IND – ENG T20 | ಸ್ಮೃತಿ ಮಂದಾನಾ ಭರ್ಜರಿ ಶತಕ: ಭಾರತಕ್ಕೆ ಅಮೋಘ ಜಯ

Date:

ಟೀಮ್ ಇಂಡಿಯಾ ವನಿತೆಯರು ಇಂಗ್ಲೆಂಡ್ ಪ್ರವಾಸದಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಭರವಸೆಯ ಆಟಗಾರ್ತಿಯರಾದ ಸ್ಮೃತಿ ಮಂದಾನಾ ಬಾರಿಸಿದ ಶತಕ ಹಾಗೂ ಶ್ರೀ ಚರಣಿ ಅವರ ಬಿಗುವಿನ ಬೌಲಿಂಗ್‌ ದಾಳಿಗೆ ಆತಿಥೇಯ ತಂಡ ಕಂಗಾಲಿದೆ. ಸ್ಮೃತಿ ಮಂದಾನಾ ಮುಂದಾಳತ್ವದ ಭಾರತ 5 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಸೊತರೂ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 210 ರನ್‌ ಭಾರಿ ಮೊತ್ತ ಕಲೆ ಹಾಕಿತು. ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ 14.5 ಓವರ್‌ಗಳಲ್ಲಿ 113 ರನ್‌ಗಳಿಗೆ ಆಲೌಟ್ ಆಯಿತು.

ಟಾಸ್ ಸೋತರೂ ಮೊದಲ ಬ್ಯಾಟ್ ಮಾಡಿದ ಭಾರತದ ವನಿತೆಯರ ತಂಡ ಉತ್ತಮ ಆರಂಭವನ್ನು ಕಂಡಿತು. ಆರಂಭಿಕರಾದ ಶೆಫಾಲಿ ವರ್ಮಾ ಹಾಗೂ ಸ್ಮೃತಿ ಮಂದಾನಾ ಜೋಡಿ ತಂಡಕ್ಕೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಈ ಜೊಡಿ ಮೊದಲ ವಿಕೆಟ್‌ಗೆ 77 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಈ ವೇಳೆ ಶೆಫಾಲಿ ವರ್ಮಾ 20 ರನ್‌ ಬಾರಿಸಿ ಔಟ್ ಆದರು. ಇನ್ನು ಎರಡನೇ ವಿಕೆಟ್‌ಗೆ ಸ್ಮೃತಿ ಅವರನ್ನು ಸೇರಿಕೊಂಡ ಹರ್ಲಿನ್ ಡಿಯೋಲ್‌ ಜೋಡಿ ಸಹ ಉತ್ತಮ ಜೊತೆಯಾಟವನ್ನು ನೀಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಭಾರತ vs ಐರ್ಲೆಂಡ್‌ | ವೇಗದ ಶತಕ ಬಾರಿಸಿ ದಾಖಲೆ ಬರೆದ ಸ್ಮೃತಿ ಮಂದಾನಾ

ಈ ಜೋಡಿ ಇಂಗ್ಲೆಂಡ್ ತಂಡದ ತಂತ್ರವನ್ನು ಮೆಟ್ಟಿನಿಂತು ಬ್ಯಾಟ್ ಮಾಡಿತು. ಈ ಜೋಡಿಯ ಆಟಕ್ಕ ತಡೆ ಹಾಕುವಲ್ಲಿ ಇಂಗ್ಲೆಂಡ್ ಜೋಡಿ ವಿಫಲವಾಯಿತು. ಸ್ಮೃತಿ ಶತಕ ಎರಡನೇ ವಿಕೆಟ್‌ಗೆ ಸ್ಮೃತಿ ಹಾಗೂ ಹರ್ಲಿನ್‌ ಜೋಡಿ 45 ಎಸೆತಗಳಲ್ಲಿ 94 ರನ್‌ ಸಿಡಿಸಿತು. ಈ ವೇಳೆ 7 ಬೌಂಡರಿ ಸಹಾಯದಿಂದ 43 ರನ್‌ ಬಾರಿಸಿದ ಹರ್ಲಿನ್‌ ಔಟ್ ಆದರು. ನಂತರ ಬಂದ ಯಾವುದೇ ಬ್ಯಾಟರ್‌ಗಳು ಸ್ಥಿರ ಪ್ರದರ್ಶನ ನೀಡಲಿಲ್ಲ. ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನಾ ಕ್ಲಾಸಿಕ್ ಬ್ಯಾಟಿಂಗ್ ನಡೆಸಿದರು. ಇವರು 62 ಎಸೆತಗಳಲ್ಲಿ 15 ಬೌಂಡರಿ, 3 ಸಿಕ್ಸರ್ ಸಹಾಯದಿಂದ 112 ರನ್‌ ಬಾರಿಸಿ ತಂಡಕ್ಕೆ ಆಧಾರವಾದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮೂರಂಕಿ ಮುಟ್ಟಿ ಸಂಭ್ರಮಿಸಿದರು.

ಸವಾಲಿನ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕ ಜೋಡಿ 9 ರನ್ ಆಗುವಷ್ಟರಲ್ಲಿ ಪೆವಿಲಿಯನ್‌ ಸೇರಿತ್ತು. ಇಂಗ್ಲೆಂಡ್ ತಂಡದ ಪರ ಟ್ಯಾಮಿ ಬ್ಯೂಮಾಂಟ್, ಎಮ್ ಆರ್ಲಾಟ್ ಮಾತ್ರ ಟೀಮ್ ಇಂಡಿಯಾದ ಬೌಲರ್‌ಗಳನ್ನು ಕಾಡಿದರು. ಆದರೆ ದೊಡ್ಡ ಇನಿಂಗ್ಸ್‌ ಕಟ್ಟಲಿಲ್ಲ. ಇಂಗ್ಲೆಂಡ್ ತಂಡದ ಪರ ನಾಟ್ ಸ್ಕಿವರ್ ಬ್ರಂಟ್ 10 ಬೌಂಡರಿ ನೆರವಿನಿಂದ 66 ರನ್‌ ಸಿಡಿಸಿ ಔಟ್ ಆದರು.

ಇಂಗ್ಲೆಂಡ್‌ ತಂಡದ ಪರ ನಾಟ್ ಸ್ಕಿವರ್ ಬ್ರಂಟ್ ಮಾತ್ರ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರಿಗೆ ಬೆರೊಬ್ಬ ಬ್ಯಾಟರ್‌ ಜೊತೆ ನೀಡಲಿಲ್ಲ. ಟೀಮ್ ಇಂಡಿಯಾ ಸಾಧನೆ ಅಂತಾರಾಷ್ಟ್ರೀಯ ಮಹಿಳಾ ಟಿ20 ಕ್ರಿಕೆಟ್‌ನಲ್ಲಿ, ಇಂಗ್ಲೆಂಡ್ ತಂಡವು ಅತಿ ಹೆಚ್ಚು ಪಂದ್ಯಗಳನ್ನು ಆಡಿದೆ. ಈ ಮೂಲಕ ಟೀಮ್ ಇಂಡಿಯಾ 200ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿದ ಸಾಧನೆ ಮಾಡಿದೆ. ಇಂಗ್ಲೆಂಡ್‌ ತಂಡ 216, ಆಸ್ಟ್ರೇಲಿಯಾ 200, ಟೀಮ್ ಇಂಡಿಯಾ 200 ಪಂದ್ಯಗಳನ್ನು ಆಡಿದ ಸಾಧನೆ ಮಾಡಿದೆ. ಈ ಮೂಲಕ ವಿಶ್ವದಲ್ಲೇ 200ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿದ ಮೂರನೇ ತಂಡ ಎಂಬ ಹಿರಿಮೆ ತನ್ನದಾಗಿಸಿಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...