ತವರಿನಲ್ಲೇ ಆಡಲ್ಲ ಎಂದ ಸನ್‌ರೈಸರ್ಸ್ ಹೈದಾರಾಬಾದ್; ಕಾರಣವೇನು?

Date:

ಸನ್‌ರೈಸರ್ಸ್ ಹೈದ್ರಾಬಾದ್ ತಂಡವು ತಮ್ಮ‌ತವರು ರಾಜ್ಯದಲ್ಲಿರುವ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಡುವುದಿಲ್ಲ. ಬೇಕಿದ್ದರೆ ಅಲ್ಲಿನ ಪಂದ್ಯವನ್ನು ಬೇರೆಡೆಗೆ ಸ್ಥಳಾಂತರಿಸುತ್ತೇವೆ ಎಂದು ಹೇಳಿದೆ.

ಕ್ರೀಡಾಂಗಣದಲ್ಲಿನ ನೀಡಬೇಕಾದ ಉಚಿತ ಟಿಕೆಟ್‌ಗಳ ವಿಚಾರವಾಗಿ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ (HCA) ಜೊತೆ ಎಸ್‌ಆರ್‌ಎಚ್ ಪ್ರಾಂಚೈಸಿ ನಡುವೆ ತಿಕ್ಕಾಟ ನಡೆಯುತ್ತಿದೆ. ಹೀಗಾಗಿ, ಪಂದ್ಯವನ್ನೇ ಸ್ಥಳಾಂತರಿಸುವುದಾಗಿ ಎಸ್‌ಆರ್‌ಎಚ್ ಪ್ರಾಂಚೈಸಿ ಎಚ್ಚರಿಕೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಚ್‌ಸಿಎ ಉನ್ನತ ಅಧಿಕಾರಿಗಳ ಬೆದರಿಕೆ ಮತ್ತು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಫ್ರಾಂಚೈಸಿ ಆರೋಪಿಸಿದೆ. ತವರಿನಲ್ಲಿ ನಡೆಯಬೇಕಿದ್ದ ಪಂದ್ಯಗಳನ್ನು ಬೇರೆ ಕ್ರೀಡಾಂಗಣಗಳಲ್ಲಿ ಆಡುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಎಸ್‌ಆರ್‌ಎಚ್‌ನ ಜನರಲ್ ಮ್ಯಾನೇಜರ್ ಶ್ರೀನಾಥ್ ಟಿಬಿ ಅವರು ಎಚ್‌ಸಿಎ ಖಜಾಂಚಿ ಸಿಜೆ ಶ್ರೀನಿವಾಸ್ ರಾವ್ ಅವರಿಗೆ ಪತ್ರ ಬರೆದಿದ್ದಿದ್ದಾರೆ. ಎಚ್‌ಸಿಎ ನಡವಳಿಕೆಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ. “ಎಚ್‌ಸಿಎ ಅಧ್ಯಕ್ಷರ ನಡವಳಿಕೆಗಳು ತಂಡವು ಹೈದ್ರಾಬಾದ್ ಕ್ರೀಡಾಂಗಣದಲ್ಲಿ ಆಡುವುದು‌ ಇಷ್ಟವಿಲ್ಲ ಎಂಬಂತೆ ತೋರಿಸುತ್ತಿವೆ. ಹಾಗೇನಾದರೂ ಇದ್ದರೆ, ಲಿಖಿತವಾಗಿ ತಿಳಿಸಿಬಿಡಿ, ನಾವು ಬೇರೆ ಸ್ಥಳಕ್ಕೆ ಹೋಗುತ್ತೇವೆ” ಎಂದಿದ್ದಾರೆ.

ಕ್ರೀಡಾಂಗಣಕ್ಕೆ ಸೂಕ್ತವಾದ ಬಾಡಿಗೆ ಪಾವತಿಸುತ್ತೇವೆ.‌ಹಲವು ವರ್ಷಗಳಿಂದ, ಒಟ್ಟು 3,900 ಉಚಿತ ಟಿಕೆಟ್‌ಗಳಲ್ಲಿ 50 ಟಿಕೆಟ್‌ಗಳನ್ನು (F12A ಬಾಕ್ಸ್) ಎಚ್‌ಸಿಎಗೆ ಹಂಚಿಕೆ ಮಾಡಲಾಗಿದೆ. ಆದರೆ, ಈಗ ಬಾಕ್ಸ್ ಸಾಮರ್ಥ್ಯ ಕೇವಲ 30 ಎಂದು ಹೇಳಿಕೊಳ್ಳುತ್ತಿದ್ದೀರಿ. ಬೇರೆ ಬಾಕ್ಸ್‌ನಲ್ಲಿ ಹೆಚ್ಚುವರಿಯಾಗಿ 20 ಉಚಿತ ಟಿಕೆಟ್‌ಗಳನ್ನು ಕೇಳುತ್ತಿದ್ದೀರಿ. ನೀವು ಎಫ್‌3 ಬಾಕ್ಸ್ ಅನ್ನು ಲಾಕ್ ಮಾಡಿದ್ದೀರಿ. 20 ಹೆಚ್ಚುವರಿ ಉಚಿತ ಟಿಕೆಟ್ ಕೊಡದೇ ಇದ್ದರೆ ಬಾಕ್ಸ್‌ ತೆರೆಯಲ್ಲ ಎಂದಿದ್ದೀರಿ. ಇದು ವೃತ್ತಿಪರ ನಡೆಯಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...