ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಕಳಪೆ ಪ್ರದರ್ಶನ: ಸರ್ಕಾರದಿಂದ ಶ್ರೀಲಂಕಾ ಕ್ರಿಕೆಟ್ ಮಂಡಳಿ ಸಂಪೂರ್ಣ ವಜಾ

Date:

ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡದ ವಿರುದ್ಧ ಕಳಪೆ ಪ್ರದರ್ಶನ ನೀಡಿ ಹೀನಾಯವಾಗಿ ಸೋತ ಕಾರಣ ಶ್ರೀಲಂಕಾದ ಕ್ರೀಡಾ ಸಚಿವ ರೋಷನ್ ರಣಸಿಂಘೆ ಅವರು ಸೋಮವಾರ(ನ.6) ಶ್ರೀಲಂಕಾ ರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ಸಂಪೂರ್ಣವಾಗಿ ವಜಾಗೊಳಿಸಿದ್ದಾರೆ.

1996ರ ಶ್ರೀಲಂಕಾ ವಿಶ್ವಕಪ್‌ ವಿಜೇತ ತಂಡದ ನಾಯಕ ಅರ್ಜುನ ರಣತುಂಗ ಅವರನ್ನು ಮಂಡಳಿಯ ಹೊಸ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ರಣಸಿಂಗ್ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಇದಲ್ಲದೆ ಕ್ರೀಡಾ ಸಚಿವ ರೋಷನ್ ರಣಸಿಂಗ್ ಅವರು ಶ್ರೀಲಂಕಾ ಕ್ರಿಕೆಟ್‌ಗೆ ಮಧ್ಯಂತರ ಸಮಿತಿಯನ್ನು ರಚಿಸಿದ್ದಾರೆ ಎಂದು ಪ್ರಕಟಣೆ ಹೇಳಿದೆ.

ಶ್ರೀಮಂತ ಕ್ರಿಕೆಟ್ ಸಂಸ್ಥೆಯಾಗಿದ್ದ ದ್ವೀಪ ರಾಷ್ಟ್ರದ ಶ್ರೀಲಂಕಾ ಕ್ರಿಕೆಟ್ ಮಂಡಳಿ ಕೆಲವು ವರ್ಷಗಳಿಂದ ಆರ್ಥಿಕವಾಗಿ ಸಂಕಷ್ಟದಲ್ಲಿದೆ. ಜೊತೆಗೆ ವ್ಯಾಪಕ ಭ್ರಷ್ಟಾಚಾರ ಆರೋಪವು ಕೇಳಿ ಬರುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸ ಏಳು ಸದಸ್ಯರ ಸಮಿತಿಯಲ್ಲಿ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮತ್ತು ಮಂಡಳಿಯ ಮಾಜಿ ಅಧ್ಯಕ್ಷರೂ ಇದ್ದಾರೆ.

ಮಂಡಳಿಯ ಎರಡನೇ ಅತ್ಯುನ್ನತ ಅಧಿಕಾರಿ, ಕಾರ್ಯದರ್ಶಿ ಮೋಹನ್ ಡಿ ಸಿಲ್ವಾ ಅವರು ರಾಜೀನಾಮೆ ನೀಡಿದ ಒಂದು ದಿನದ ನಂತರ ಹಳೆಯ ಮಂಡಳಿ ವಜಾಗೊಂಡು ಹೊಸ ಮಂಡಳಿ ಅಸ್ತಿತ್ವಕ್ಕೆ ಬಂದಿದೆ.

ಕಳೆದ ವಾರ ಆತಿಥೇಯ ಭಾರತ ವಿರುದ್ಧ ಶ್ರೀಲಂಕಾವನ್ನು 302 ರನ್‌ಗಳ ವಿಶ್ವಕಪ್‌ನಲ್ಲಿ ಸೋಲಿಸಿದ ನಂತರ ರೋಷನ್ ರಣಸಿಂಘೆ ಅವರು ಇಡೀ ಮಂಡಳಿಯ ರಾಜೀನಾಮೆಗೆ ಸಾರ್ವಜನಿಕವಾಗಿ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಹಾಕಿ: ಭಾರತದ ವನಿತೆಯರಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿ

ಗುರುವಾರ ಮುಂಬೈನಲ್ಲಿ ಭಾರತದ 358 ರನ್‌ಗಳನ್ನು ಬೆನ್ನಟ್ಟಿದ ಶ್ರೀಲಂಕಾ ಒಂದು ಹಂತದಲ್ಲಿ 14/6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ನಂತರ 55 ರನ್‌ಗಳಿಗೆ ಆಲೌಟ್ ಆಯಿತು. ಇದು ಏಕದಿನ ಮಾದರಿಯ ಕ್ರಿಕೆಟ್ ಇತಿಹಾಸದಲ್ಲಿ ನಾಲ್ಕನೇ ಅತಿ ಕಡಿಮೆ ಮೊತ್ತವಾಗಿದೆ.

ಈ ಸೋಲು ಶ್ರೀಲಂಕಾದಲ್ಲಿ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಯಿತು. ಶನಿವಾರದಂದು ಕೋಪಗೊಂಡ ಅಭಿಮಾನಿಗಳು ದೇಶೀಯ ಕ್ರಿಕೆಟ್ ಮಂಡಳಿ ಎದುರು ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ಕೊಲಂಬೊದಲ್ಲಿನ ಕ್ರಿಕೆಟ್ ಮಂಡಳಿ ಕಚೇರಿಯ ಹೊರಗೆ ಭದ್ರತಾ ದೃಷ್ಟಿಯಿಂದ ಪೊಲೀಸರನ್ನು ನಿಯೋಜಿಸಲಾಗಿದೆ.

ಶ್ರೀಲಂಕಾ ಇಂದು (ಸೋಮವಾರ) ಬಾಂಗ್ಲಾದೇಶ ಎದುರು ಆಡಲಿದೆ. ವಿಶ್ವಕಪ್‌ನಲ್ಲಿ ಸೆಮಿಫೈನಲ್‌ ಪ್ರವೇಶಿಸಲು ಉಳಿದ ಎರಡು ಪಂದ್ಯಗಳನ್ನು ಉತ್ತಮ ರನ್‌ ರೇಟ್‌ನೊಂದಿಗೆ ಗೆಲುವು ಸಾಧಿಸುವುದರ ಜೊತೆಗೆ ಟೂರ್ನಿಯ ಇತರ ಉಳಿದ ಪಂದ್ಯಗಳಲ್ಲಿ ಪವಾಡ ಕೂಡ ನಡೆಯಬೇಕಿದೆ. ಶ್ರೀಲಂಕಾ ತನ್ನ ಕೊನೆಯ ಪಂದ್ಯವನ್ನು ನ.9 ರಂದು ಬೆಂಗಳೂರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಆಡಲಿದೆ.

1996ರ ನಂತರ ಶ್ರೀಲಂಕಾದ ಕ್ರಿಕೆಟ್ ಮಂಡಳಿ ಆರ್ಥಿಕ ನೆರವಿಲ್ಲದೆ ತೆವಳುತ್ತ ಸಾಗುತ್ತಿತ್ತು. 1996ರಲ್ಲಿ ಅರ್ಜುನ್‌ ರಣತುಂಗ ನೇತೃತ್ವದ ತಂಡ ಮೊದಲ ಬಾರಿಗೆ ವಿಶ್ವಕಪ್‌ನಲ್ಲಿ ಗೆಲುವು ಸಾಧಿಸಿದ ನಂತರ ಮಂಡಳಿಗೆ ಹಣದ ಹೊಳೆ ಹರಿದು ಶ್ರೀಮಂತ ಸಂಸ್ಥೆಯಾಗಿ ಮಾರ್ಪಟ್ಟಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಮಂಡಳಿಯಲ್ಲಿ ವ್ಯಾಪಕ ಭ್ರಷ್ಟಾಚಾರ ತಾಂಡವವಾಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...