇವಲ 44 ಎಸೆತಗಳಲ್ಲಿ 6 ಬೌಂಡರಿಗಳು ಹಾಗೂ ಎರಡು ಸಿಕ್ಸರ್‌ಗಳ ಮೂಲಕ 72 ರನ್‌ಗಳನ್ನು ಪೇರಿಸಿದರು.

3000 ಐಪಿಎಲ್‌ ರನ್‌ ಗಳಿಸಿ ಅತ್ಯಂತ ಕಿರಿಯ ಆಟಗಾರರು

ಶುಭಮನ್‌ ಗಿಲ್‌ : 24 ವರ್ಷ, 215 ದಿನಗಳು

ವಿರಾಟ್‌ ಕೊಹ್ಲಿ : 26 ವರ್ಷ, 186 ದಿನಗಳು

ಸಂಜು ಸ್ಯಾಮ್ಸನ್‌ : 26 ವರ್ಷ 320 ದಿನಗಳು

ಸುರೇಶ್‌ ರೈನಾ : 27 ವರ್ಷ 161 ದಿನಗಳು

ರೋಹಿತ್‌ ಶರ್ಮಾ : 27 ವರ್ಷ, 342 ದಿನಗಳು

ಬಟ್ಲರ್ ದಾಖಲೆ ಹಿಂದಿಕ್ಕಿದ ಸ್ಯಾಮ್ಸನ್

ಗುಜರಾತ್​ ಟೈಟನ್ಸ್​ ವಿರುದ್ಧ ಅಬ್ಬರದ ಬ್ಯಾಟಿಂಗ್​ ಮಾಡಿದ ರಾಜಸ್ಥಾನ ರಾಯಲ್ಸ್​ ತಂಡದ ನಾಯಕ ಸಂಜು ಸ್ಯಾಮ್ಸನ್ ಇಂಡಿಯನ್​ ಪ್ರೀಮಿಯರ್​ ಲೀಗ್​ನಲ್ಲಿ ಹೊಸ ಮೈಲಿಗಲ್ಲು ತಲುಪಿದ್ದಾರೆ.

ರಾಜಸ್ಥಾನ ರಾಯಲ್ಸ್​ ಪರ ಈವರೆಗೆ ಅತಿ ಹೆಚ್ಚು ಅರ್ಧ ಶತಕಗಳನ್ನು ದಾಖಲಿಸಿರುವ ಆಟಗಾರ ಎಂಬ ಹೆಗ್ಗಳಿಕೆಗೆ ಸಂಜು ಸಾಮ್ಸನ್​ ಪಾತ್ರರಾಗಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ತಮ್ಮ ಉತ್ತಮ ಆಟ ಮುಂದುವರೆಸಿರುವ ಸಂಜು ಸಾಮ್ಸನ್​, ಆಂಗ್ಲ ಬ್ಯಾಟರ್​ ಜಾಸ್​ ಬಟ್ಲರ್​​ ಅವರನ್ನು ಹಿಂದಿಕ್ಕಿದ್ದಾರೆ.

ಇದುವರೆಗೆ ರಾಜಸ್ಥಾನದ ಪರ 131 ಪಂದ್ಯಗಳನ್ನು ಆಡಿರುವ ಸಂಜು 31.45 ಸರಾಸರಿಯಲ್ಲಿ ಮತ್ತು 139.86 ಸ್ಟ್ರೈಕ್ ರೇಟ್‌ನಲ್ಲಿ 3 ಶತಕ ಮತ್ತು 23 ಅರ್ಧಶತಕಗಳೊಂದಿಗೆ 3,649 ರನ್ ಗಳಿಸಿದ್ದಾರೆ. ಈ ಅಂಕಿ ಅಂಶಗಳನ್ನು ಪರಿಗಣಿಸಿದಾಗ ಅರ್ಧ ಶತಕ ದಾಖಲಿಸಿರುವ ಪಟ್ಟಿಯಲ್ಲಿ ಸಂಜು ಮೊದಲಿಗರಾಗಿದ್ದಾರೆ. ಇನ್ನೊಂದಡೆ, ಬಟ್ಲರ್ ಆರ್​ಆರ್​ ಪರವಾಗಿ 25 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಇದರಲ್ಲಿ ಆರು ಶತಕಗಳು ಮತ್ತು 18 ಅರ್ಧಶತಕಗಳು ಸೇರಿವೆ. ಹಾಗಾಗಿ ಎರಡನೇ ಸ್ಥಾನದಲ್ಲಿ ಬಟ್ಲರ್ ​ಇದ್ದಾರೆ.

ಗುಜರಾತ್ಗೆ 3 ವಿಕೆಟ್‌ ರೋಚಕ ಜಯ

ಶುಭಮನ್‌ ಗಿಲ್‌ (72) ಅರ್ಧಶತಕ ಹಾಗೂ ರಶೀದ್‌ ಖಾನ್‌ (24 ರನ್‌, 18ಕ್ಕೆ 1) ಆಲ್‌ರೌಂಡರ್‌ ಪ್ರದರ್ಶನದ ಬಲದಿಂದ ಗುಜರಾತ್ ಟೈಟನ್ಸ್ ತಂಡ 2024ರ ಇಂಡಿಯನ್ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್ ವಿರುದ್ಧ ಪಂದ್ಯದ ಕೊನೆಯ ಚೆಂಡಿನಲ್ಲಿ 3 ವಿಕೆಟ್‌ ರೋಚಕ ಗೆಲುವು ಪಡೆಯಿತು. ಆ ಮೂಲಕ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...