ಆರ್‌ಸಿಬಿ ಗೆಲುವು | ಮಾಜಿ ಮಾಲೀಕ ವಿಜಯ್‌ ಮಲ್ಯನ ಸಂದೇಶ, ಮಗನ ಕಣ್ಣೀರು

Date:

ಆರ್‌ಸಿಬಿ 18 ವರ್ಷಗಳ ನಂತರ ಐಪಿಎಲ್ ಟ್ರೋಫಿ ಗೆದ್ದಿದೆ. ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ತಂಡದ ಮಾಜಿ ಮಾಲೀಕ, ದೇಶಕ್ಕೆ ವಂಚಿಸಿ ಇಂಗ್ಲೆಂಡ್‌ನಲ್ಲಿ ತಲೆ ಮರೆಸಿಕೊಂಡಿರುವ ವಿಜಯ್‌ ಮಲ್ಯ ಹಾಗೂ ಆತನ ಪುತ್ರ ಸಿದ್ಧಾರ್ಥ್‌ ಮಲ್ಯ ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಮಾಜಿ ಆರ್‌ಸಿಬಿ ಮಾಲೀಕ ವಿಜಯ್ ಮಲ್ಯ ಅವರ ಪುತ್ರ ಸಿದ್ಧಾರ್ಥ್ ಮಲ್ಯ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಮ್ಮ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಗೆದ್ದಾಗ ಕಣ್ಣೀರು ಹಾಕಿ ವಿಡಿಯೋ ಹಂಚಿಕೊಂಡಿದ್ದಾರೆ. ವಿಡಿಯೋ ಜೊತೆಗೆ ಸಂದೇಶ ಹಂಚಿಕೊಂಡಿರುವ ಸಿದ್ಧಾರ್ಥ್‌ ಮಲ್ಯ ಹದಿನೆಂಟು ದೀರ್ಘ ವರ್ಷಗಳು… ನನಗೆ ಏನು ಹೇಳಬೇಕೆಂದು ಸಹ ತಿಳಿದಿಲ್ಲ,” ಅವರು ಕಣ್ಣೀರು ಹಾಕಿದ್ದಾರೆ.

ಆರ್‌ಸಿಬಿ ಗೆದ್ದ ನಂತರ ವಿಜಯ್‌ ಮಲ್ಯ ಕೂಡ ಟ್ವೀಟ್‌ ಮಾಡಿದ್ದಾರೆ. ‘ನಾನು ಆರ್‌ಸಿಬಿಯನ್ನು ಸ್ಥಾಪಿಸಿದಾಗ ಬೆಂಗಳೂರಿಗೆ ಐಪಿಎಲ್ ಟ್ರೋಫಿ ಬರಬೇಕು ಎಂಬುದು ನನ್ನ ಕನಸಾಗಿತ್ತು. ಯುವಕನಾಗಿದ್ದಾಗ ದಂತಕಥೆಯ ಕಿಂಗ್ ಕೊಹ್ಲಿಯನ್ನು ಆಯ್ಕೆ ಮಾಡುವ ಸೌಭಾಗ್ಯ ನನಗಿತ್ತು. ಅವರು 18 ವರ್ಷಗಳ ಕಾಲ ಆರ್‌ಸಿಬಿ ಜೊತೆಗೆ ಇದ್ದಾರೆ ಎಂಬುದು ಗಮನಾರ್ಹ. ಆರ್‌ಸಿಬಿ ಇತಿಹಾಸದ ಅಳಿಸಲಾಗದ ಭಾಗವಾಗಿ ಉಳಿದಿರುವ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್‌ ಅವರನ್ನು ಆಯ್ಕೆ ಮಾಡುವ ಗೌರವವೂ ನನಗಿತ್ತು. ಅಂತಿಮವಾಗಿ, ಐಪಿಎಲ್ ಟ್ರೋಫಿ ಬೆಂಗಳೂರಿಗೆ ಆಗಮಿಸುತ್ತದೆ. ನನ್ನ ಕನಸನ್ನು ನನಸಾಗಿಸಿದ ಎಲ್ಲರಿಗೂ ಅಭಿನಂದನೆಗಳು” ಎಂದು ತಿಳಿಸಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯ್‌ ಮಲ್ಯ ತಂಡ ಖರೀದಿಸಿದಾಗ ಸಿದ್ಧಾರ್ಥ್ ತಂಡದೊಂದಿಗೆ ಔಪಚಾರಿಕವಾಗಿ ಸಂಬಂಧ ಹೊಂದಿಲ್ಲದಿದ್ದರೂ, ಮೈದಾನದಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದರು. ಕೆಲವು ಬಾರಿ ವಿವಾದಕ್ಕೂ ಕಾರಣವಾಗಿದ್ದರು. ಫ್ರಾಂಚೈಸಿಯ ಆರಂಭಿಕ ವರ್ಷಗಳಲ್ಲಿ, ಅವರು ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ತಂಡದ ಬ್ರ್ಯಾಂಡಿಂಗ್‌ನಲ್ಲಿ ಸಕ್ರಿಯ ಪಾತ್ರ ವಹಿಸಿದ್ದರು. ತಂಡದ ಡಿಜಿಟಲ್ ವಿಭಾಗಗಳನ್ನು ಸಹ ಮುನ್ನಡೆಸಿದ್ದರು.

ಇದನ್ನು ಓದಿದ್ದೀರಾ? ಐಪಿಎಲ್‌ ಫೈನಲ್‌ಗಿಂತ ಹೆಚ್ಚಾದ ಆರ್‌ಸಿಬಿ ಜ್ವರ, ಏನಿದು ವಿದ್ಯಮಾನ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಲೀಕತ್ವವು ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಕಂಪನಿಗೆ ಸೇರಿದೆ. ಈ ಕಂಪನಿ ಬ್ರಿಟಿಷ್ ಮೂಲದ ಡಿಯಾಜಿಯೋ ಎಂಬ ಅಂತಾರಾಷ್ಟ್ರೀಯ ಮದ್ಯ ಉತ್ಪಾದನಾ ಸಂಸ್ಥೆಯ ಸಹಸಂಸ್ಥೆಯಾಗಿದೆ.

ಆರ್‌ಸಿಬಿ ಆರಂಭದಲ್ಲಿ ಯುನೈಟೆಡ್ ಸ್ಪಿರಿಟ್ಸ್ ಒಡೆತನದಲ್ಲಿತ್ತು, ಅದು ಆಗ ವಿಜಯ್ ಮಲ್ಯ ಅವರ ನಿಯಂತ್ರಣದಲ್ಲಿತ್ತು. ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ (ಯುಎಸ್‌ಎಲ್), ಇದು ಬ್ರಿಟಿಷ್ ಬಹುರಾಷ್ಟ್ರೀಯ ಪಾನೀಯ ಕಂಪನಿಯಾದ ‘ಡಿಯಾಜಿಯೊ’ ದ ಅಂಗಸಂಸ್ಥೆಯಾಗಿದೆ. 2008ರಲ್ಲಿ, ಆರ್‌ಸಿಬಿಯನ್ನು ವಿಜಯ್ ಮಲ್ಯ ಅವರು ತಮ್ಮ ಯುನೈಟೆಡ್ ಬ್ರೂವರೀಸ್ ಗ್ರೂಪ್‌ನ ಮೂಲಕ 111.6 ಮಿಲಿಯನ್ ಡಾಲರ್‌ಗೆ(937.44 ಕೋಟಿ ರೂಪಾಯಿ) ಖರೀದಿಸಿದರು. ವಿರಾಟ್ ಕೊಹ್ಲಿ, ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್‌ರಂತಹ ಆಟಗಾರರನ್ನು ಒಳಗೊಂಡ ಕಾರಣ ಆರ್‌ಸಿಬಿ ಹೆಚ್ಚು ಖ್ಯಾತಿಗಳಿಸಿತು.

2016ರಲ್ಲಿ ವಿಜಯ್ ಮಲ್ಯ ಬ್ಯಾಂಕ್‌ಗಳಿಗೆ ವಂಚಿಸಿ ದೇಶ ತೊರೆದಾಗ ಆರ್‌ಸಿಬಿಯ ಮಾಲೀಕತ್ವ ಯುಎಸ್‌ಎಲ್ ಕಂಪನಿಯ ಪಾಲಾಯಿತು. ಪ್ರಸ್ತುತ, ಆರ್‌ಸಿಬಿಯನ್ನು ಯುಎಸ್‌ಎಲ್‌ನ ಮೂಲಕ ಡಿಯಾಜಿಯೊ ಸಂಸ್ಥೆ ನಿರ್ವಹಿಸುತ್ತದೆ. ಪ್ರಥಮೇಶ್ ಮಿಶ್ರಾ ಅವರು ಆರ್‌ಸಿಬಿಯ ಚೇರ್ಮನ್ ಮತ್ತು ಡಿಯಾಜಿಯೊ ಇಂಡಿಯಾದ ಮುಖ್ಯ ವಾಣಿಜ್ಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...