ಐಪಿಎಲ್ | ‘ಹೀರೋ’ ಆದ ಹರ್ಷಿತ್ ರಾಣಾ: ಹೈದರಾಬಾದ್‌ ವಿರುದ್ಧ ಕೆಕೆಆರ್‌ಗೆ 4 ರನ್‌ಗಳ ರೋಚಕ ಜಯ

Date:

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಇಂದಿನ ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ನೀಡಿದ್ದ 208 ರನ್‌ಗಳ ಬೃಹತ್ ಗುರಿಯನ್ನು ಕೊನೆಯ ಕ್ಷಣದಲ್ಲಿ ಎಡವಿದ ಸನ್‌ರೈಸರ್ಸ್‌ ಹೈದರಾಬಾದ್, ಕೊನೆಯ ಓವರ್‌ನಲ್ಲಿ 4 ರನ್‌ಗಳಿಂದ ಸೋಲೊಪ್ಪಿಕೊಂಡಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್, ಫಿಲ್ ಸಾಲ್ಟ್ ಅವರ ಅರ್ಧಶತಕ (54 ರನ್) ಹಾಗೂ ಮಧ್ಯಮ ಕ್ರಮಾಂಕದ ಸ್ಫೋಟಕ ಬ್ಯಾಟರ್ ಆಂಡ್ಯ್ರೂ ರಸ್ಸೆಲ್ ಅವರ ಆಟದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 208 ರನ್ ದಾಖಲಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಗುರಿಯನ್ನು ಬೆನ್ನಟ್ಟಿದ ಸನ್‌ರೈಸರ್ಸ್‌ ಹೈದರಾಬಾದ್, ಕೊನೆಯ ಓವರ್‌ನ ಕೊನೆಯ ಎಸೆತದಲ್ಲಿ 5 ರನ್‌ಗಳ ಅವಶ್ಯಕತೆ ಇದ್ದಾಗ ಸೋಲೊಪ್ಪಿಕೊಂಡಿದೆ. ಕೆಕೆಆರ್ ಪರ ಕೊನೆಯ ಓವರ್ ಎಸೆದ ಹರ್ಷಿತ್ ರಾಣಾ, ತಮ್ಮ ತಂಡಕ್ಕೆ ರೋಚಕ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು. ಆ ಮೂಲಕ ತವರಿನಲ್ಲಿ ಹೀರೋ ಆಗಿದ್ದಾರೆ.

ಸನ್‌ರೈಸರ್ಸ್‌ ಹೈದರಾಬಾದ್‌ಗೆ ಕೊನೆಯ ಓವರ್‌ನಲ್ಲಿ ಕೇವಲ 13 ರನ್ ಬೇಕಾಗಿತ್ತು. ಆದರೆ ಹರ್ಷಿತ್ ರಾಣಾ ಕೇವಲ 8 ರನ್ ನೀಡಿ, ಎರಡು ವಿಕೆಟ್ ಪಡೆಯುವಲ್ಲಿ ಸಫಲರಾಗುವ ಮೂಲಕ ತಂಡಕ್ಕೆ ರೋಚಕ ಜಯ ತಂದುಕೊಟ್ಟರು. ಉತ್ತಮ ಬೌಲಿಂಗ್ ನಡೆಸಿದ ಹರ್ಷಿತ್ ರಾಣಾ, 4 ಓವರ್ ಎಸೆದು 33 ರನ್ ನೀಡಿ, ಮೂರು ವಿಕೆಟ್ ಪಡೆದು ಮಿಂಚಿದರು.

ಸನ್‌ರೈಸರ್ಸ್‌ ಹೈದರಾಬಾದ್‌ ಪರ ಹೆನ್ರಿ ಕ್ಲಾಸೆನ್ ಕೊನೆಯವರೆಗೂ ಹೋರಾಟ ನಡೆಸಿದರೂ ಕೂಡ ‘ಲಕ್’ ಅವರ ಕೈ ಹಿಡಿಯಲಿಲ್ಲ. ಕ್ಲಾಸೆನ್ 29 ಎಸೆತಗಳಲ್ಲಿ 63 ರನ್(8 ಸಿಕ್ಸ್) ಗಳಿಸಿ ಮಿಂಚಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...