ಕೊಹ್ಲಿ ರೆಕಾರ್ಡ್‌ ಮುರಿದು, ಹೊಸ ದಾಖಲೆ ಬರೆದ ಶುಭ್​ಮನ್ ಗಿಲ್

Date:

ಹಲವರು ದಾಖಲೆಗಳನ್ನು ಬರೆಯುತ್ತಾರೆ. ಆ ದಾಖಲೆಗಳನ್ನು ಮತ್ತೊಬ್ಬರು ಮುರಿಯುತ್ತಾರೆ. ಕೆಲವು ದಾಖಲೆಗಳು ಐತಿಹಾಸಿಕವಾಗಿ ಉಳಿದುಕೊಂಡೂ ಬಿಡುತ್ತವೆ. ಕ್ರಿಕೆಟ್‌ ಲೋಕದಲ್ಲಿಯೂ ಅಂತಹ ದಾಖಲೆಗಳನ್ನು ಹಲವರು ಬರೆದಿದ್ದಾರೆ ಮತ್ತು ಮುರಿದಿದ್ದಾರೆ. ಇದೀಗ, ವಿರಾಟ್ ಕೋಹ್ಲಿ ಅವರ ದಾಖಲೆಯೊಂದನ್ನು ಶುಭಮನ್‌ ಗಿಲ್ ಮುರಿದ್ದು, ದಾಖಲೆಯಲ್ಲಿ ತಮ್ಮ ಹೆಸರು ಬರೆದುಕೊಂಡಿದ್ದಾರೆ.

ಇಂಗ್ಲೆಂಡ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್-ಇಂಡಿಯಾ ಮೂರನೇ ಟೆಸ್ಟ್ ಪಂದ್ಯದಲ್ಲಿ ಗಿಲ್ ಹೊಸ ದಾಖಲೆ ಬರೆದಿದ್ದಾರೆ. ಈ ಟೆಸ್ಟ್‌ ಸರಣಿಯಲ್ಲಿ ಒಟ್ಟು 601 ರನ್‌ ಗಳಿಸಿರುವ ಗಿಲ್, ಟೆಸ್ಟ್‌ ಸರಣಿಯೊಂದರಲ್ಲಿ ಅಧಿಕ ರನ್ ಗಳಿಸಿದ ಕ್ರಿಕೆಟಿಗರ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಆ ಮೂಲಕ, ವಿರಾಟ್‌ ಕೊಹ್ಲಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಈವರೆಗೆ, ಟೆಸ್ಟ್‌ ಸರಣಿಯಲ್ಲಿ ಅಧಿಕ ರನ್ ದಾಖಲಿಸಿದವರ ಪಟ್ಟಿಯಲ್ಲಿ ಕೊಹ್ಲಿ ಹೆಸರು ಅಗ್ರಸ್ಥಾನದಲ್ಲಿತ್ತು. 2018ರಲ್ಲಿ ಇದೇ ಇಂಗ್ಲೆಂಡ್‌ ವಿರುದ್ಧ ನಡೆದಿದ್ದ ಟೆಸ್ಟ್ ಸರಣಿಯಲ್ಲಿ ನಾಯಕನಾಗಿ ಕಣಕ್ಕಿಳಿದಿದ್ದ ಕೊಹ್ಲಿ 5 ಪಂದ್ಯಗಳಲ್ಲಿ 593 ರನ್​ ಕಲೆಹಾಕಿದ್ದರು. ದಾಖಲೆ ಬರೆದಿದ್ದರು. ಇದೀಗ, ಗಿಲ್ ಅವರು ಕೇವಲ 3 ಪಂದ್ಯಗಳಲ್ಲಿಯೇ ಕೊಹ್ಲಿ ಅವರ ದಾಖಲೆಯನ್ನು ಮುರಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾದ ಟೆಸ್ಟ್‌ ನಾಯಕನಾಗಿ ಕಣಕ್ಕಿಳಿದ ಶುಭ್​ಮನ್ ಗಿಲ್ 3 ಪಂದ್ಯಗಳಲ್ಲಿ 5 ಇನಿಂಗ್ಸ್​ ಆಡಿದ್ದಾರೆ. 2 ಶತಕ ಹಾಗೂ ಒಂದು ದ್ವಿಶತಕದೊಂದಿಗೆ ಒಟ್ಟು 601 ರನ್ ಕಲೆಹಾಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...