ಐಪಿಎಲ್ | 278 ರನ್‌ಗಳ ಬೃಹತ್ ಗುರಿಯನ್ನು ತಲುಪಲು ಎಡವಿದ ಮುಂಬೈ ಇಂಡಿಯನ್ಸ್‌; SRHಗೆ ಭರ್ಜರಿ ಜಯ

Date:

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡ ನೀಡಿದ್ದ 278 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಹಾರ್ದಿಕ್ ಪಾಂಡ್ಯಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ, ಕೊನೆಯವರೆಗೂ ಹೋರಾಟ ನಡೆಸಿದರೂ 31 ರನ್‌ಗಳಿಂದ ಸೋಲನುಭವಿಸಿತು.

ಮುಂಬೈ ತಂಡವು ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 246 ರನ್ ಗಳಿಸಲಷ್ಟೇ ಶಕ್ತವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

278 ರನ್‌ಗಳ ಗುರಿಯನ್ನು ಮುಟ್ಟುವ ನಿಟ್ಟಿನಲ್ಲಿ ಮುಂಬೈ ಇಂಡಿಯನ್ಸ್‌ನ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಭರ್ಜರಿ ಆರಂಭವನ್ನು ಒದಗಿಸಿದ್ದರು. ಕೇವಲ 3 ಓವರ್‌ಗಳಲ್ಲಿ 50 ರನ್ ದಾಖಲಿಸುವ ಮೂಲಕ ಗುರಿ ಮುಟ್ಟುವ ಯೋಜನೆ ಹಾಕಿಕೊಂಡಿದ್ದರು. ಆದರೆ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದ ಇಶಾನ್ ಕಿಶನ್ 13 ಎಸೆತಗಳಲ್ಲಿ 34 ರನ್ ಗಳಿಸಿದ್ದಾಗ ಔಟಾದರು.

ರೋಹಿತ್ ಶರ್ಮಾ ಕೂಡ ವೇಗವಾಗಿ ಸ್ಕೋರ್ ಮಾಡುತ್ತಿದ್ದರು, ಅವರನ್ನು ಪ್ಯಾಟ್ ಕಮಿನ್ಸ್ ಓವರ್‌ನಲ್ಲಿ ಔಟಾದರು. ರೋಹಿತ್ ಶರ್ಮಾ 12 ಎಸೆತಗಳಲ್ಲಿ 26 ರನ್ ಗಳಿಸಿದರು. ನಮನ್ ಧೀರ್ 14 ಎಸೆತಗಳಲ್ಲಿ 30 ರನ್ ಗಳಿಸಿ, ಔಟಾದರು. ಆ ಬಳಿಕ ಕ್ರೀಸ್‌ನಲ್ಲಿದ್ದ ತಿಲಕ್ ವರ್ಮಾ ಹೋರಾಟ ನಡೆಸಿದರೂ ಸಾಧ್ಯವಾಗಲಿಲ್ಲ.34 ಎಸೆತಗಳಲ್ಲಿ 64 ರನ್ ಗಳಿಸಿ ಔಟಾದರು. ನಾಯಕ ಹಾರ್ದಿಕ್ ಪಾಂಡ್ಯ 20 ಎಸೆತಗಳಲ್ಲಿ 24 ರನ್ ಗಳಿಸಲಷ್ಟೇ ಶಕ್ತರಾದರು. ಕೊನೆಯಲ್ಲಿ 22 ಎಸೆತಗಳಲ್ಲಿ 42 ರನ್ ದಾಖಲಿಸಿ, ಔಟಾಗದೆ ಉಳಿದರು.

ಹೈದರಾಬಾದ್‌ನ 277 ಹಾಗೂ ಮುಂಬೈ ಇಂಡಿಯನ್ಸ್‌ನ 246 ರನ್ ಸೇರಿ ಇಂದಿನ ಒಂದೇ ಪಂದ್ಯದಲ್ಲಿ  523 ರನ್‌ ದಾಖಲಾಗಿದೆ.

ಒಂದೇ ಪಂದ್ಯದಲ್ಲಿ 38 ಸಿಕ್ಸ್, 31 ಬೌಂಡರಿ

ಮೊದಲು ಬ್ಯಾಟಿಂಗ್ ನಡೆಸಿದ್ದ ಸನ್‌ರೈಸರ್ಸ್‌ ಹೈದರಾಬಾದ್ 18 ಸಿಕ್ಸ್ ಬಾರಿಸಿದ್ದರೆ, 19 ಬೌಂಡರಿ ಬಾರಿಸಿತ್ತು. ಮುಂಬೈ ಇಂಡಿಯನ್ಸ್ ಪರವಾಗಿ 20 ಸಿಕ್ಸ್ ಮತ್ತು 12 ಬೌಂಡರಿ ದಾಖಲಾಯಿತು. ಆ ಮೂಲಕ ಒಂದೇ ಪಂದ್ಯದಲ್ಲಿ 38 ಸಿಕ್ಸ್ ಹಾಗೂ 31 ಬೌಂಡರಿ ದಾಖಲಾಯಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...