ಸ್ಪಿನ್ನರ್‌ಗಳ ದಾಳಿಗೆ ಮಂಕಾದ ನ್ಯೂಜಿಲೆಂಡ್: ಟೀಮ್ ಇಂಡಿಯಾ ಹಿಡಿತದಲ್ಲಿ ಕೊನೆಯ ಟೆಸ್ಟ್‌

Date:

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಎರಡನೇ ದಿನ ಟೀಮ್ ಇಂಡಿಯಾ ಹಿಡಿತ ಸಾಧಿಸಿದೆ. ಎರಡನೇ ಇನ್ನಿಂಗ್ಸ್‌ನ ಬ್ಯಾಟಿಂಗ್ ಆರಂಭಿಸಿರುವ ಕಿವೀಸ್, ಟೀಮ್ ಇಂಡಿಯಾದ ಸ್ಪಿನ್ನರ್‌ಗಳ ದಾಳಿಯಿಂದ ಸಂಕಷ್ಟಕ್ಕೆ ಸಿಲುಕಿದ್ದು, ಎರಡನೇ ದಿನದಾಟದ ಅಂತ್ಯದ ವೇಳೆಗೆ 171 ರನ್ ಗಳಿಸುವಷ್ಟರಲ್ಲಿ 9 ವಿಕೆಟ್‌ಗಳನ್ನು ಕಳೆದುಕೊಂಡಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾದ ಸ್ಪಿನ್ನರ್‌ಗಳಾದ ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್‌ ಸುಂದರ್‌ ಸ್ಪಿನ್‌ ದಾಳಿಗೆ ಸಿಲುಕಿದ್ದ ಕಿವೀಸ್‌ ತಂಡ 235 ರನ್‌ಗಳಿಗೆ ಆಲೌಟ್‌ ಆಗಿತ್ತು. ಆ ಬಳಿಕ ಮೊದಲ ಇನ್ನಿಂಗ್ಸ್‌ ಆರಂಭಿಸಿದ್ದ ಟೀಮ್ ಇಂಡಿಯಾ, ಆರಂಭಿಕ ಆಘಾತಕ್ಕೆ ಸಿಲುಕಿತ್ತಾದರೂ, ಶುಭಮನ್ ಗಿಲ್ ಹಾಗೂ ರಿಷಭ್ ಪಂತ್ ಅವರ ಅರ್ಧಶತಕದ ನೆರವಿನಿಂದ 263 ರನ್‌ಗಳಿಗೆ ಆಲೌಟ್ ಆಗಿತ್ತು. ಆ ಮೂಲಕ 28 ರನ್‌ಗಳ ಮುನ್ನಡೆ ಸಾಧಿಸಿತ್ತು.

ಎರಡನೇ ದಿನದಾಟದಲ್ಲೇ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಟಾಮ್ ಲ್ಯಾಥಮ್ ನೇತೃತ್ವದ ಕಿವೀಸ್ ತಂಡ, ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಅವರ ಸ್ಪಿನ್ ದಾಳಿಗೆ ಸಿಲುಕಿ, ಎರಡನೇ ದಿನದಾಟದ ಅಂತ್ಯದ ವೇಳೆಗೆ 171 ರನ್ ಗಳಿಸುವಷ್ಟರಲ್ಲಿ 9 ವಿಕೆಟ್‌ಗಳನ್ನು ಕಳೆದುಕೊಂಡಿದೆ. ಆ ಮೂಲಕ ಕೇವಲ 143 ರನ್‌ಗಳ ಮುನ್ನಡೆ ಸಾಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡನೇ ಇನ್ನಿಂಗ್ಸ್‌ನ ಆರಂಭದ ಓವರ್‌ನಲ್ಲೇ ನ್ಯೂಜಿಲೆಂಡ್ ನಾಯಕ ಟಾಮ್ ಲ್ಯಾಥಮ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ವೇಗದ ಬೌಲರ್ ಆಕಾಶ್ ದೀಪ್, ಸಂಕಷ್ಟ ತಂದೊಡ್ಡಿದರು. ಬಳಿಕ ದಾಳಿಗಿಳಿದ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ನ್ಯೂಝಿಲ್ಯಾಂಡ್ ಬ್ಯಾಟರ್‌ಗಳನ್ನು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲು ಬಿಡಲಿಲ್ಲ.

ಇದನ್ನು ಓದಿದ್ದೀರಾ? 3ನೇ ಟೆಸ್ಟ್‌ | ಶತಕ ವಂಚಿತ ಶುಭಮನ್ ಗಿಲ್: ಟೀಮ್ ಇಂಡಿಯಾಕ್ಕೆ 28 ರನ್ ಮುನ್ನಡೆ

ಟೀಮ್ ಇಂಡಿಯಾದ ಸ್ಪಿನ್ ದಾಳಿಯ ಹೊರತಾಗಿಯೂ ಕೂಡ ಆತಿಥೇಯರ ಪರವಾಗಿ ವಿಲ್ ಯಂಗ್ ಓರ್ವರಷ್ಟೇ ಅರ್ಧಶತಕ ಗಳಿಸುವಲ್ಲಿ ಸಫಲರಾದರು. 100 ಎಸೆತಗಳಲ್ಲಿ 2 ಬೌಂಡರಿ ಹಾಗೂ ಒಂದು ಸಿಕ್ಸ್‌ನ ನೆರವಿನಿಂದ 51 ರನ್ ಗಳಿಸಿದ ಯಂಗ್, ಅಶ್ವಿನ್ ಅವರ ಕ್ಯಾರಂ ಬಾಲ್‌ಗೆ ಬಲಿಯಾಗಿ, ಕಾಟ್ ಆ್ಯಂಡ್ ಬೌಲ್ಡ್ ಆಗುವ ಮೂಲಕ ವಿಕೆಟ್ ಒಪ್ಪಿಸಿದರು.

ಉಳಿದಂತೆ ನ್ಯೂಜಿಲೆಂಡ್ ಪರವಾಗಿ ಫಿಲಿಪ್ಸ್ 26 ರನ್, ಡೆವೊನ್ ಕಾನ್ವೆ 22, ಡೇರೆಲ್ ಮಿಚೆಲ್ 21 ರನ್ ಗಳಿಸಿದರು.

ಎರಡನೆ ದಿನ ಟೀಮ್ ಇಂಡಿಯಾ ಪರವಾಗಿ ಕರಾರುವಕ್ಕಾದ ದಾಳಿ ನಡೆಸಿದ ರವೀಂದ್ರ ಜಡೇಜಾ 52ಕ್ಕೆ 4 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರೆ, ರವಿಚಂದ್ರನ್ ಅಶ್ವಿನ್ 63ಕ್ಕೆ 3 ವಿಕೆಟ್ ಗಳಿಸಿದ್ದಾರೆ. ಉಳಿದಂತೆ ಆಕಾಶ್ ದೀಪ್ ಹಾಗೂ ವಾಷಿಂಗ್ಟನ್ ಸುಂದರ್ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಸಫಲರಾದರು.

ಸಂಕ್ಷಿಪ್ತ ಸ್ಕೋರ್ ವಿವರ:

ನ್ಯೂಜಿಲೆಂಡ್: ಮೊದಲ ಇನ್ನಿಂಗ್ಸ್‌ 235

ಟೀಮ್ ಇಂಡಿಯಾ: ಮೊದಲ ಇನ್ನಿಂಗ್ಸ್‌ 263

ನ್ಯೂಜಿಲೆಂಡ್: ಎರಡನೇ ಇನ್ನಿಂಗ್ಸ್‌ 171/9 ವಿಕೆಟ್

143 ರನ್‌ಗಳ ಮುನ್ನಡೆ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...