ಐಪಿಎಲ್ | ಸ್ಟೋಯ್ನಿಸ್ ಭರ್ಜರಿ ಶತಕ: ಚೆನ್ನೈಗೆ ತವರಲ್ಲೇ ರೋಚಕವಾಗಿ ಸೋಲುಣಿಸಿದ ಲಕ್ನೋ

Date:

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಇಂದು ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 39ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನೀಡಿದ್ದ ಬೃಹತ್ ಮೊತ್ತವನ್ನು ತಲುಪುವಲ್ಲಿ ಯಶಸ್ವಿಯಾದ ಕನ್ನಡಿಗ ಕೆ ಎಲ್ ರಾಹುಲ್ ನೇತೃತ್ವದ ಲಕ್ನೋ ತಂಡ, ಕೊನೆಯ ಓವರ್‌ನಲ್ಲಿ ರೋಚಕವಾಗಿ ಗೆದ್ದಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಾಯಕ ರುತುರಾಜ್ ಗಾಯಕ್ವಾಡ್ ಅವರ ಭರ್ಜರಿ ಶತಕ ಮತ್ತು ಶಿವಂ ದುಬೆ ಅವರ ಸ್ಫೋಟಕ ಅರ್ಧಶತಕ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 210 ರನ್ ಗಳಿಸಿ, ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 211 ರನ್‌ಗಳ ಸವಾಲಿನ ಗುರಿ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸ್ಫೋಟಕ ಬ್ಯಾಟರ್ ಮಾರ್ಕಸ್ ಸ್ಟೋಯ್ನಿಸ್ ಅವರ ಚೊಚ್ಚಲ ಐಪಿಎಲ್ ಶತಕದ ನೆರವಿನಿಂದ 19.3 ಓವರ್‌ಗಳಲ್ಲಿ ಕೇವಲ 4 ವಿಕೆಟ್‌ಗಳನ್ನು ಕಳೆದುಕೊಂಡು, 213 ರನ್ ದಾಖಲಿಸಿತು.

ಟಿ20 ಇನ್ನಿಂಗ್ಸ್‌ನ ಎರಡನೇ ಹಾಗೂ ಐಪಿಎಲ್‌ನಲ್ಲಿ ಮೊದಲ ಶತಕ ಬಾರಿಸಿದ ಆಸೀಸ್‌ನ ಸ್ಫೋಟಕ ಬ್ಯಾಟರ್ ಸ್ಟೋಯ್ನಿಸ್‌, ಕೊನೆಯ ಓವರ್‌ನಲ್ಲಿ ಲಕ್ನೋಗೆ ಗೆಲ್ಲಲು 17 ರನ್‌ಗಳ ಅವಶ್ಯಕತೆ ಇತ್ತು. ಮುಸ್ತಫಿಝ್‌ ರಹ್ಮಾನ್ ಎಸೆದ ಮೊದಲ ಬಾಲ್‌ ಅನ್ನು ಸಿಕ್ಸರ್‌ಗೆ ಹಾಗೂ ಆ ಬಳಿಕ ಮೂರು ಎಸೆತಗಳಲ್ಲಿ ಭರ್ಜರಿ ಮೂರು ಬೌಂಡರಿಗಳನ್ನು ಬಾರಿಸುವ ಮೂಲಕ ಲಕ್ನೋಗೆ ರೋಚಕ ಜಯ ತಂದುಕೊಟ್ಟರು. ಇದು ಚೆನ್ನೈನ ಚೆಪಾಕ್‌ ಸ್ಟೇಡಿಯಂನಲ್ಲಿ ಅತ್ಯಂತ ಯಶಸ್ವಿ ಚೇಸ್ ಆಗಿದೆ.

63 ಎಸೆತಗಳನ್ನು ಎದುರಿಸಿದ್ದ ಮಾರ್ಕಸ್ ಸ್ಟೋಯ್ನಿಸ್‌, 13 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸ್‌ನ ನೆರವಿನಿಂದ 124 ರನ್‌ ಗಳಿಸುವ ಮೂಲಕ, ಔಟಾಗದೆ ಉಳಿದರು. ಇವರಿಗೆ ಸಾಥ್​ ನೀಡಿದ ನಿಕೋಲಸ್​ ಪೂರನ್​ ಕೇವಲ 15 ಬಾಲ್​ನಲ್ಲಿ 2 ಸಿಕ್ಸರ್​, 3 ಫೋರ್​ ಸಮೇತ 34 ರನ್​ ಬಾರಿಸಿದರು. ಆ ಬಳಿಕ ಪತಿರಾನ್ನಗೆ ವಿಕೆಟ್ ಒಪ್ಪಿಸಿದರು.

ಕೊನೆಯಲ್ಲಿ ದೀಪಕ್ ಹೂಡ 6 ಎಸೆತಗಳಲ್ಲಿ 17 ರನ್ ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ತಮ್ಮದೇ ಆದ ಕೊಡುಗೆ ನೀಡಿದರು. ಲಕ್ನೋ ತಂಡ ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್ ಶೂನ್ಯಕ್ಕೆ ಔಟಾದರೆ, ನಾಯಕ ಕೆ ಎಲ್ ರಾಹುಲ್ 16 ಹಾಗೂ ತಂಡದ ಇನ್ನೋರ್ವ ಕನ್ನಡಿಗ ದೇವದತ್ತ್ ಪಡಿಕ್ಕಲ್ ಕೇವಲ 13 ರನ್ ಗಳಿಸಲಷ್ಟೇ ಶಕ್ತವಾದರು.

ಚೆನ್ನೈ ತಂಡದ ಪರ ಬೌಲಿಂಗ್‌ನಲ್ಲಿ ಮಹೇಶ್ ಪತಿರಾನ್ನ 2 ವಿಕೆಟ್ ಪಡೆದರೆ, ಮುಸ್ತಫಿಝ್‌ ರಹ್ಮಾನ್ ಹಾಗೂ ದೀಪಕ್ ಚಾಹರ್ ತಲಾ ಒಂದೊಂದು ವಿಕೆಟ್ ಗಳಿಸುವಲ್ಲಿ ಯಶಸ್ವಿಯಾದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...