ನಾಯಕನಾಗಿ ಅಭೂತಪೂರ್ವ ದಾಖಲೆ ನಿರ್ಮಿಸಿದ ಶುಭ್​ಮನ್ ಗಿಲ್

Date:

ಸುನಿಲ್ ಗಾವಸ್ಕರ್, ಕಪಿಲ್ ದೇವ್, ಇಮ್ರಾನ್ ಖಾನ್, ಇಂಜಮಾಮ್ ಉಲ್ ಹಕ್, ಸೌರವ್ ಗಂಗೂಲಿ, ಮಹೇಲ ಜಯವರ್ಧನೆ, ಮಹೇಂದ್ರ ಸಿಂಗ್ ಧೋನಿ, ವಿರಾಟ್ ಕೊಹ್ಲಿ ಸೇರಿದಂತೆ ಏಷ್ಯಾದ ಯಾವುದೇ ನಾಯಕನಿಗೆ ಸಾಧ್ಯವಾಗದ ಅಭೂತಪೂರ್ವ ಗೆಲುವೊಂದನ್ನು ಟೀಮ್ ಇಂಡಿಯಾದ ಯುವ ನಾಯಕ ಶುಭ್​ಮನ್ ಗಿಲ್ ತಮ್ಮದಾಗಿಸಿಕೊಂಡಿದ್ದಾರೆ. ಬರೋಬ್ಬರಿ 336 ರನ್ ಗಳ ಅಮೋಘ ಗೆಲುವಿನೊಂದಿಗೆ ದಾಖಲೆ ನಿರ್ಮಿಸಿದ್ದಾರೆ.

ಬರ್ಮಿಂಗ್ಹ್ಯಾಮ್​ನ ಎಡ್ಜ್​ಬಾಸ್ಟನ್ ಕ್ರೀಡಾಂಗಣದಲ್ಲಿ ಟೆಸ್ಟ್ ಪಂದ್ಯ ಗೆದ್ದ ಏಷ್ಯಾದ ಮೊದಲ ನಾಯಕ ಶುಭ್ ಮನ್ ಗಿಲ್. ಕಳೆದ 58 ವರ್ಷಗಳಿಂದ ಏಷ್ಯಾ ತಂಡಗಳ ಪಾಲಿಗೆ ಮರೀಚಿಕೆಯಾಗಿದ್ದ ಗೆಲುವನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತದ ಪರ ನಾಯಕ ಶುಭ್​ಮನ್ ಗಿಲ್ 269 ರನ್ ಗಳ ಭರ್ಜರಿ ಇನಿಂಗ್ಸ್ ಆಡಿದ್ದರು. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 587 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ವಿರುದ್ಧ ಮೊಹಮ್ಮದ್ ಸಿರಾಜ್ ಮಾರಕ ದಾಳಿ ಸಂಘಟಿಸಿ 6 ವಿಕೆಟ್ ಕಬಳಿಸಿದರು. ಪರಿಣಾಮ ಇಂಗ್ಲೆಂಡ್ ತಂಡದ ಮೊದಲ ಇನಿಂಗ್ಸ್ 407 ರನ್‌ಗಳಿಗೆ ಅಂತ್ಯಗೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಎರಡನೇ ಟೆಸ್ಟ್ | ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾಗೆ ಭರ್ಜರಿ ಜಯ; ಮಿಂಚಿದ ಆಕಾಶ್ ದೀಪ್

180 ರನ್‌ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ಗಿಲ್ 161 ರನ್ ಬಾರಿಸಿದರು. ಈ ಮೂಲಕ ಭಾರತ ತಂಡ ದ್ವಿತೀಯ ಇನಿಂಗ್ಸ್‌ನಲ್ಲಿ 427 ರನ್ ಗಳಿಸಿ ಡಿಕ್ಲೇರ್ ಘೋಷಿಸಿದೆ.

ಮೊದಲ ಇನಿಂಗ್ಸ್‌ನಲ್ಲಿನ 180 ರನ್ ಗಳ ಹಿನ್ನಡೆಯೊಂದಿಗೆ 608 ರನ್​ಗಳ ಗುರಿ ಪಡೆದ ಇಂಗ್ಲೆಂಡ್ ಪಾಲಿಗೆ ಆಕಾಶ್ ದೀಪ್ ಮಾರಕವಾಗಿ ಪರಿಣಮಿಸಿದರು. 6 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್ ಇಂಗ್ಲೆಂಡ್ ತಂಡವನ್ನು ದ್ವಿತೀಯ ಇನಿಂಗ್ಸ್‌ನಲ್ಲಿ 271 ರನ್ ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು. ಈ ಮೂಲಕ ಟೀಮ್ ಇಂಡಿಯಾ ಬರೋಬ್ಬರಿ 336 ರನ್‌ಗಳ ಐತಿಹಾಸಿಕ ಗೆಲುವು ದಾಖಲಿಸಿತು.

ಈ ಐತಿಹಾಸಿಕ ಜಯದೊಂದಿಗೆ ಎಡ್ಜ್​ಬಾಸ್ಟನ್ ಮೈದಾನದಲ್ಲಿ ಇಂಗ್ಲೆಂಡ್ ತಂಡಕ್ಕೆ ಸೋಲುಣಿಸಿದ ಏಷ್ಯಾದ ಮೊದಲ ನಾಯಕ ಎಂಬ ಹೆಗ್ಗಳಿಕೆಯನ್ನು ಶುಬ್‌ಮನ್ ಗಿಲ್ ತಮ್ಮದಾಗಿಸಿಕೊಂಡರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...