ಐಪಿಎಲ್ 2023 | ಮುಂಬೈ ತಂಡಕ್ಕೆ ಹ್ಯಾಟ್ರಿಕ್ ಗೆಲುವು

Date:

ಐಪಿಎಲ್ 16ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವು ಹ್ಯಾಟ್ರಿಕ್ ಗೆಲುವು ಸಾಧಿಸಿದೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮುಂಬೈ, ಆತಿಥೇಯ ಎಸ್‌ಆರ್‌ಎಚ್ ಪಡೆಯನ್ನು 14 ರನ್‌ಗಳ ಅಂತರದಿಂದ ಮಣಿಸಿತು.

ಮುಂಬೈ ಇಂಡಿಯನ್ಸ್ ಮುಂದಿಟ್ಟಿದ್ದ 193 ರನ್‌ಗಳ ಸವಾಲನ್ನು ಬೆನ್ನಟ್ಟುವ ವೇಳೆ, ಸನ್‌ರೈಸರ್ಸ್ ಹೈದರಾಬಾದ್ 19.5 ಓವರ್‌ಗಳಲ್ಲಿ 178 ರನ್‌ಗಳಿಗೆ ಆಲೌಟ್ ಆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಯಾಂಕ್ ಅಗರ್ವಾಲ್ ತಾಳ್ಮೆಯ 48 ರನ್ [ 41 ಎಸೆತ 4 ಬೌಂಡರಿ ಮತ್ತು 1 ಸಿಕ್ಸರ್] ಮತ್ತು ಹೆನ್ರಿಕ್ ಕ್ಲಾಸೆನ್ 16 ಎಸೆತಗಳಲ್ಲಿ 36 ರನ್‌ಗಳಿಸಿದರಾದರೂ ಗೆಲುವಿನ ದಡ ಸೇರಿಸಲಾಗಲಿಲ್ಲ.

ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದ ಬ್ಯಾಟರ್ ಅಬ್ದುಲ್ ಸಮದ್ , 12 ಎಸೆತಗಳಲ್ಲಿ ಕೇವಲ 9 ರನ್‌ಗಳಿಸಲಷ್ಟೇ ಶಕ್ತರಾದರು.

ಅರ್ಜುನ್ ತೆಂಡೂಲ್ಕರ್‌ಗೆ ಚೊಚ್ಚಲ ವಿಕೆಟ್

ವೃತ್ತಿಜೀವನದ ಎರಡನೇ ಐಪಿಎಲ್ ಪಂದ್ಯವನ್ನಾಡಿದ ಅರ್ಜುನ್ ತೆಂಡೂಲ್ಕರ್ ಚೊಚ್ಚಲ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಎಸ್‌ಆರ್‌ಎಚ್ ವಿರುದ್ಧ 2.5 ಓವರ್‌ ಬೌಲಿಂಗ್ ಮಾಡಿದ ಅರ್ಜುನ್ 18 ರನ್ ನೀಡಿ 1 ವಿಕೆಟ್ ಪಡೆದರು.

ಹೈದರಾಬಾದ್ ಗೆಲುವಿಗೆ ಅಂತಿಮ ಓವರ್‌ನಲ್ಲಿ 20 ರನ್‌ಗಳ ಅಗತ್ಯವಿತ್ತು. ಈ ವೇಳೆ ನಿರ್ಣಾಯಕ ಓವರ್ ಎಸೆದ ಅರ್ಜುನ್ ತೆಂಡೂಲ್ಕರ್, ಕೇವಲ 6 ರನ್ ನೀಡಿ, 5ನೇ ಎಸೆತದಲ್ಲಿ ಭುವನೇಶ್ವರ್ ಕುಮಾರ್ ವಿಕೆಟ್ ಪಡೆಯುವ ಮೂಲಕ ಮುಂಬೈ ಗೆಲುವಿನ ಔಪಚಾರಿಕತೆಯನ್ನು ಪೂರ್ತಿಗೊಳಿಸಿದರು.

ಇದಕ್ಕೂ ಮೊದಲು ಬ್ಯಾಟ್ ಮಾಡಿದ್ದ ಮುಂಬೈ ಇಂಡಿಯನ್ಸ್ , ಕ್ಯಾಮರೂನ್ ಗ್ರೀನ್ [ 64 ರನ್*], ಇಶಾನ್ ಕಿಶನ್ 38 ಮತ್ತು ತಿಲಕ್ ವರ್ಮಾ ಗಳಿಸಿದ 37 ರನ್‌ಗಳ ನೆರವಿನಿಂದ 5 ವಿಕೆಟ್ ನಷ್ಟದಲ್ಲಿ 192 ರನ್‌ಗಳಿಸಿತ್ತು.

ಕಳೆದೆರಡು ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೆಕೆಆರ್ ವಿರುದ್ಧ ಗೆಲುವು ಕಂಡಿದ್ದ ರೋಹಿತ್ ಪಡೆ, ಮಂಗಳವಾರ ಹೈದರಾಬಾದ್ ತಂಡವನ್ನು ಅವರದ್ದೇ ತವರಿನಲ್ಲಿ ಮಣಿಸುವ ಮೂಲಕ ಟೂರ್ನಿಯಲ್ಲಿ ಸತತ 3 ನೇ ಗೆಲುವು ದಾಖಲಿಸಿದೆ.

ಆ ಮ‌ೂಲಕ ಅಂಕಪಟ್ಟಿಯಲ್ಲಿ 8 ನೇ ಸ್ಥಾನದಿಂದ 6ನೇ ಸ್ಥಾನಕ್ಕೆ ಜಿಗಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...