ಚರ್ಚೆಗೆ ಗ್ರಾಸವಾಗಿರುವ ಕ್ರಿಕೆಟಿಗ ಶುಭಮನ್ ಗಿಲ್ ಕೊಂಡೊಯ್ದ ವಾಟರ್‌ ಫಿಲ್ಟರ್‌

Date:

ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ 1-1 ಅಂತರದಲ್ಲಿ ಸಮಬಲಗೊಂಡಿರುವುದರಿಂದ ಇಂದೋರ್‌ನಲ್ಲಿ ನಡೆಯಲಿರುವ ಮೂರನೇ ಮತ್ತು ನಿರ್ಣಾಯಕ ಪಂದ್ಯವು ಟೀಮ್ ಇಂಡಿಯಾಕ್ಕೆ ಮಾಡು ಇಲ್ಲವೆ ಮಡಿ ಸ್ಪರ್ಧೆಯಾಗಿ ಮಾರ್ಪಟ್ಟಿದೆ. ಆದರೆ ಈ ಬಾರಿ ಗಮನವು ಕೇವಲ ರನ್‌ಗಳು ಮತ್ತು ವಿಕೆಟ್‌ಗಳ ಮೇಲೆ ಮಾತ್ರ ಸೀಮಿತವಾಗಿಲ್ಲ. ಟೀಂ ಇಂಡಿಯಾ ಆಟಗಾರ ಇಂದೋರ್‌ಗೆ ಕೊಂಡೊಯ್ದ ವಾಟರ್‌ ಫಿಲ್ಟರ್‌ ಕೂಡ ಚರ್ಚೆಗೆ ಗ್ರಾಸವಾಗಿದೆ.

ಭಾರತದ ಅತ್ಯಂತ ಸ್ವಚ್ಛ ನಗರ ಎಂಬ ಖ್ಯಾತಿಯನ್ನು ಹೊಂದಿರುವ ಇಂದೋರ್ ಇತ್ತೀಚೆಗೆ ಕಲುಷಿತ ನೀರು ಕುಡಿದ ಹಲವರು ಮೃತಪಟ್ಟ ಬಳಿಕ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇದೇ ಇಂದೋರ್‌ನಲ್ಲಿ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಮುಂಚಿತವಾಗಿ ಟೀಮ್ ಇಂಡಿಯಾ ಮುನ್ನೆಚ್ಚರಿಕೆಗಳನ್ನು ವಹಿಸಿದೆ.

ಟೀಮ್ ಇಂಡಿಯಾ ಆಟಗಾರರಿಗೆ ಇಂದೋರ್‌ನ ಫೈವ್ ಸ್ಟಾರ್ ಹೋಟೆಲ್‌ನಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಹೋಟೆಲ್‌ಗೆ ಕ್ಯಾಪ್ಟನ್ ಗಿಲ್ ಅವರು 3 ಲಕ್ಷ ರೂಪಾಯಿ ಮೌಲ್ಯದ ಸ್ಪೆಷಲ್ ವಾಟರ್ ಫಿಲ್ಟರ್ ಅನ್ನು ತಂದಿದ್ದಾರೆ. ಇದನ್ನು ಹೋಟೆಲ್ ಕೊಠಡಿಯಲ್ಲಿ ಅಳವಡಿಸಿ ಫಿಲ್ಟರ್ ಆಗಿರುವ ನೀರನ್ನೇ ಶುಭಮನ್‌ ಗಿಲ್ ಅವರು ಕುಡಿಯುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಐಸಿಸಿ ಏಕದಿನ ಶ್ರೇಯಾಂಕ: ಮೇಲೇರಿದ ಕೊಹ್ಲಿ, ಕುಸಿದ ರೋಹಿತ್

ಈ ಸ್ಪೆಷಲ್ ಫಿಲ್ಟರ್ ʼಆರ್‌ಒʼ ಸಂಸ್ಕರಿಸಿದ ಮತ್ತು ಪ್ಯಾಕ್ ಮಾಡಿದ ಬಾಟಲ್ ನೀರನ್ನು ಪುನಃ ಶುದ್ಧೀಕರಿಸುವ ಸಾಮರ್ಥ್ಯವನ್ನು ಹೊಂದಿದೆ.

ಆದರೆ, ತಂಡದ ಮಾಧ್ಯಮ ವ್ಯವಸ್ಥಾಪಕರು ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಇಂದೋರ್‌ನಲ್ಲಿ ಇತ್ತೀಚೆಗೆ ಕಲುಷಿತ ನೀರಿನಿಂದ ಉಂಟಾದ ಪ್ರಾಣ ಹಾನಿ ಅಥವಾ ವೈಯಕ್ತಿಕ ಸುರಕ್ಷತಾ ಪ್ರೋಟೋಕಾಲ್‌ ಭಾಗವಾಗಿ ಗಿಲ್ ಸ್ಪೆಷಲ್ ವಾಟರ್ ಫಿಲ್ಟರ್ ಕೊಂಡುಹೋಗಿದ್ದಾರಾ ಎಂಬುದನ್ನು ಅವರು ಸ್ಪಷ್ಟಪಡಿಸಿಲ್ಲ.

ಹೋಟೆಲ್ ಮತ್ತು ಕ್ರೀಡಾಂಗಣ RO ವ್ಯವಸ್ಥೆಗಳನ್ನು ಒಳಗೊಂಡಂತೆ ಸುರಕ್ಷಿತ ಕುಡಿಯುವ ನೀರಿಗಾಗಿ ಹೆಚ್ಚಿನ ವ್ಯವಸ್ಥೆಗಳನ್ನು ಹೊಂದಿದ್ದರೂ, ಭಾರತ ತಂಡ ಹೆಚ್ಚುವರಿ ಎಚ್ಚರಿಕೆಯನ್ನು ಕಾಯ್ದುಕೊಳ್ಳುತ್ತಿದೆ ಎನ್ನುವುದು ಸ್ಪಷ್ಟವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...