4ನೇ ಟೆಸ್ಟ್‌ | ಇಂಗ್ಲೆಂಡ್‌ ಸ್ಪಿನ್‌ ದಾಳಿಗೆ ನಲುಗಿದ ಟೀಮ್ ಇಂಡಿಯಾ; ಯಶಸ್ವಿ ಜೈಸ್ವಾಲ್ ಹೊಸ ದಾಖಲೆ

Date:

ರಾಂಚಿಯ ಜೆಎಸ್‌ಸಿಎ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್‌ನ ಎರಡನೇ ದಿನದಾಟದಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡದ ಸಂಘಟಿತ ಸ್ಪಿನ್‌ ದಾಳಿಯ ಪರಿಣಾಮ, ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಕೇವಲ 219 ರನ್ ಗಳಿಸುವಷ್ಟರಲ್ಲಿ ಏಳು ವಿಕೆಟ್ ಕಳೆದುಕೊಂಡಿದ್ದು, ಸಂಕಷ್ಟಕ್ಕೆ ಸಿಲುಕಿದೆ.

ಇಂಗ್ಲೆಂಡ್ ತಂಡ ಮೊದಲ ಇನಿಂಗ್ಸ್‌ನಲ್ಲಿ ಜೋ ರೂಟ್ ಶತಕದ ನೆರವಿನಿಂದ ಮೊದಲ ದಿನದಾಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 302 ರನ್‌ ಗಳಿಸಿತ್ತು. ಇಂದು ಮತ್ತೆ ಬ್ಯಾಟಿಂಗ್ ಆರಂಭಿಸಿದ್ದ ಇಂಗ್ಲೆಂಡ್ ಅನ್ನು 353 ರನ್ ಗಳಿಸುವಷ್ಟರಲ್ಲಿ ಟೀಮ್ ಇಂಡಿಯಾ ಆಲೌಟ್ ಮಾಡಿತ್ತು. ನಿನ್ನೆ ಶತಕ ಗಳಿಸಿದ್ದ ಜೋ ರೂಟ್ 122 ರನ್ ಗಳಿಸಿ, ಔಟಾಗದೆ ಉಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೀಮ್ ಇಂಡಿಯಾ ಪರ ಉತ್ತಮ ಬೌಲಿಂಗ್ ನಡೆಸಿದ ಆಲ್‌ರೌಂಡರ್ ರವೀಂದ್ರ ಜಡೇಜಾ 67ಕ್ಕೆ 4 ವಿಕೆಟ್ ಗಳಿಸಿದರೆ, ಯುವ ಬೌಲರ್ ಆಕಾಶ್ ದೀಪ್ ಮೂರು, ಮೊಹಮ್ಮದ್ ಸಿರಾಜ್ 2 ವಿಕೆಟ್ ಗಳಿಸಿದರೆ, ಆರ್ ಅಶ್ವಿನ್ 1 ವಿಕೆಟ್ ಗಳಿಸಿದರು.

ಇಂಗ್ಲೆಂಡ್‌ನ 353 ರನ್ ಗಳಿಸಿದ ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಮೂರನೇ ಓವರ್‌ನಲ್ಲಿ ನಾಯಕ ರೋಹಿತ್ ಶರ್ಮಾರ ವಿಕೆಟ್ ಗಳಿಸುವ ಮೂಲಕ ವೇಗಿ ಜೇಮ್ಸ್ ಆ್ಯಂಡರ್‌ಸನ್ ಆಘಾತ ನೀಡಿದರು. ಕೇವಲ 9 ಎಸೆತಗಳಲ್ಲಿ 2 ರನ್ ಗಳಿಸಿದ್ದ ರೋಹಿತ್ ಪೆವಿಲಿಯನ್ ಕಡೆಗೆ ಹೆಜ್ಜೆ ಹಾಕಿದರು. ರೋಹಿತ್ ವಿಕೆಟ್ ಕಳೆದುಕೊಂಡ ವೇಳೆ ಟೀಮ್ ಇಂಡಿಯಾ ಕೇವಲ 4 ರನ್ ದಾಖಲಿಸಿತ್ತು.

ಬಳಿಕ ಕ್ರೀಸ್‌ನಲ್ಲಿದ್ದ ಯಶಸ್ವಿ ಜೈಸ್ವಾಲ್‌ಗೆ ಜೊತೆಯಾದ ಶುಭ್‌ಮನ್‌ ಗಿಲ್ ಉತ್ತಮ ಜೊತೆಯಾಟ ನೀಡಿದರು. ಈ ಜೋಡಿಯು 82 ರನ್‌ಗಳ ಜೊತೆಯಾಟ ನಡೆಸಿತು.

ಗಿಲ್, ಇಂಗ್ಲೆಂಡ್‌ನ ಯುವ ಸ್ಪಿನ್ನರ್‌ ಬಶೀರ್ ಅವರಿಗೆ ವಿಕೆಟ್ ಒಪ್ಪಿಸುವುದಕ್ಕೂ ಮುನ್ನ 38 ರನ್ ಗಳಿಸಿದರು. ಬಳಿಕ ಬಂದ ರಜತ್ ಪಾಟೀದಾರ್ 17 ರನ್, ರವೀಂದ್ರ ಜಡೇಜಾ 12 ರನ್ ಅವರನ್ನೂ ಕೂಡ ತನ್ನ ಸ್ಪಿನ್ ಬಲೆಗೆ ಬೀಳಿಸಿದ ಸ್ಪಿನ್ನರ್‌ ಬಶೀರ್, ಅರ್ಧಶತಕ ಗಳಿಸಿ ಮುಂದುವರಿಯುತ್ತಿದ್ದ ಯಶಸ್ವಿ ಜೈಸ್ವಾಲ್ ಅವರನ್ನೂ ಕೂಡ ಕ್ಲೀನ್ ಬೌಲ್ಡ್ ಮಾಡಿದರು. ಆ ಮೂಲಕ ಒಟ್ಟು 4 ವಿಕೆಟ್ ಗಳಿಸುವಲ್ಲಿ ಸಫಲರಾದರು.

ಮೊದಲ ಪಂದ್ಯದ ಎರಡೂ ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಗಳಿಸಿ ಮಿಂಚಿದ್ದ ಯುವ ಬ್ಯಾಟರ್ ಸರ್ಫರಾಝ್ ಖಾನ್ 14 ರನ್ ಗಳಿಸಿ, ಸ್ಪಿನ್ನರ್ ಹಾರ್ಟ್‌ಲೀಗೆ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ಅಶ್ವಿನ್ (1 ರನ್) ಅವರನ್ನೂ ಕೂಡ ಹಾರ್ಟ್‌ಲೀ ಎಲ್‌ಬಿಡಬ್ಲ್ಯೂ ಬಲೆಗೆ ಬೀಳಿಸಿದರು. ಇಂಗ್ಲೆಂಡ್‌ನ ಸಂಘಟಿತ ದಾಳಿಗೆ ಕುಸಿದ ಟೀಮ್ ಇಂಡಿಯಾ 177 ರನ್ ಗಳಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡಿತ್ತು.

ಈ ವೇಳೆ ಯುವ ಬ್ಯಾಟರ್, ವಿಕೆಟ್ ಕೀಪರ್ ಧ್ರುವ್ ಜುರೆಲ್ ಹಾಗೂ ಬೌಲರ್ ಕುಲ್‌ದೀಪ್ ಯಾದವ್ ರಕ್ಷಣಾತ್ಮಕ ಆಟವಾಡುವ ಮೂಲಕ ಎರಡನೇ ದಿನ ಆಲೌಟ್ ಆಗುವುದರಿಂದ ತಪ್ಪಿಸಿದ್ದಾರೆ. ಈ ಜೋಡಿಯು 42 ರನ್‌ಗಳ ಜೊತೆಯಾಟ ನಡೆಸಿದೆ. ಆ ಮೂಲಕ ದಿನದಾಟದ ಅಂತ್ಯದ ವೇಳೆ ಟೀಮ್ ಇಂಡಿಯಾ 7 ವಿಕೆಟ್ ಕಳೆದುಕೊಂಡು 219 ರನ್ ದಾಖಲಿಸಿದೆ. ಆ ಮೂಲಕ ಇನ್ನೂ 134 ರನ್‌ಗಳ ಹಿನ್ನಡೆಯಲ್ಲಿದೆ. ಸದ್ಯ ವಿಕೆಟ್ ಕೀಪರ್ ಧ್ರುವ್ ಜುರೆಲ್ 30 ರನ್ ಹಾಗೂ ಕುಲ್‌ದೀಪ್ ಯಾದವ್ 17 ರನ್ ಗಳಿಸಿ, ಮೂರನೇ ದಿನದಾಟಕ್ಕೆ ಕ್ರೀಸ್‌ ಕಾಯ್ದುಕೊಂಡಿದ್ದಾರೆ.

ಇಂಗ್ಲೆಂಡ್ ಪರ ಬೌಲಿಂಗ್‌ನಲ್ಲಿ 32 ಓವರ್ ಎಸೆದಿರುವ ಯುವ ಸ್ಪಿನ್ನರ್‌ ಬಶೀರ್ 82ಕ್ಕೆ 4 ವಿಕೆಟ್ ಪಡೆದರೆ, ಹಾರ್ಟ್‌ಲೀ 47ಕ್ಕೆ 2 ವಿಕೆಟ್ ಪಡೆದಿದ್ದಾರೆ. ಜೇಮ್ಸ್ ಆ್ಯಂಡರ್‌ಸನ್ ಒಂದು ವಿಕೆಟ್ ತಮ್ಮದಾಗಿಸಿಕೊಂಡಿದ್ದಾರೆ.

ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಯಶಸ್ವಿ ಜೈಸ್ವಾಲ್

ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೂಲಕ ಯಶಸ್ವಿ ಜೈಸ್ವಾಲ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ 117 ಎಸೆತಗಳನ್ನು ಎದುರಿಸಿ 1 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 73 ರನ್ ಬಾರಿಸಿದರು. ಈ ರನ್​ಗಳೊಂದಿಗೆ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 600+ ರನ್ ಕಲೆಹಾಕಿದ ಭಾರತದ ಮೂರನೇ ಬ್ಯಾಟರ್ ಎನಿಸಿಕೊಂಡರು.

ಇದಕ್ಕೂ ಮುನ್ನ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಮತ್ತು ರಾಹುಲ್ ದ್ರಾವಿಡ್ ಈ ಸಾಧನೆ ಮಾಡಿದ್ದರು. 2002ರಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರಾಹುಲ್ ದ್ರಾವಿಡ್ 6 ಇನಿಂಗ್ಸ್​ಗಳಲ್ಲಿ 602 ರನ್, 2016ರಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ವಿರಾಟ್ ಕೊಹ್ಲಿ, 8 ಇನಿಂಗ್ಸ್​ಗಳ ಮೂಲಕ 655 ರನ್ ಬಾರಿಸಿದ್ದರು. ಇವರಿಬ್ಬರೂ ಬಲಗೈ ಬ್ಯಾಟರ್‌ಗಳು.

ಸದ್ಯ ಟೆಸ್ಟ್ ಸರಣಿಯೊಂದರಲ್ಲಿ ಟೀಮ್ ಇಂಡಿಯಾ ಪರ 600+ ರನ್ ಕಲೆಹಾಕಿದ ಮೊದಲ ಎಡಗೈ ಬ್ಯಾಟರ್ ಎಂಬ ವಿಶೇಷ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ನಿರ್ಮಿಸಿದ್ದಾರೆ. ಯಶಸ್ವಿ ಜೈಸ್ವಾಲ್ ಈವರೆಗೆ 103 ಸರಾಸರಿಯಲ್ಲಿ 618 ರನ್ ದಾಖಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...