ಟಿ20 ವಿಶ್ವಕಪ್ | ಬಾಂಗ್ಲಾ ವಿರುದ್ಧ ಜಯದೊಂದಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ

Date:

ದಕ್ಷಿಣ ಆಫ್ರಿಕಾ ತಂಡ 2024ರ ಟಿ20 ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್‌ ಗೆಲುವು ದಾಖಲಿಸಿದೆ. ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ತಂಡವು 4 ರನ್‌ಗಳ ರೋಚಕ ಜಯ ಸಾಧಿಸಿದೆ. ಇದರೊಂದಿಗೆ ದಕ್ಷಿಣ ಆಫ್ರಿಕಾ ಟಿ20 ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್‌ ಗೆಲುವು ಸಾಧಿಸಿ ಪ್ಲೇಆಫ್‌ ಹಂತಕ್ಕೇರಿದೆ.

ರನ್‌ಗಳ ಬರ ಎದುರಿಸುತ್ತಿರುವ ಪಿಚ್‌ನಲ್ಲಿ 114 ರನ್‌ಗಳ ಸಾಧಾರಣ ಮೊತ್ತವನ್ನು ಗುರಿ ನೀಡಿದ್ದ ದಕ್ಷಿಣ ಆಫ್ರಿಕಾ ಅಂತಿಮ ಓವರ್‌ನಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಸ್ಪಿನ್ನರ್ ಕೇಶವ್‌ ಮಹಾರಾಜ್‌ 27/3, ಕಗ್ಗಿಸೋ ರಬಾಡ 19/2 ಹಾಗೂ ಅನ್‌ರಿಚ್‌ ನೋರ್ಟ್‌ಜೆ 17/2 ಬೌಲಿಂಗ್‌ ದಾಳಿಯಿಂದ ಬಾಂಗ್ಲಾ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 109 ರನ್‌ಗಳಷ್ಟೆ ಗಳಿಸುವಲ್ಲಿ ಶಕ್ತವಾಯಿತು.

ಕೊನೆಯ ಓವರ್‌ನಲ್ಲಿ ಬಾಂಗ್ಲಾ ಗೆಲುವಿಗೆ 11 ರನ್‌ಗಳು ಬೇಕಿತ್ತು. 20 ರನ್‌ ಗಳಿಸಿದ್ದ ಮಹ್ಮದುಲ್ಲಾ ಕ್ರೀಸಿನಲ್ಲಿದ್ದರು. ಕೊನೆಯ 2 ಎಸೆತಗಳಲ್ಲಿ 6 ರನ್‌ ಬೇಕಿದ್ದಾಗ ಕೇಶವ್‌ ಮಹಾರಾಜ್‌ ಬೌಲಿಂಗ್‌ನಲ್ಲಿ ಮಹ್ಮದುಲ್ಲಾ ಬೀಸಿದ ಎಸೆತವನ್ನು ಬೌಂಡರಿ ಲೈನ್‌ ಬಳಿ ದಕ್ಷಿಣ ಆಫ್ರಿಕಾ ತಂಡದ ಮರ್ಕ್ರಾಮ್‌ ಕ್ಯಾಚ್‌ ಹಿಡಿದರು. ತಂಡವು ಕೊನೆಗೆ 4 ರನ್‌ಗಳ ಅಂತರದಿಂದ ಸೋಲು ಕಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಂಗ್ಲಾದೇಶ ಪರ ತೌಹೀದ್‌ ಹೃದಯೋಯ್‌ (37),ನಾಯಕ ನಜ್‌ಮುಲ್‌ ಶಾಂಟೊ (14), ಮಹ್ಮದುಲ್ಲಾ(20) ರನ್‌ ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರು ರನ್‌ ಗಳಿಸುವಲ್ಲಿ ವಿಫಲರಾದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರನೇ ಬಾರಿಗೆ ಪ್ರಧಾನಿಯಾದ ಮೋದಿ, ಹೊಸ ಮನುಷ್ಯರಾಗುವರೇ?

ಈ ಮೊದಲು ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ನಡೆಸಿದ ದಕ್ಷಿಣ ಆಫ್ರಿಕಾ, ಹೆನ್ರಿಚ್ ಕ್ಲಾಸೆನ್ ಮತ್ತು ಡೇವಿಡ್ ಮಿಲ್ಲರ್ ಅರ್ಧಶತಕದ ಜೊತೆಯಾಟದ ನೆರವಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 113 ರನ್ ಗಳಿಸಿತು.

ದಕ್ಷಿಣ ಆಫ್ರಿಕಾ ಪರ ಆರಂಭಿಕರಾಗಿ ಕಣಕ್ಕಿಳಿದ ರೀಜಾ ಹೆಂಡ್ರಿಕ್ಸ್, ಎದುರಿಸಿದ ಮೊದಲ ಚಂಡಿನಲ್ಲೆ ಔಟಾದರು. ಕ್ವಿಂಟನ್ ಡಿ ಕಾಕ್ ಪಂದ್ಯದ ಮೊದಲ ಮೂರು ಎಸೆತಗಳಲ್ಲಿ 10 ರನ್ ಗಳಿಸಿದರು. ಆದರ ನಂತರದಲ್ಲಿ ರನ್‌ ಗಳಿಸಲು ವಿಫಲರಾಗಿ 11 ಎಸೆತಗಳಲ್ಲಿ 18 ರನ್‌ ಗಳಿಸಿ ಔಟಾದರು. ಟ್ರಿಸ್ಟಾನ್ ಸ್ಟಬ್ಸ್ 5 ಎಸೆತ ಎದುರಿಸಿ ಖಾತೆ ತೆರೆಯದೆ ಪೆವಿಲಿಯನ್‌ಗೆ ತೆರಳಿದರು. ನಾಯಕ ಐಡೆನ್ ಮಾರ್ಕ್ರಮ್ ಆಟ 4 ರನ್‌ಗಳಿಗೆ ಸೀಮಿತವಾಯಿತು.

ಮೊದಲ ಆರು ಓವರ್‌ಗಳಲ್ಲಿ ದಕ್ಷಿಣ ಆಫ್ರಿಕಾ 4 ವಿಕೆಟ್ ನಷ್ಟಕ್ಕೆ 25 ರನ್ ಕಲೆ ಹಾಕಿತು. ಈ ವೇಳೆ ತಂಡಕ್ಕೆ ಉತ್ತಮ ಜೊತೆಯಾಟವೊಂದರ ಅಗತ್ಯವಿತ್ತು. ಹೆನ್ರಿಚ್ ಕ್ಲಾಸೆನ್ ಮತ್ತು ಡೇವಿಡ್ ಮಿಲ್ಲರ್ ಈ ಜವಾಬ್ದಾರಿ ತೆಗೆದುಕೊಂಡರು. ಇವರಿಬ್ಬರ ನಡುವೆ 79 ರನ್‌ಗಳ ಆಕರ್ಷಕ ಜೊತೆಯಾಟ ಕಂಡುಬಂತು. ನಿಧಾನವಾಗಿ ಬ್ಯಾಟಿಂಗ್ ನಡೆಸಿ ತಂಡದ ಮೊತ್ತ ಹೆಚ್ಚಿಸಿದರು. ಕ್ಲಾಸೆನ್ 46 ರನ್‌ ಗಳಿಸಿದರೆ,, ಮಿಲ್ಲರ್‌ 29 ರನ್‌ ಸಿಡಿಸಿದರು.

ಬಾಂಗ್ಲಾದೇಶ ಪರ ತಂಜಿಮ್ ಹಸನ್ ಸಾಕಿಬ್ 18/3 ವಿಕೆಟ್ ಕಬಳಿಸಿದರೆ, ತಸ್ಕಿನ್ ಅಹ್ಮದ್ 19/2 ವಿಕೆಟ್ ಕಿತ್ತರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...