ಐಪಿಎಲ್ 2025 | ಅಪರೂಪದ ದಾಖಲೆ ನಿರ್ಮಿಸಿದ ಯಶಸ್ವಿ ಜೈಸ್ವಾಲ್

Date:

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅತ್ಯಂತ ವೇಗದ ಅರ್ಧಶತಕದ ದಾಖಲೆ ಹೊಂದಿರವ ಆರ್‌ಆರ್‌ ಬ್ಯಾಟರ್‌ ಯಶಸ್ವಿ ಜೈಸ್ವಾಲ್ ಇದೀಗ ಅತ್ಯಂತ ನಿಧಾನಗತಿಯಲ್ಲಿ ಅರ್ಧ ಶತಕ ಸಿಡಿಸಿ ಸುದ್ದಿಯಾಗಿದ್ದಾರೆ.

ಚಂಡೀಗಢದ ಮುಲ್ಲನ್​ಪುರ್​ನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಬ್ಯಾಟಿಂಗ್​​ನೊಂದಿಗೆ ಯಶಸ್ವಿ ಜೈಸ್ವಾಲ್ 40 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದು ಜೈಸ್ವಾಲ್ ಅವರ ಐಪಿಎಲ್​ ಕೆರಿಯರ್​ನಲ್ಲೇ ಅತ್ಯಂತ ನಿಧಾನಗತಿಯ ಅರ್ಧಶತಕವಾಗಿದೆ.

ಈವರೆಗೆ ಅವರು ಅರ್ಧಶತಕ ಬಾರಿಸಲು 40 ಎಸೆತಗಳನ್ನು ತೆಗೆದುಕೊಂಡಿರಲಿಲ್ಲ. ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 39 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದು, ಅವರ ನಿಧಾನಗತಿಯ ಬ್ಯಾಟಿಂಗ್ ಆಗಿತ್ತು. ಇದೀಗ ಪಂಜಾಬ್ ಕಿಂಗ್ಸ್ ವಿರುದ್ಧ 40 ಎಸೆತಗಳನ್ನು ಎದುರಿಸುವ ಮೂಲಕ ಐಪಿಎಲ್​ನಲ್ಲಿ ನಿಧಾನಗತಿಯಲ್ಲಿ ಅರ್ಧಶತಕ ಪೂರೈಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸತ್ಯಶೋಧ | ಬಿಜೆಪಿಗೆ ಸ್ಟಾರ್‌ ಕ್ರಿಕೆಟಿಗ ಎಂ.ಎಸ್‌ ಧೋನಿ ಸೇರಿಲ್ಲ

ಈ ಪಂದ್ಯದಲ್ಲಿ 45 ಎಸೆತಗಳನ್ನು ಎದುರಿಸಿದ ಜೈಸ್ವಾಲ್ 5 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 67 ರನ್ ಸಿಡಿಸಿ ಮಿಂಚಿದರು. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡ ಬೃಹತ್ ಮೊತ್ತ ಪೇರಿಸಲು ಭದ್ರ ಬುನಾದಿ ಹಾಕಿಕೊಟ್ಟರು. ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತ್ಯಂತ ನಿಧಾನಗತಿಯ ಅರ್ಧಶತಕ ಬಾರಿಸಿದ ದಾಖಲೆ ದಕ್ಷಿಣ ಆಫ್ರಿಕಾದ ಜೆ ಪಿ ಡುಮಿನಿ ಹೆಸರಿನಲ್ಲಿದೆ. 2009ರ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದ ಡುಮಿನಿ ಅರ್ಧಶತಕ ಬಾರಿಸಲು ಬರೋಬ್ಬರಿ 55 ಎಸೆತಗಳನ್ನು ತೆಗೆದುಕೊಂಡಿದ್ದರು. ಇದು ಐಪಿಎಲ್ ಇತಿಹಾಸದ ಅತ್ಯಂತ ನಿಧಾನಗತಿಯ ಅರ್ಧಶತಕವಾಗಿದೆ.

ಇದೀಗ 40 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಯಶಸ್ವಿ ಜೈಸ್ವಾಲ್ ತನ್ನ ವೃತ್ತಿಯಲ್ಲಿನ ನಿಧಾನಗತಿಯ ಅರ್ಧ ಶತಕ ಬಾರಿಸಿದ್ದಾರೆ. ಇದಾಗ್ಯೂ ಐಪಿಎಲ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಕೂಡ ಜೈಸ್ವಾಲ್ ಹೆಸರಿನಲ್ಲಿದೆ. 2023 ರಲ್ಲಿ ಯಶಸ್ವಿ ಜೈಸ್ವಾಲ್ ಕೆಕೆಆರ್ ವಿರುದ್ಧ ಕೇವಲ 13 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿ ಈ ದಾಖಲೆ ನಿರ್ಮಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...