ಟೆಸ್ಟ್ ಕ್ರಿಕೆಟ್ | ಐದನೇ ಶತಕ ಬಾರಿಸಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಶುಭ್‌ಮನ್ ಗಿಲ್

Date:

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್​ಮನ್ ಗಿಲ್ ಭರ್ಜರಿ ಶತಕ ಸಿಡಿಸಿದ್ದು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ದ್ವಿತೀಯ ಸ್ಥಾನಕ್ಕೆ ಏರಿದ್ದಾರೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗಿಲ್ 161 ಎಸೆತಗಳಲ್ಲಿ ಐದನೇ ಟೆಸ್ಟ್ ಶತಕವನ್ನು ಗಳಿಸಿದರು. ಈ ಮೂಲಕ ವಿರಾಟ್ ಕೊಹ್ಲಿ, ರಿಷಬ್ ಪಂತ್ ಮತ್ತು ಮಯಾಂಕ್ ಅಗರ್ವಾಲ್ ಅವರ ನಾಲ್ಕು ಶತಕಗಳ ದಾಖಲೆಯನ್ನು ಹಿಂದಿಕ್ಕಿದರು.

ಇದನ್ನು ಓದಿದ್ದೀರಾ? ಚೆನ್ನೈ ವಿರುದ್ಧದ ಪಂದ್ಯದಲ್ಲಿ ಶುಭಮನ್ ಗಿಲ್‌ಗೆ 12 ಲಕ್ಷ ರೂ. ದಂಡ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತ ತಂಡದ ನಾಯಕ ರೋಹಿತ್ ಶರ್ಮಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ಶತಕ ಸಿಡಿಸಿ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರು ಇಲ್ಲಿಯವರೆಗೆ ಆಡಿರುವ 33 ಪಂದ್ಯಗಳಲ್ಲಿ ಒಂಬತ್ತು ಶತಕಗಳನ್ನು ಗಳಿಸಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್: ಭಾರತದ ಶತಕಗಳು

ರೋಹಿತ್ ಶರ್ಮಾ – 9 ಶತಕ
ಶುಭ್‌ಮನ್ ಗಿಲ್ – 5 ಶತಕ
ವಿರಾಟ್ ಕೊಹ್ಲಿ – 4 ಶತಕ
ಮಯಾಂಕ್ ಅಗರ್ವಾಲ್ – 4 ಶತಕ
ರಿಷಬ್ ಪಂತ್ – 4 ಶತಕ

ಭಾರತ ಪರ 5 ಟೆಸ್ಟ್ ಶತಕ ಬಾರಿಸಿದ ಕಿರಿಯ ಆಟಗಾರ

19 ವರ್ಷ, 282 ದಿನಗಳು: ಸಚಿನ್ ತೆಂಡೂಲ್ಕರ್
22 ವರ್ಷ, 218 ದಿನಗಳು: ರವಿಶಾಸ್ತ್ರಿ
23 ವರ್ಷ, 242 ದಿನಗಳು: ದಿಲೀಪ್ ವೆಂಗ್‌ಸರ್ಕರ್
24 ವರ್ಷ, 3 ದಿನಗಳು: ಮೊಹಮ್ಮದ್ ಅಜರುದ್ದೀನ್
24 ವರ್ಷ, 73 ದಿನಗಳು: ಮನ್ಸೂರ್ ಅಲಿ ಖಾನ್ ಪಟೌಡಿ
24 ವರ್ಷ, 270 ದಿನಗಳು: ರಿಷಬ್ ಪಂತ್
24 ವರ್ಷ, 331 ದಿನಗಳು: ಸುನಿಲ್ ಗವಾಸ್ಕರ್
25 ವರ್ಷ, 13 ದಿನಗಳು: ಶುಭ್‌ಮನ್ ಗಿಲ್
25 ವರ್ಷ, 43 ದಿನಗಳು – ವಿರಾಟ್ ಕೊಹ್ಲಿ
25 ವರ್ಷ, 67 ದಿನಗಳು – ವೀರೇಂದ್ರ ಸೆಹ್ವಾಗ್
25 ವರ್ಷ, 293 ದಿನಗಳು – ಚೇತೇಶ್ವರ ಪೂಜಾರ
26 ವರ್ಷ, 44 ದಿನಗಳು – ರಾಹುಲ್ ದ್ರಾವಿಡ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...