ಐಪಿಎಲ್ | 20 ಓವರ್‌ ಪಂದ್ಯವನ್ನು 9.4 ಓವರ್‌ಗಳಲ್ಲಿ ಮುಗಿಸಿದ ಟ್ರಾವಿಸ್ ಹೆಡ್-ಅಭಿಷೇಕ್ ಶರ್ಮಾ!

Date:

ಪಂದ್ಯ 20 ಓವರ್‌ಗಳ ಟಿ20. ಗುರಿ ಇದ್ದದ್ದು 166 ರನ್. ಆದರೆ ಹೈದರಾಬಾದ್ ತಂಡ, ಈ ಗುರಿಯನ್ನು ಮುಗಿಸಿದ್ದು ಮಾತ್ರ 9.4 ಓವರ್‌ಗಳಲ್ಲಿ. ಹೌದು. ಇದನ್ನು ನೀವು ನಂಬಲೇಬೇಕು.

ಲಕ್ನೋ ವಿರುದ್ಧ ಇಂದು ನಡೆದ ಐಪಿಎಲ್‌ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡದ ಆರಂಭಿಕ ಆಟಗಾರರಾದ ಟ್ರಾವಿಸ್ ಹೆಡ್-ಅಭಿಷೇಕ್ ಶರ್ಮಾ ಜೋಡಿಯ ಸ್ಫೋಟಕ ಬ್ಯಾಟಿಂಗ್‌ನಿಂದಾಗಿ 20 ಓವರ್‌ಗಳ ಎರಡನೇ ಇನ್ನಿಂಗ್ಸ್‌ ಕೇವಲ 9.4 ಓವರ್‌ಗಳಲ್ಲಿ ಮುಗಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೈದರಾಬಾದ್‌ನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌)ನ 57ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು 10 ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ್ದ ಕನ್ನಡಿಗೆ ಕೆ ಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಹೈದರಾಬಾದ್‌ಗೆ 166 ರನ್‌ಗಳ ಸಾಧಾರಣ ಮೊತ್ತದ ಗುರಿ ನೀಡಿತ್ತು.

ಹೈದರಾಬಾದ್‌ ಪರವಾಗಿ ಆರಂಭಿಕರಾಗಿ ಬಂದಿದ್ದ ಟ್ರಾವಿಸ್ ಹೆಡ್-ಅಭಿಷೇಕ್ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್‌ನ ನೆರವಿನಿಂದ ಯಾವುದೇ ವಿಕೆಟ್ ಕಳೆದುಕೊಳ್ಳದೆ ಕೇವಲ 9.4 ಓವರ್‌ಗಳಲ್ಲಿ ಈ ಗುರಿಯನ್ನು ಮುಟ್ಟಿದೆ. ಈ ಭರ್ಜರಿ ಗೆಲುವಿನೊಂದಿಗೆ ಸನ್‌ರೈಸರ್ಸ್‌ ಹೈದರಾಬಾದ್ ತಂಡವು 2024ರ ಐಪಿಎಲ್‌ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಬಂದಿದ್ದು, ಪ್ಲೇ-ಆಫ್ ಕನಸನ್ನು ಇನ್ನೂ ಜೀವಂತವಾಗಿರಿಸಿದೆ.

ಇಂದಿನ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್ ಟ್ರಾವಿಸ್ ಹೆಡ್ ಕೇವಲ 30 ಎಸೆತಗಳಲ್ಲಿ 8 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್‌ನೊಂದಿಗೆ 89 ರನ್ ಹಾಗೂ ಅಭಿಷೇಕ್ ಶರ್ಮಾ 28 ಎಸೆತಗಳಲ್ಲಿ 8 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್‌ನೊಂದಿಗೆ 75 ರನ್ ಗಳಿಸಿ, ಅಜೇಯರಾಗುಳಿದರು.

ಕೇವಲ 9.4 ಓವರ್‌ಗಳಲ್ಲಿ 166 ರನ್‌ಗಳ ಗುರಿಯನ್ನು ಬೆನ್ನಟ್ಟುವ ಮೂಲಕ ಸನ್‌ರೈಸರ್ಸ್‌ ಹೈದರಾಬಾದ್ ತಂಡವು ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...