ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಸನ್ ರೈಸರ್ಸ್ ಹೈದರಾಬಾದ್

Date:

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಂಬೈ ವಿರುದ್ಧ ಇಂದು ನಡೆದ ಐಪಿಎಲ್‌ನ 8ನೇ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡ ಇತಿಹಾಸ ಸೃಷ್ಟಿಸಿದೆ.

ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದರು. ಆದರೆ, ಹೈದರಾಬಾದ್‌ ಅನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕುವ ಲೆಕ್ಕಾಚಾರ ಉಲ್ಟಾ ಹೊಡೆಯಿತು.

ಪ್ಯಾಟ್ ಕಮ್ಮಿನ್ಸ್‌ ನೇತೃತ್ವದ ತಂಡದ ಬ್ಯಾಟರ್‌ಗಳ ಅಬ್ಬರದಿಂದಾಗಿ ನಿಗದಿತ 20 ಓವರ್‌ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 277 ರನ್‌ಗಳನ್ನು ದಾಖಲಿಸಿದೆ. ಇದು 17 ವರ್ಷದ ಐಪಿಎಲ್‌ನ ಇತಿಹಾಸದಲ್ಲೇ ತಂಡ ಬೃಹತ್ ಮೊತ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೊದಲು ಈ ದಾಖಲೆ ಆರ್‌ಸಿಬಿ ಹೆಸರಲ್ಲಿತ್ತು. 2013ರಲ್ಲಿ ಬೆಂಗಳೂರಿನಲ್ಲಿ ಪುಣೆ ವಾರಿಯರ್ಸ್‌ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಆರ್‌ಸಿಬಿಯು 5 ವಿಕೆಟ್ ಕಳೆದುಕೊಂಡು 263 ರನ್‌ಗಳನ್ನು ದಾಖಲಿಸಿತ್ತು.

ಮುಂಬೈ ಇಂಡಿಯನ್ಸ್ ವಿರುದ್ಧದ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ‘ವಿಶ್ವಕಪ್‌ನ ಹೀರೋ’ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಬಲಿಷ್ಠ ಆರಂಭ ನೀಡಿದರು.

4.1 ಓವರ್‌ಗಳಲ್ಲಿ ತಂಡದ ಮೊತ್ತವು 45 ರನ್‌ಗಳಿರುವಾಗ ಮಯಾಂಕ್ ಅಗರ್ವಾಲ್ ಅವರು ಹಾರ್ದಿಕ್ ಪಾಂಡ್ಯಾಗೆ ವಿಕೆಟ್ ಒಪ್ಪಿಸಿದರು. ಆ ಬಳಿಕ ಕ್ರೀಸ್‌ಗೆ ಆಗಮಿಸಿದ ಯುವ ಬ್ಯಾಟರ್ ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್‌ಗೆ ಸಾಥ್ ನೀಡಿದರು.

ಮುಂಬೈನ ಬೌಲಿಂಗ್ ದಾಳಿಯ ವಿರುದ್ಧ ಟ್ರಾವಿಸ್ ಹೆಡ್ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿ, ಕೇವಲ 18 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹೆಡ್ 24 ಎಸೆತಗಳಲ್ಲಿ ಒಂಭತ್ತು ಬೌಂಡರಿ ಹಾಗೂ ಮೂರು ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 62 ರನ್ ಗಳಿಸಿದ್ದಾಗ, ಕೊಯೆಟ್‌ಝೀ ಎಸೆತದಲ್ಲಿ ನಮನ್ ಧೀರ್‌ಗೆ ಕ್ಯಾಚ್ ನೀಡಿ, ಔಟಾದರು.

ಹೆಡ್ ಔಟಾದ ಬಳಿಕ ಎಡಗೈ ಬ್ಯಾಟರ್ ಅಭಿಷೇಕ್ ಶರ್ಮಾ ಕೂಡ ಸಿಡಿಲಬ್ಬರದ ಬ್ಯಾಟಿಂಗ್ ನಡೆಸುವ ಮೂಲಕ ಮುಂಬೈ ಬೌಲಿಂಗ್‌ ಅನ್ನು ಪುಡಿಗಟ್ಟಿದರು. ಅಭಿಷೇಕ್ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಸಾಧನೆ ಮಾಡಿದರು. ಪಿಯೂಷ್ ಚಾವ್ಲಾ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ, ಔಟಾದರು. ಅಭಿಷೇಕ್ ಶರ್ಮಾ 23 ಎಸೆತಗಳಲ್ಲಿ 63 ರನ್ ಗಳಿಸಿದರು.

ಬಳಿಕ ಜೊತೆಯಾದ ಹೆನ್ರಿ ಕ್ಲಾಸೆನ್ ಹಾಗೂ ಮಾರ್ಕರಮ್ ಜೋಡಿ ಮುರಿಯದ ನಾಲ್ಕನೇ ವಿಕೆಟ್‌ಗೆ ರನ್‌ಗಳ ಜೊತೆಯಾಟ ನಡೆಸಿದರು.

ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಹೆನ್ರಿ ಕ್ಲಾಸೆನ್ 34 ಎಸೆತಗಳಲ್ಲಿ 80 ರನ್(7 ಸಿಕ್ಸರ್, 4 ಬೌಂಡರಿ) ಹಾಗೂ ಮಾರ್ಕರಮ್ 28 ಎಸೆತಗಳಲ್ಲಿ 42 ರನ್(1 ಸಿಕ್ಸರ್, 2 ಬೌಂಡರಿ) ಗಳಿಸಿ ಮಿಂಚಿದರು.

ಮುಂಬೈ ಇಂಡಿಯನ್ಸ್‌ ಬೌಲಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ ಹೊರತುಪಡಿಸಿ, ಬೌಲಿಂಗ್ ಮಾಡಿದ ಉಳಿದೆಲ್ಲರೂ ದುಬಾರಿಯಾದರು. ಜಸ್ಪ್ರೀತ್ ಬುಮ್ರಾ 4 ಓವರ್‌ಗಳಲ್ಲಿ ಕೇವಲ 36 ರನ್ ನೀಡಿದರೂ, ವಿಕೆಟ್ ಪಡೆಯುವಲ್ಲಿ ವಿಫಲರಾದರು. ತಂಡದ ನಾಯಕ ಹಾರ್ದಿಕ್ ಪಾಂಡ್ಯಾ, ಪೀಯೂಷ್ ಚಾವ್ಲಾ ಹಾಗೂ ಕೊಯೆಟ್‌ಝೀ ತಲಾ ಒಂದೊಂದು ವಿಕೆಟ್ ಪಡೆದರು.

ಕ್ವೇನಾ ಮಪಾಕಾ 4 ಓವರ್‌ಗಳಲ್ಲಿ 66 ರನ್ ನೀಡಿದರೆ,  ಕೊಯೆಟ್‌ಝೀ 57 ರನ್ ನೀಡಿದರು. ಹಾರ್ದಿಕ್ ಪಾಂಡ್ಯಾ 46 ರನ್, ಪೀಯೂಷ್ ಚಾವ್ಲಾ 2 ಓವರ್‌ಗಳಲ್ಲಿ 34 ರನ್ ಹಾಗೂ ಮುಲಾನಿ 33 ರನ್ ನೀಡಿ ದುಬಾರಿಯಾದರು.

ರೋಹಿತ್ ಶರ್ಮಾಗೆ 200ನೇ ಐಪಿಎಲ್ ಪಂದ್ಯ

ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಇಂದು 200ನೇ ಐಪಿಎಲ್ ಪಂದ್ಯವನ್ನಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ 200 ಎಂದು ಬರೆದ ವಿಶೇಷ ಜೆರ್ಸಿಯನ್ನು ಸಚಿನ್ ತೆಂಡೂಲ್ಕರ್ ಕೊಡುಗೆಯಾಗಿ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...