ಮೊದಲ ಇನಿಂಗ್ಸ್‌ನಲ್ಲಿ ಮುನ್ನಡೆ ಪಡೆದ ದಕ್ಷಿಣ ಆಫ್ರಿಕಾ: ಡೀನ್‌ ಎಲ್ಗರ್‌ ಶತಕ

Date:

ಭಾರತ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಆರಂಭಿಕ ಆಟಗಾರ ಡೀನ್‌ ಎಲ್ಗರ್‌ ಅವರ ಆಕರ್ಷಕ ಶತಕದ ನೆರವಿನಿಂದ ಮೊದಲ ಇನಿಂಗ್ಸ್‌ನಲ್ಲಿ  11 ರನ್‌ಗಳ ಮುನ್ನಡೆ ಪಡೆದಿದೆ.

ಸೆಂಚೂರಿಯನ್‌ನಲ್ಲಿ ನಡೆಯುತ್ತಿರುವ ಎರಡನೇ ದಿನದಾಟದಲ್ಲಿ ಟೀಂ ಇಂಡಿಯಾ ನೀಡಿದ 245 ರನ್‌ಗಳಿಗೆ ಉತ್ತರವಾಗಿ ಹರಿಣಗಳ ತಂಡ ಎರಡನೇ ದಿನದಾಟದ ಅಂತ್ಯಕ್ಕೆ  66 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 256 ರನ್‌ ಕಲೆ ಹಾಕಿದೆ.

ನಾಲ್ಕನೇ ಓವರ್‌ನಲ್ಲಿ ವೇಗಿ ಮೊಹಮದ್‌ ಸಿರಾಜ್ ಅವರು ಐಡೆನ್ ಮಾರ್ಕ್ರಾಮ್(5) ಅವರ ವಿಕೆಟ್ ಕಬಳಿಸಿ ದಕ್ಷಿಣ ಆಫ್ರಿಕಾಕ್ಕೆ ಆಘಾತವುಂಟು ಮಾಡಿದರು. ನಂತರ ಬಂದ ಟೋನಿ ಡಿ ಜೋರ್ಜಿ ಒಂದಷ್ಟು ಹೊತ್ತು ಆಟವಾಡಿ 28 ರನ್‌ ಗಳಿಸಿ ಬುಮ್ರಾ ಬೌಲಿಂಗ್‌ನಲ್ಲಿ ಔಟಾದರು. ನಾಲ್ಕನೇ ಕ್ರಮಾಂಕದ ಕೀಗನ್ ಪೀಟರ್ಸನ್(2) ಅವರನ್ನು ಬುಮ್ರಾ ಬೇಗನೆ ಪೆವಿಲಿಯನ್‌ಗೆ ಕಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂರು ವಿಕೆಟ್ ಕಳೆದುಕೊಂಡು ಆತಂಕದಲ್ಲಿದ್ದ ಪಾರು ಮಾಡಿದ್ದು ಆರಂಭಿಕ ಆಟಗಾರ ಡೀನ್‌ ಎಲ್ಗರ್‌ ಹಾಗೂ ಡೇವಿಡ್ ಬೆಡಿಂಗ್ಹ್ಯಾಮ್ ಜೋಡಿ.

ಡೀನ್‌ ಮತ್ತು ಡೇವಿಡ್ 131 ರನ್‌ಗಳ ಜೊತೆಯಾಟದಿಂದ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಡೀನ್‌ ಎಲ್ಗರ್‌ 201 ಚೆಂಡುಗಳಲ್ಲಿ  23 ಬೌಂಡರಿಯೊಂದಿಗೆ ಅಜೇಯ 137 ರನ್‌ ಗಳಿಸಿದ್ದಾರೆ. ಡೀನ್‌ಗೆ ಉತ್ತಮ ಜೊತೆ ನೀಡಿದ ಡೇವಿಡ್ ಬೆಡಿಂಗ್ಹ್ಯಾಮ್ (56) ಅರ್ಧ ಶತಕ ಪೂರ್ಣಗೊಳಿಸಿದರು. 87 ಎಸೆತಗಳ ಇವರ ಆಟದಲ್ಲಿ 2 ಸಿಕ್ಸರ್‌ ಹಾಗೂ 7 ಬೌಂಡರಿ ಒಳಗೊಂಡಿದ್ದವು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ₹40 ಸಾವಿರ ಕೋಟಿ ಲೂಟಿ ಆರೋಪ; ಪ್ರಧಾನಿ ಮೋದಿ ಏನು ಹೇಳುತ್ತಾರೆ?

ಜಸ್ಪ್ರೀತ್ ಬುಮ್ರಾ 48/2 ,ಮೊಹಮ್ಮದ್ ಸಿರಾಜ್ 61/2, ಪ್ರಸಿದ್ಧ್ ಕೃಷ್ಣ 57/1 ವಿಕೆಟ್ ಪಡೆದಿದ್ದು,ಶಾರ್ದೂಲ್ ಠಾಕೂರ್ ಹಾಗೂ ರವಿಚಂದ್ರನ್ ಅಶ್ವಿನ್ ವಿಕೆಟ್ ಖಾತೆ ತೆರದಿಲ್ಲ.

ಕೆ. ಎಲ್ ರಾಹುಲ್ ಶತಕ

ಇದಕ್ಕೂ ಮೊದಲು ಮೊದಲ ಇನಿಂಗ್ಸ್‌ನಲ್ಲಿ ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಕೆ ಎಲ್‌ ರಾಹುಲ್ ಶತಕದ ನೆರವಿನಿಂದ 67.4 ಓವರ್‌ಗಳಲ್ಲಿ 245 ರನ್‌ಗಳಿಗೆ ಆಲೌಟ್‌ ಆಯಿತು.

ನಾಯಕ ರೋಹಿತ್, ವಿರಾಟ್‌ ಕೊಹ್ಲಿ, ಶುಭಮನ್‌ ಗಿಲ್ ಶ್ರೇಯಸ್‌ ಅಯ್ಯರ್‌, ಯಶಸ್ವಿ ಜೈಸ್ವಾಲ್ ಯಾರೊಬ್ಬರೂ ಸಫಲವಾಗದಿದ್ದ ವೇಳೆ ಕನ್ನಡಿಗ ಕೆ ಎಲ್ ರಾಹುಲ್ ಒಬ್ಬರೆ ಏಕಾಂಗಿಯಾಗಿ ನಿಂತು ಶತಕಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು.

ರಾಹುಲ್ 137 ಎಸೆತಗಳಲ್ಲಿ  14 ಬೌಂಡರಿ 4 ಸಿಕ್ಸರ್‌ನೊಂದಿಗೆ 101 ಗಳಿಸಿದರು. ರಾಹುಲ್‌ ಅವರ ಈ ಶತಕ ಟೆಸ್ಟ್ ಮಾದರಿಯಲ್ಲಿ 7 ಶತಕವಾಗಿದೆ. ವಿದೇಶಗಳಲ್ಲಿ ಬಾರಿಸಿರುವ ಎರಡೂ ಶತಕಗಳು ಸಂಚೂರಿಯನ್‌ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧವೇ ಸಿಡಿಸಿದ್ದಾರೆ.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...