ಏಕದಿನ ವಿಶ್ವಕಪ್ 2023 | ಸ್ಟಾರ್ ಆಟಗಾರ ಶುಭಮನ್ ಗಿಲ್‌ಗೆ ಡೆಂಗ್ಯೂ; ಆಸಿಸ್ ವಿರುದ್ಧ ಅಶ್ವಿನ್ ಕಣಕ್ಕೆ!

Date:

ವಿಶ್ವಕಪ್ ಮೊದಲ ಪಂದ್ಯ ಆರಂಭವಾಗುವುದಕ್ಕೂ ಮುನ್ನವೇ ಭಾರತಕ್ಕೆ ಆಘಾತಕಾರಿ ಸುದ್ದಿ ಎದುರಾಗಿದೆ. ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ದ ತನ್ನ ಮೊದಲ ಪಂದ್ಯವನ್ನು ಆಡಲಿದ್ದು, ಶುಭಮನ್ ಗಿಲ್ ಅನಾರೋಗ್ಯ ಸಮಸ್ಯೆ ಟೀಂ ಇಂಡಿಯಾಗೆ ಸಮಸ್ಯೆಯಾಗಿದೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ಶುಭಮನ್ ಅವರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಇದೀಗ ಅವರಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತದ ಮೊದಲ ಪಂದ್ಯದಲ್ಲಿ ಶುಭಮನ್ ಗಿಲ್ ಮೈದಾನಕ್ಕೆ ಇಳಿಯುವುದು ಅನುಮಾನ ಎನ್ನಲಾಗಿದೆ.

ಚೆನ್ನೈಗೆ ಬಂದಿಳಿದ ನಂತರ ಶುಭ್‌ಮನ್‌ ಗಿಲ್‌ಗೆ ವಿಪರೀತ ಜ್ವರ ಕಾಡಿತ್ತು. ಈ ಹಿನ್ನೆಲೆಯಲ್ಲಿ ಗಿಲ್ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಂದು ಗಿಲ್ ಅವರನ್ನು ದೈಹಿಕ ಪರೀಕ್ಷೆಗೆ ಒಳಪಡಿಸಲಾಗುವುದು. ಇದಾದ ನಂತರವಷ್ಟೇ ಗಿಲ್ ಆರಂಭಿಕ ಪಂದ್ಯದಲ್ಲಿ ಭಾಗವಹಿಸುತ್ತಾರೆಯೋ ಇಲ್ಲವೋ ಎನ್ನುವುದು ತಿಳಿಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡೆಂಗ್ಯೂ ರೋಗಿಗಳು ಗುಣಮುಖರಾಗಲು 7 ರಿಂದ 10 ದಿನಗಳು ತೆಗೆದುಕೊಳ್ಳುತ್ತದೆ. ಇದು ಸಾಮಾನ್ಯ ಜ್ವರ ಅಲ್ಲ. ವೈರಲ್ ಜ್ವರ ಆಗಿದ್ದರೆ, ಆಂಟಿ ಬಯೋಟಿಕ್‌ಗಳನ್ನೂ ತೆಗೆದುಕೊಂಡು ಆಟಗಾರನನ್ನು ಮೈದಾನಕ್ಕೆ ಇಳಿಸಬಹುದು. ಆದರೆ ಡೆಂಗ್ಯೂ ಹಾಗಲ್ಲ. ಈಗ ಗಿಲ್ ಆಡುತ್ತಾರೆಯೋ ಇಲ್ಲವೋ ಎನ್ನುವುದು ವೈದ್ಯಕೀಯ ತಂಡ ನಿರ್ಧರಿಸಲಿದೆ.

ಈ ಸುದ್ದಿ ಓದಿದ್ದೀರಾ? ಏಕದಿನ ವಿಶ್ವಕಪ್ 2023 | ಬೆಂಗಳೂರಿನ ತಮ್ಮ ಪೂರ್ವಜರ ಬಗ್ಗೆ ಮೆಲುಕು ಹಾಕಿದ ರಚಿನ್ ರವೀಂದ್ರ

ಗಿಲ್ ಅವರು ಮೊದಲ ಪಂದ್ಯದಿಂದ ಹೊರಗುಳಿದರೆ ಕೆಎಲ್ ರಾಹುಲ್ ಅಥವಾ ಇಶಾನ್ ಕಿಶನ್, ರೋಹಿತ್ ಶರ್ಮಾ ಜೊತೆ ಒಪನರ್ ಆಗಿ ಬರುವ ಸಾಧ್ಯತೆ ಇದೆ. ಶುಭಮನ್ ಗಿಲ್ ಭಾರತ ತಂಡದ ಅತ್ಯಂತ ವಿಶ್ವಾಸಾರ್ಹ ಆಟಗಾರನಾಗಿದ್ದು, ಈ ವರ್ಷ ಏಕದಿನ ಪಂದ್ಯಗಳಲ್ಲಿ 70 ಕ್ಕೂ ಹೆಚ್ಚು ರನ್‌ಗಳ ಸರಾಸರಿ ಹೊಂದಿದ್ದಾರೆ. ಅಲ್ಲದೆ ಅತ್ಯುತ್ತಮ ಆರಂಭಿಕ ಬ್ಯಾಟ್ಸ್ ಮ್ಯಾನ್‌ಗಳ ಪಟ್ಟಿಯಲ್ಲಿ ನಿಲ್ಲುತ್ತಾರೆ.

ಮೊದಲ ಪಂದ್ಯಕ್ಕೆ ಅಶ್ವಿನ್ ಲಭ್ಯ ಸಾಧ್ಯತೆ

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಅಶ್ವಿನ್ ಅವರು ರವೀಂದ್ರ ಜಡೇಜ, ಕುಲದೀಪ್ ಜೊತೆಗೆ ಮೂರನೇ ಸ್ಪಿನ್ನರ್ ಆಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಡೇವಿಡ್ ವಾರ್ನರ್ ಮತ್ತು ಸ್ಟೀವ್ ಸ್ಮಿತ್ ವಿರುದ್ಧ ಅವರ ದಾಖಲೆ ಉತ್ತಮವಾಗಿರುವುದೂ ಅವರಿಗೆ ಆಯ್ಕೆಗೆ ಪೂರಕ ಆಗಬಲ್ಲದು. ಅಶ್ವಿನ್ ಟೆಸ್ಟ್‌ ಪಂದ್ಯಗಳಲ್ಲಿ 11 ಬಾರಿ ಡೇವಿಡ್ ವಾರ್ನರ್‌ ಅವರ ವಿಕೆಟ್ ಪಡೆದಿದ್ದಾರೆ.

ಏಕದಿನ ಪಂದ್ಯಗಳಲ್ಲಿ ಸ್ಪೋಟಕ ಆಟಗಾರ ಸ್ಮಿತ್ ಕೂಡ ಟೆಸ್ಟ್ ಪಂದ್ಯಗಳಲ್ಲಿ ಅಶ್ವಿನ್ ಅವರ ಬೌಲಿಂಗ್‌ನಲ್ಲಿ ಆಡಲು ಪರದಾಡಿದ್ದಾರೆ. ಹೀಗಾಗಿ ಶಾರ್ದೂಲ್ ಠಾಕೂರ್ ಬದಲು ಅಶ್ವಿನ್ ಅವರು ಅವಕಾಶ ಪಡೆದರೆ ಅಚ್ಚರಿ ಇಲ್ಲ. ಮಾರ್ಪಡಿಸಿದ ತಂಡದಲ್ಲಿ ವಿಶ್ವಕಪ್‌ ಟೂರ್ನಿಗೆ ಅಕ್ಷರ್ ಪಟೇಲ್ ಬದಲು ವಿಶ್ವಕಪ್ ತಂಡದಲ್ಲಿ ಆರ್‌ ಅಶ್ವಿನ್ ಅವಕಾಶ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...