ಐಪಿಎಲ್ 2023 | ಮುಂಬೈ vs ಹೈದರಾಬಾದ್; ಹ್ಯಾಟ್ರಿಕ್ ಗೆಲುವಿನತ್ತ ರೋಹಿತ್ ಚಿತ್ತ

Date:

ಐಪಿಎಲ್ 16ನೇ ಆವೃತ್ತಿಯ 25ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಮುಂಬೈ ಇಂಡಿಯನ್ಸ್ ಸವಾಲನ್ನು ಎದುರಿಸಲಿದೆ.

ಉಭಯ ತಂಡಗಳು ಪ್ರಸಕ್ತ ಟೂರ್ನಿಯ ಆರಂಭದ ಎರಡು ಪಂದ್ಯಗಳಲ್ಲಿ ಸೋಲು ಕಂಡಿದ್ದವು. ಆದರೆ ನಂತರದಲ್ಲಿ ಪುಟಿದೆದ್ದು ಎರಡೂ ಪಂದ್ಯಗಳನ್ನು ಗೆದ್ದು ಕಮ್ ಬ್ಯಾಕ್ ಮಾಡಿವೆ.

ಹೀಗಾಗಿ ಇಂದಿನ ಪಂದ್ಯದಲ್ಲಿ ಹ್ಯಾಟ್ರಿಕ್ ಗೆಲುವಿನ ಗುರಿಯೊಂದಿಗೆ ಮುಂಬೈ-ಎಸ್‌ಆರ್‌ಎಚ್ ತಂಡಗಳು ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನಾರೋಗ್ಯದ ಕಾರಣ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬ್ಯಾಟಿಂಗ್ ಮಾಡಿದ್ದ ರೋಹಿತ್ ಶರ್ಮಾ, ಚೇತರಿಸಿಕೊಂಡಿದ್ದಾರೆ. ಹೀಗಾಗಿ ಮಂಗಳವಾರದ ಪಂದ್ಯದಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಕೆಕೆಆರ್ ವಿರುದ್ಧ ಪದಾರ್ಪಣೆ ಪಂದ್ಯವನ್ನಾಡಿದ್ದರು. ಎರಡು ಓವರ್ ಬೌಲಿಂಗ್ ಮಾಡಿದ್ದ ಅರ್ಜುನ್, 16 ರನ್ ನೀಡಿದ್ದರಾದರೂ ವಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದರು. ಅದಾಗಿಯೂ ಇಂದಿನ ಪಂದ್ಯದಲ್ಲಿ ಆಡುವ 11ರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಈ ಬಾರಿಯ ಐಪಿಎಲ್ ಟೂರ್ನಿಯ ಮೊದಲ ಶತಕ ವೀರ ಹ್ಯಾರಿ ಬ್ರೂಕ್, ಎಸ್‌ಆರ್‌ಎಚ್ ತಂಡದ ಬ್ಯಾಟಿಂಗ್ ಬೆನ್ನೆಲುಬಾಗಿದ್ದಾರೆ.
ಆದರೆ ಮತ್ತೋರ್ವ ಪ್ರಮುಖ ಬ್ಯಾಟರ್ ಮಯಾಂಕ್ ಅಗರ್ವಾಲ್, ಫಾರ್ಮ್ ಕಂಡುಕೊಳ್ಳಲು ಒದ್ದಾಡುತ್ತಿದ್ದಾರೆ. ಕಳೆದ 4 ಪಂದ್ಯಗಳಲ್ಲಿ ಮಯಾಂಕ್ ಕ್ರಮವಾಗಿ 27, 8, 21 ಹಾಗೂ 9 ರನ್‌ ಗಳಿಸಿದ್ದಾರೆ.

ಟೂರ್ನಿಯಲ್ಲಿ ಎರಡು ಗೆಲುವು ಮತ್ತು ಸೋಲು ಕಂಡಿರುವ ಮುಂಬೈ-ಎಸ್‌ಆರ್‌ಎಚ್ ತಂಡಗಳು ಅಂಕಪಟ್ಟಿಯಲ್ಲಿ 8 ಮತ್ತು 9ನೇ ಸ್ಥಾನದಲ್ಲಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...