ಕ್ರಿಕೆಟ್‌ ಇತಿಹಾಸದಲ್ಲೇ ಮೊದಲ ‘ರೆಡ್ ಕಾರ್ಡ್‌’ ಪಡೆದ ಸುನಿಲ್ ನರೇನ್!

Date:

  • ವೆಸ್ಟ್ ಇಂಡೀಸ್​​ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಘಟನೆ
  • ನಿಧಾನಗತಿಯ ಬೌಲಿಂಗ್‌ಗೆ ತಕ್ಷಣವೇ ಜಾರಿಗೆ ಬರುವಂತಹ ಶಿಕ್ಷೆಯಾಗಿ ‘ರೆಡ್ ಕಾರ್ಡ್‌’ ಬಳಕೆ

ವೆಸ್ಟ್ ಇಂಡೀಸ್​​ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ‘ರೆಡ್ ಕಾರ್ಡ್’​ ನಿಯಮವನ್ನು ಜಾರಿಗೆ ತರಲಾಗಿದ್ದು, ಇದರ ಮೊದಲ ಬಲಿಪಶುವಾಗಿ ಸುನಿಲ್ ನರೇನ್ ಮೈದಾನ ತೊರೆಯುವಂತಾಯಿತು.

ಆ ಮೂಲಕ ಕ್ರಿಕೆಟ್‌ ಇತಿಹಾಸದಲ್ಲೇ ಮೊದಲ ‘ರೆಡ್ ಕಾರ್ಡ್‌’ ಪಡೆದ ಆಟಗಾರನೆಂಬ ಕುಖ್ಯಾತಿಗೆ ಸುನಿಲ್ ನರೇನ್ ಒಳಗಾದರು.

ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಹಾಗೂ ಟ್ರಿನ್‌ಬಾಗೊ ನೈಟ್ ರೈಡರ್ಸ್ ನಡುವಣ ಪಂದ್ಯದ ವೇಳೆ ಅಂಪೈರ್ ಮೊದಲ ಬಾರಿಗೆ ರೆಡ್ ಕಾರ್ಡ್ ತೋರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 19 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡಕ್ಕೆ ಅಂಪೈರ್​ ರೆಡ್ ಕಾರ್ಡ್ ತೋರಿಸಿದ್ದರು. ಅಲ್ಲದೆ ಈ ನಿಯಮದಂತೆ ಒಬ್ಬ ಆಟಗಾರನು ಮೈದಾನದಿಂದ ಹೊರಗುಳಿಯಬೇಕಿತ್ತು.

ಈ ವೇಳೆ ನಾಯಕ ಕೀರನ್ ಪೊಲಾರ್ಡ್, ಸುನಿಲ್ ನರೇನ್ ಅವರಿಗೆ ರೆಡ್ ಕಾರ್ಡ್​ ತೋರಿಸುವಂತೆ ಅಂಪೈರ್​ಗೆ ತಿಳಿಸಿದರು. ಅದರಂತೆ 19ನೇ ಓವರ್​ ಮುಕ್ತಾಯದ ಬೆನ್ನಲ್ಲೇ ನರೇನ್ ಮೈದಾನ ತೊರೆದರು. ಇದರೊಂದಿಗೆ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹಾಗೂ ಕ್ರಿಕೆಟ್ ಇತಿಹಾಸದಲ್ಲಿ ‘ರೆಡ್ ಕಾರ್ಡ್’​ ಪಡೆದ ಮೊದಲ ಆಟಗಾರ ಎನಿಸಿಕೊಂಡರು.

ನಿಧಾನಗತಿಯ ಬೌಲಿಂಗ್‌ಗೆ ತಕ್ಷಣವೇ ಜಾರಿಗೆ ಬರುವಂತಹ ಶಿಕ್ಷೆಯಾಗಿ ‘ರೆಡ್ ಕಾರ್ಡ್‌’ ಅನ್ನು ಕ್ರಿಕೆಟ್‌ನಲ್ಲಿ ಅಳವಡಿಸಲಾಗಿದೆ. ಫೀಲ್ಡ್​ ಅಂಪೈರ್​ ರೆಡ್ ಕಾರ್ಡ್ ತೋರಿಸಿ ಈ ನಿಯಮವನ್ನು ತಕ್ಷಣವೇ ಜಾರಿಗೊಳಿಸುತ್ತಾರೆ.

ಅದರಂತೆ ಟ್ರಿನ್​ಬಾಗೊ ನೈಟ್​ ರೈಡರ್ಸ್​ 20ನೇ ಓವರ್‌ನ ಆರಂಭದ ವೇಳೆ ನಿಗದಿತ ಸಮಯದಲ್ಲಿ ಬೌಲಿಂಗ್ ಮಾಡಲು ಹಿಂದೆ ಉಳಿದಿದ್ದ ಕಾರಣ ಸುನಿಲ್ ನರೇನ್ ಅವರನ್ನು ಹೊರಗೆ ಕಳುಹಿಸಿ, ಕೊನೆಯ ಓವರ್​ನಲ್ಲಿ 10 ಮಂದಿಯೊಂದಿಗೆ ಫೀಲ್ಡಿಂಗ್ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...