ಬಿಸಿಸಿಐಗೆ ದಂಡ ಭರಿಸಲು ನಿರ್ದೇಶಿಸುವಂತೆ ಲಲಿತ್ ಮೋದಿ ಮನವಿ: ಅರ್ಜಿ ವಜಾಗೊಳಿಸಿದ ಸುಪ್ರೀಂ

Date:

2020ರ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕಾಗಿ ಜಾರಿ ನಿರ್ದೇಶನಾಲಯ ತಮಗೆ ವಿಧಿಸಿರುವ 10.65 ಕೋಟಿ ರೂ. ದಂಡವನ್ನು ಪಾವತಿಸುವಂತೆ ಬಿಸಿಸಿಐಗೆ ನಿರ್ದೇಶನ ನೀಡಬೇಕು ಎಂದು ಕೋರಿ ಇಂಡಿಯನ್ ಪ್ರೀಮಿಯರ್ ಲೀಗ್ ಸಂಸ್ಥಾಪಕ ಲಲಿತ್ ಮೋದಿ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಆದರೂ, ಕಾನೂನಿನ ಪ್ರಕಾರ ಲಭ್ಯವಿರುವ ನಾಗರಿಕ ಪರಿಹಾರಗಳನ್ನು ಪಡೆಯಲು ಲಲಿತ್ ಮೋದಿ ಅರ್ಹರು ಎಂದು ನ್ಯಾಯಮೂರ್ತಿ ಪಿ. ಎಸ್. ನರಸಿಂಹ ಹಾಗೂ ನ್ಯಾಯಮೂರ್ತಿ ಆರ್. ಮಹಾದೇವನ್ ಅವರನ್ನೊಳಗೊಂಡ ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ.

ಜಾರಿ ನಿರ್ದೇಶನಾಲಯ ತನಗೆ ವಿಧಿಸಿರುವ 10.65 ಕೋಟಿ ರೂ. ದಂಡವನ್ನು ಪಾವತಿಸುವಂತೆ ಬಿಸಿಸಿಐಗೆ ನಿರ್ದೇಶನ ನೀಡಬೇಕು ಎಂದು ಕೋರಿ ಲಲಿತ್ ಮೋದಿ ಸಲ್ಲಿಸಿದ್ದ ಅರ್ಜಿಯನ್ನು ಡಿಸೆಂಬರ್ 19, 2024ರಂದು ವಜಾಗೊಳಿಸಿದ್ದ ಬಾಂಬೆ ಹೈಕೋರ್ಟ್, ಲಲಿತ್ ಮೋದಿಗೆ ಒಂದು ಲಕ್ಷ ರೂ. ದಂಡವನ್ನೂ ವಿಧಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನಾಗರಹೊಳೆ ಬುಡಕಟ್ಟು ಜನಾಂಗಕ್ಕೆ ಸಿಗಲಿ ನ್ಯಾಯ

ಈ ಅರ್ಜಿಯ ವಿಚಾರಣೆ ನಡೆಸಿದ್ದ ಬಾಂಬೆ ಹೈಕೋರ್ಟ್, ಸುಪ್ರೀಂ ಕೋರ್ಟ್‌ನ ಸ್ಪಷ್ಟ ಆದೇಶಗಳ ಹೊರತಾಗಿಯೂ, ಲಲಿತ್ ಮೋದಿ ಕ್ಷುಲ್ಲಕ ಮತ್ತು ಸಂಪೂರ್ಣ ಅಪಕಲ್ಪನೆಯಿಂದ ಅರ್ಜಿ ಸಲ್ಲಿಸಿದ್ದಾರೆ ಎಂದು ತನ್ನ ಆದೇಶದಲ್ಲಿ ಹೇಳಿತ್ತು. ಬಳಿಕ, ಬಾಂಬೆ ಹೈಕೋರ್ಟ್ ನ ಆದೇಶವನ್ನು ಪ್ರಶ್ನಿಸಿ ಲಲಿತ್ ಮೋದಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಐಪಿಲ್ ಮುಖ್ಯಸ್ಥರಾಗಿದ್ದ ವೇಳೆ ಕೋಟ್ಯಂತರ ರೂಪಾಯಿ ವಂಚನೆ ನಡೆಸಿದ ಆರೋಪವನ್ನು ಎದುರಿಸುತ್ತಿರುವ ಲಲಿತ್ ಮೋದಿ, ಸದ್ಯ ಲಂಡನ್‌ನಲ್ಲಿ ನೆಲೆಸಿದ್ದಾರೆ ಎಂದು ಹೇಳಲಾಗಿದೆ. ತಮ್ಮ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಹಾಗೂ ಸ್ಪಾಟ್ ಫಿಕ್ಸಿಂಗ್ ಆರೋಪಗಳು ಕೇಳಿ ಬಂದ ಬೆನ್ನಿಗೇ, 2010ರಲ್ಲಿ ಅವರು ಭಾರತದಿಂದ ಪಲಾಯನಗೈದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...