ಐಪಿಎಲ್ | ಚೆನ್ನೈ ವಿರುದ್ಧ ಹೈದರಾಬಾದ್‌ಗೆ ಭರ್ಜರಿ ಜಯ: ಅಭಿ‍ಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್

Date:

ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಇಂದು ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 18ನೇ ಪಂದ್ಯದಲ್ಲಿ ಅತಿಥೇಯ ಸನ್‌ರೈಸರ್ಸ್ ಹೈದರಾಬಾದ್ ತಂಡವು, ಪ್ರವಾಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಭರ್ಜರಿ ಆರು ವಿಕೆಟ್‌ಗಳಿಂದ ಸೋಲಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಶಿವಂ ದುಬೆ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 165 ರನ್‌ಗಳನ್ನು ಕಲೆಹಾಕಿ, ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 166 ರನ್‌ಗಳ ಗುರಿ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಗುರಿಯನ್ನು ಬೆನ್ನತ್ತಿದ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಹೈದರಾಬಾದ್ ತಂಡವು 18.1 ಓವರ್‌ಗಳಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ಹೈದರಾಬಾದ್‌ನ ಯುವ ಬ್ಯಾಟರ್ ಅಭಿಷೇಕ್ ಶರ್ಮಾ, 12 ಎಸೆತಗಳಲ್ಲಿ ಮೂರು ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳ ನೆರವಿನಿಂದ 37 ರನ್ ಗಳಿಸಿ, ಚಾಹರ್‌ಗೆ ವಿಕೆಟ್ ಒಪ್ಪಿಸಿದರು. ಔಟಾಗುವುದಕ್ಕೂ ಮುನ್ನ ಮುಖೇಶ್ ಚೌಧರಿ ಎಸೆದ ಎರಡನೇ ಓವರ್‌ನಲ್ಲಿ ಮೂರು ಸಿಕ್ಸ್, ಎರಡು ಬೌಂಡರಿ ಇರುವ 27 ರನ್ ಬಾರಿಸಿದರು.

ಆ ಬಳಿಕ ಟ್ರಾವಿಸ್ ಹೆಡ್, ಚೆನ್ನೈ ಸ್ಪಿನ್ನರ್ ಮಹೇಶ್ ತೀಕ್ಷಣ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ, ವಿಕೆಟ್ ಒಪ್ಪಿಸಿದರು. ಉತ್ತಮವಾಗಿ ಆಡುತ್ತಿದ್ದ ಹೆಡ್, 24 ಎಸೆತಗಳಲ್ಲಿ ಮೂರು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 31 ರನ್ ಗಳಿಸಿ ಔಟಾದರು. ನಂತರ ಮಾರ್ಕರಮ್ ಹಾಗೂ ಶಹಬಾಝ್ ಜೋಡಿಯು ಉತ್ತಮ ಜೊತೆಯಾಟ ನಡೆಸಿದರು.

ಮಾರ್ಕರಮ್ 36 ಎಸೆತಗಳಲ್ಲಿ 50 ರನ್ ಗಳಿಸಿ ಮೊಯಿನ್ ಅಲಿ ಎಸೆತದಲ್ಲಿ ಎಲ್ ಬಿಡಬ್ಲ್ಯುಔಟ್ ಬಲೆಗೆ ಬಿದ್ದರು. ಶಹಬಾಝ್ 19 ಎಸೆತಗಳಲ್ಲಿ 18 ರನ್ ಗಳಿಸಿ, ಮೊಯಿನ್ ಅಲಿಗೆ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ಕ್ಲಾಸೆನ್ 10 ರನ್ ಹಾಗೂ ನಿತೀಶ್ ಕುಮಾರ್ ರೆಡ್ಡಿ 14 ರನ್ ಗಳಿಸಿ, ಔಟಾಗದೆ ಉಳಿದರು. ಹೈದರಾಬಾದ್ ತಂಡವು 18.1 ಓವರ್‌ಗಳಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

ಬೌಲಿಂಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಮೊಯೀನ್ ಅಲಿ 2, ಮಹೇಶ್ ತೀಕ್ಷಣ ಹಾಗೂ ದೀಪಕ್ ಚಾಹರ್ ತಲಾ ಒಂದೊಂದು ವಿಕೆಟ್ ಪಡೆದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...