ಐಪಿಎಲ್ | ‘ಪವರ್ ಪ್ಲೇ’ಯಲ್ಲಿ 125 ರನ್ ಚಚ್ಚಿದ ಹೈದರಾಬಾದ್: T20 ಇತಿಹಾಸದಲ್ಲೇ ಹೊಸ ದಾಖಲೆ

Date:

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್‌)ನ 35ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ, ಪ್ಯಾಟ್‌ ಕಮಿನ್ಸ್‌ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್‌ ತಂಡ ಬ್ಯಾಟಿಂಗ್‌ ಮಾಡುತ್ತಿದೆ.

ಟಾಸ್ ಸೋತು ಬ್ಯಾಟಿಂಗ್ ನಡೆಸಿದರೂ, ‘ಪವರ್ ಪ್ಲೇ’ಯಲ್ಲಿ 125 ರನ್ ಚಚ್ಚುವ ಮೂಲಕ ಸನ್‌ರೈಸರ್ಸ್‌ ಹೈದರಾಬಾದ್ ತಂಡವು, T20 ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರಂಭಿಕರಾಗಿ ಬ್ಯಾಟಿಂಗ್‌ ಆರಂಭಿಸಿದ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್‌ ನಡೆಸುವ ಮೂಲಕ ಹೊಸ ವಿಶ್ವದಾಖಲೆ ಬರೆದಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್‌ನ ಬೌಲರ್‌ಗಳನ್ನು ಮೊದಲ ಓವರ್‌ನ ಎರಡನೇ ಎಸೆತದಿಂದಲೇ ಕಾಡಲಾರಂಭಿಸಿದ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ, ಕೇವಲ 16 ಎಸೆತಗಳಲ್ಲೇ 50 ರನ್ ಪೂರೈಸಿಕೊಂಡರು. ಆ ಬಳಿಕ ಆರು ಓವರ್ ಮುಗಿದಾಗ 125 ರನ್ ಒಟ್ಟುಗೂಡಿಸುವ ಮೂಲಕ, ಟಿ20 ಕ್ರಿಕೆಟ್‌ನಲ್ಲಿ ನೂತನ ವಿಶ್ವದಾಖಲೆ ಬರೆದಿದ್ದಾರೆ. ಯಾವುದೇ ವಿಕೆಟ್ ನಷ್ಟವಿಲ್ಲದೆಯೇ ಸನ್‌ರೈಸರ್ಸ್‌ ಹೈದರಾಬಾದ್ ಈ ಸಾಧನೆ ಮಾಡಿದೆ.

ಆರ್‌ಸಿಬಿ ವಿರುದ್ಧ ನಡೆದಿದ್ದ T20 ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡವು, ಪವರ್ ಪ್ಲೇಯಲ್ಲಿ 105 ರನ್ ಗಳಿಸಿದ್ದದ್ದು ಈ ಹಿಂದಿನ ದಾಖಲೆಯಾಗಿತ್ತು.

ಕೇವಲ 16 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಟ್ರಾವಿಸ್ ಹೆಡ್

ಸ್ಫೋಟಕ ಬ್ಯಾಟಿಂಗ್ ನಡೆಸಿದ ವಿಶ್ವಕಪ್ ಫೈನಲ್ ಪಂದ್ಯದ ಹೀರೋ ಟ್ರಾವಿಸ್ ಹೆಡ್, ಕೇವಲ 16 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಮಿಂಚಿದರು.

ಐಪಿಎಲ್ ಇತಿಹಾಸದಲ್ಲೇ ಗರಿಷ್ಠ ಸ್ಕೋರ್ ದಾಖಲಿಸಿರುವ ಎಸ್‌ಆರ್‌ಹೆಚ್

ರಾಯಲ್ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ತಂಡದ ವಿರುದ್ಧ ಏಪ್ರಿಲ್ 15ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡವು, 20 ಓವರ್‌ಗಳಲ್ಲಿ ಕೇವಲ ಮೂರು ವಿಕೆಟ್ ಕಳೆದುಕೊಂಡು 287 ರನ್‌ಗಳನ್ನು ಕಲೆ ಹಾಕಿತ್ತು. ಇದು 17 ವರ್ಷದ ಐಪಿಎಲ್‌ನ ಇತಿಹಾಸದಲ್ಲೇ ತಂಡ ಬೃಹತ್ ಮೊತ್ತವಾಗಿದೆ. ಇದೇ ಸೀಸನ್‌ನಲ್ಲಿ ಮುಂಬೈ ವಿರುದ್ಧ ದಾಖಲಿಸಿದ್ದ 277 ರನ್‌ಗಳ ದಾಖಲೆಯನ್ನು ಸ್ವತಃ ಹೈದರಾಬಾದ್ ತಂಡವೇ ಮುರಿದು ಹಾಕಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...