ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು: ಮೂರೇ ದಿನದಲ್ಲಿ ಮುಕ್ತಾಯವಾದ ಪಂದ್ಯ

Date:

ದಕ್ಷಿಣ ಆಫ್ರಿಕಾ ಬೌಲರ್‌ಗಳ ದಾಳಿಗೆ ಸಾಲುಸಾಲಾಗಿ ವಿಕೆಟ್ ಒಪ್ಪಿಸಿದ ಭಾರತ ತಂಡ, ಇನಿಂಗ್ಸ್ ಹಾಗೂ 32 ರನ್‌ಗಳ ಅಂತರದಲ್ಲಿ ಹಿನಾಯವಾಗಿ ಸೋತಿದೆ. ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ಬಾಕ್ಸಿಂಗ್‌ ಡೇ ಟೆಸ್ಟ್‌ ಎರಡು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಸಂಚೂರಿಯನ್‌ನ ಸೂಪರ್‌ಪಾರ್ಕ್‌ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯವು ಮೂರೇ ದಿನದಲ್ಲಿ 20 ಓವರ್‌ ಬಾಕಿಯಿರುವಂತೆಯೇ ಮುಕ್ತಾಯವಾಯಿತು. ದಕ್ಷಿಣ ಅಫ್ರಿಕಾ ತಂಡ ಮೊದಲ ಇನಿಂಗ್ಸ್‌ನಲ್ಲಿ 108.4 ಓವರ್‌ಗಳಲ್ಲಿ 408 ರನ್‌ ಕಲೆ ಹಾಕಿ 162 ರನ್‌ ಮುನ್ನಡೆ ಪಡೆದಿತ್ತು.

ಎರಡನೇ ಇನಿಂಗ್ಸ್ ಆರಂಭಿಸಿದ ರೋಹಿತ್‌ ಶರ್ಮಾ ನೇತೃತ್ವದ ಟೀಂ ಇಂಡಿಯಾ ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿ 34.1 ಓವರ್‌ಗಳಲ್ಲಿ 131 ರನ್‌ಗಳಿಗೆ ಆಲೌಟ್‌ ಆಯಿತು. ಕೊನೆಯವರೆಗೂ ಆಡಿದ ವಿರಾಟ್‌ ಕೊಹ್ಲಿ (76) ಹಾಗೂ ಶುಭಮನ್‌ ಗಿಲ್‌ (26) ರನ್‌ ಗಳಿಸಿದ್ದನ್ನು ಬಿಟ್ಟರೆ ಉಳಿದ ಆಟಗಾರರ್ಯಾರು 10 ರ ಗಡಿ ದಾಟಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಕ್ಷಿಣ ಆಫ್ರಿಕಾ ಬೌಲರ್‌ಗಳಾದ ನಾಂದ್ರೆ ಬರ್ಗರ್ 33/4, ಮ್ಯಾಕ್ರೊ ಜಾನ್ಸನ್ 36/3 ಹಾಗೂ ಕಗಿಸೋ ರಬಾಡ 32/2 ವಿಕೆಟ್ ಪಡೆದು ಭಾರತದ ಬ್ಯಾಟ್ಸ್‌ಮನ್‌ಗಳನ್ನು ಒಬ್ಬರ ಹಿಂದೆ ಒಬ್ಬರಂತೆ ಪೆಲಿಯನ್‌ಗೆ ಅಟ್ಟಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ₹40 ಸಾವಿರ ಕೋಟಿ ಲೂಟಿ ಆರೋಪ; ಪ್ರಧಾನಿ ಮೋದಿ ಏನು ಹೇಳುತ್ತಾರೆ?

ದ್ವಿಶತಕ ವಂಚಿತ ಡೀನ್‌ ಎಲ್ಗರ್

256/5 ವಿಕೆಟ್‌ನೊಂದಿಗೆ ಮೂರನೇ ದಿನದಾಟ ಆರಂಭಿಸಿದ ಡೀನ್ ಎಲ್ಗರ್ ಹಾಗೂ ಮ್ಯಾಕ್ರೋ ಜಾನ್ಸನ್ 6ನೇ ವಿಕೆಟ್ ಜೊತೆಯಾಟಕ್ಕೆ 111 ರನ್‌ ಪೇರಿಸಿದರು. 185 ರನ್‌ ಗಳಿಸಿದ್ದ  ಡೀನ್ ಎಲ್ಗರ್ ಶಾರ್ದೂಲ್‌ ಠಾಕೂರ್‌ ಬೌಲಿಂಗ್‌ನಲ್ಲಿ ವಿಕೆಟ್‌ ಕೀಪರ್‌ ಕೆ ಎಲ್‌ ರಾಹುಲ್‌ಗೆ ಕ್ಯಾಚಿತ್ತು 15 ರನ್‌ಗಳಿಂದ ದ್ವಿಶತಕ ವಂಚಿತರಾದರು. ಅವರ 287 ಚೆಂಡುಗಳ ಸೊಗಸಾದ ಇನಿಂಗ್ಸ್‌ನಲ್ಲಿ 28 ಬೌಂಡರಿಗಳಿದ್ದವು

ಎಲ್ಗರ್‌ ನಂತರ ಮ್ಯಾಕ್ರೊ ಜಾನ್ಸ್‌ನ್ ಬಿಟ್ಟರೆ ಉಳಿದ ಬ್ಯಾಟ್ಸ್‌ಮನ್‌ಗಳು ಹೆಚ್ಚು ಆಟವಾಡಲಿಲ್ಲ. ಕೊನೆಯವರೆಗೂ ಅಜೇಯರಾಗಿ ಉಳಿದ  ಮ್ಯಾಕ್ರೊ ಜಾನ್ಸ್‌ನ್  11 ಬೌಂಡರಿ ಹಾಗೂ 1 ಸಿಕ್ಸರ್‌ನೊಂದಿಗೆ 84 ರನ್‌ಗಳನ್ನು ಸಿಡಿಸಿ ಅಜೇಯರಾಗಿ ಉಳಿದು ತಂಡದ ಮೊತ್ತವನ್ನು 408ರ ಗಡಿ ತಲುಪಲು ಕಾರಣರಾದರು

ಭಾರತದ ಪರ ಬುಮ್ರಾ 4, ಸಿರಾಜ್ 2 ಹಾಗೂ ಅಶ್ವಿನ್, ಶಾರ್ದೂಲ್‌, ಪ್ರಸಿದ್ಧ ತಲಾ ಒಂದೊಂದು ವಿಕೆಟ್ ಪಡೆದರು. 185 ರನ್‌ ಗಳಿಸಿದ ಡೀನ್ ಎಲ್ಗರ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...