ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್: 2ನೇ ಇನಿಂಗ್ಸ್‌ನಲ್ಲಿ ಶುಭಮನ್ ಗಿಲ್ ಶತಕ, ಭಾರತಕ್ಕೆ 363 ರನ್ ಮುನ್ನಡೆ

Date:

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನ ಎರಡನೇ ಇನಿಂಗ್ಸ್‌ನಲ್ಲಿ ಉದಯೋನ್ಮುಖ ಆಟಗಾರ ಶುಭಮನ್‌ ಗಿಲ್ ಅವರ ಆಕರ್ಷಕ ಶತಕದೊಂದಿಗೆ ಟೀಂ ಇಂಡಿಯಾ ಪಾನೀಯ ವಿರಾಮದ ವೇಳೆಗೆ 363 ರನ್‌ ಮುನ್ನಡೆ ಪಡೆದಿದೆ.

ವಿಶಾಖಪಟ್ಟಣಂನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ 5 ಓವರ್‌ಗಳಲ್ಲಿ 28 ರನ್‌ಗಳೊಂದಿಗೆ ಮೂರನೇ ದಿನದಾಟ ಆರಂಭಿಸಿದ ಭಾರತ ತಂಡ ಏಳನೇ ಓವರ್‌ನಲ್ಲಿಯೇ ನಾಯಕ ರೋಹಿತ್ ಶರ್ಮಾ ಅವರ ವಿಕೆಟ್ ಕಳೆದುಕೊಂಡಿತು. 13 ರನ್‌ ಗಳಿಸಿದ್ದ ರೋಹಿತ್ ಆಂಡರ್‌ಸನ್‌ ಬೌಲಿಂಗ್‌ನಲ್ಲಿ ಬೌಲ್ಡ್‌ ಆದರು.

ಮೊದಲ ಇನಿಂಗ್ಸ್‌ನಲ್ಲಿ ಚೊಚ್ಚಲ ದ್ವಿಶತಕ ಬಾರಿಸಿದ್ದ ಯಶಸ್ವಿ ಜೈಸ್ವಾಲ್ 17 ರನ್‌ ಗಳಿಸಿದ್ದಾಗ ಆಂಡರ್‌ಸನ್‌ ಬೌಲಿಂಗ್‌ನಲ್ಲಿ ರೂಟ್‌ಗೆ ಕ್ಯಾಚಿತ್ತು ಔಟಾದರು. ನಂತರ ಶ್ರೇಯಸ್‌ ಅಯ್ಯರ್ ಹಾಗೂ ಶುಭಮನ್‌ ಗಿಲ್ ಜೋಡಿ ಮೂರನೇ ವಿಕೆಟ್ ಜೊತೆಯಾಟಕ್ಕೆ 81 ರನ್ ಪೇರಿಸಿದರು. ಶ್ರೇಯಸ್ 29 ರನ್ ಗಳಿಸಿ ಹಾರ್ಟ್ಲಿ ಬೌಲಿಂಗ್‌ನಲ್ಲಿ ಪೆವಿಲಿಯನ್‌ಗೆ ತೆರಳಿದ ನಂತರ ಮೊದಲ ಟೆಸ್ಟ್ ಆಡುತ್ತಿರುವ ರಜತ್ ಪಾಟೀದಾರ್ ಕೂಡ ಹೆಚ್ಚು ಹೊತ್ತು ನಿಲ್ಲದೆ 9 ರನ್‌ ಗಳಿಸಿ ಔಟಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಯ ಕಂಡುಕೊಂಡ ಶುಭಮನ್

ಇತ್ತೀಚಿನ ಕೆಲವು ಇನಿಂಗ್ಸ್‌ಗಳಲ್ಲಿ ಕಳಪೆಯಾಟದಿಂದ ರನ್‌ಗಳ ಬರ ಎದುರಿಸುತ್ತಿದ್ದ ಉದಯೋನ್ಮುಖ ಆಟಗಾರ ಶುಭಮನ್‌ ಗಿಲ್ ಇಂಗ್ಲೆಂಡ್ ವಿರುದ್ಧದ ಎರಡನೇ ಇನಿಂಗ್ಸ್‌ನಲ್ಲಿ ಆಕರ್ಷಕ ಶತಕ ಬಾರಿಸಿ ಭಾರತದ ಮುನ್ನಡೆಗೆ ಕಾರಣರಾದರು. 141 ಚೆಂಡುಗಳನ್ನು ಎದುರಿಸಿ 11 ಬೌಂಡರಿ ಹಾಗೂ ಎರಡು ಭರ್ಜರಿ ಸಿಕ್ಸರ್‌ಗಳೊಂದಿಗೆ  104 ರನ್‌ ಬಾರಿಸಿದರು. ಇದು ಗಿಲ್‌ ಅವರ ಟೆಸ್ಟ್ ವೃತ್ತಿ ಜೀವನದ ಮೂರನೇ ಟೆಸ್ಟ್ ಶತಕವಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪೇ?

ಶುಭಮನ್‌ ಜೊತೆ ಜೊತೆಯಾಟವಾಡಿದ ಆಲ್‌ರೌಂಡರ್‌ ಅಕ್ಸರ್‌ ಪಟೇಲ್ ಅಜೇಯ 45 ರನ್, ಶ್ರೀಕರ್ ಭರತ್ (2) ಗಳಿಸಿ ಬ್ಯಾಟ್‌ ಮಾಡುತ್ತಿದ್ದಾರೆ. ಪಾನೀಯ ವಿರಾಮದ ವೇಳೆಗೆ ಟೀಂ ಇಂಡಿಯಾ 60 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 220 ರನ್ ಗಳಿಸಿ ಆಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...