ಐಪಿಎಲ್ | ಸೂರ್ಯ ಕುಮಾರ್ ಶತಕದಾಟ: ಮುಂಬೈ ವಿರುದ್ಧ ಹೈದರಾಬಾದ್‌ಗೆ ಸೋಲು: ಪ್ಲೇ-ಆಫ್ ಕನಸು ಭಗ್ನ?

Date:

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸೋಮವಾರ ನಡೆದ ಐಪಿಎಲ್‌ನ 55ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸೂರ್ಯ ಕುಮಾರ್ ಯಾದವ್ ಅವರ ಶತಕದಾಟದ ನೆರವಿನಿಂದ ಮುಂಬೈ ಇಂಡಿಯನ್ಸ್‌ ತಂಡವು ಭರ್ಜರಿಯಾಗಿ ಸೋಲಿಸಿದೆ.

ಹೈದರಾಬಾದ್‌ ವಿರುದ್ಧ ಸೂರ್ಯಕುಮಾರ್‌ ಯಾದವ್‌ ಅಬ್ಬರದ ಶತಕ ಸಿಡಿಸಿ ಮುಂಬೈಗೆ ಗೆಲುವು ತಂದು ಕೊಟ್ಟರು. ಹೀಗಾಗಿ ಹೈದರಾಬಾದ್‌ ನೀಡಿದ 174 ರನ್‌ ಗುರಿಯನ್ನು ಬೆನ್ನಟ್ಟಿದ್ದ‌ ಮುಂಬೈ ಕೇವಲ 3 ವಿಕೆಟ್‌ಗಳನ್ನು ಕಳೆದುಕೊಂಡು 17.2 ಓವರ್‌ಗಳಲ್ಲಿ ಜಯ ದಾಖಲಿಸಿತು.


ಹೈದರಾಬಾದ್‌ ನೀಡಿದ್ದ 174 ರನ್ ಗುರಿಯನ್ನು ಬೆನ್ನಟ್ಟಲು ಪ್ರಾರಂಭಿಸಿದಾಗ ಆರಂಭದಲ್ಲಿ ಮುಂಬೈ ಇಂಡಿಯನ್ಸ್‌ ಎಡವಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಬೈ ಪರ ಆರಂಭಿಕ ಬ್ಯಾಟರ್ ಇಶಾನ್‌ ಕಿಶನ್‌ 9 ರನ್‌ಗಳಿಸಿ ಮಾರ್ಕೊ ಜಾನ್ಸೆನ್ ಬೌಲಿಂಗ್‌ನಲ್ಲಿ ಔಟಾದರೆ, ಆ ಬಳಿಕ ಮಾಜಿ ನಾಯಕ ರೋಹಿತ್‌ ಶರ್ಮಾ ಕೂಡ ಕೇವಲ 5 ರನ್‌ಗೆ ಪ್ಯಾಟ್ ಕಮಿನ್ಸ್ ಬೌಲಿಂಗ್‌ನಲ್ಲಿ ವಿಕೆಟ್‌ ಕಳೆದುಕೊಂಡರು.

ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ನಡೆಸಲು ಬಂದ ನಮನ್ ಧೀರ್ ಕೂಡ ಶೂನ್ಯಕ್ಕೆ ಭುವನೇಶ್ವರ್ ಕುಮಾರ್ ಬೌಲಿಂಗ್‌ನಲ್ಲಿ ಔಟ್‌ ಆಗಿ ನಿರಾಸೆ ಮೂಡಿಸಿದರು. ಈ ಹಂತದಲ್ಲಿ ಮುಂಬೈ 31 ರನ್‌ಗಳಿಗೆ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ವೇಳೆ ಒಂದಾದ ಮುಂಬೈನ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಮತ್ತು ಎಡಗೈ ಬ್ಯಾಟರ್ ತಿಲಕ್ ವರ್ಮಾ ಹೈದರಾಬಾದ್‌ ಬೌಲರ್‌ಗಳನ್ನು ಕಾಡಲು ಶುರುವಿಟ್ಟರು.

ಸೂರ್ಯಕುಮಾರ್‌ ಯಾದವ್‌, ತಾನು ಎದುರಿಸಿದ 51 ಎಸೆತಗಳಲ್ಲಿ 12 ಬೌಂಡರಿ ಮತ್ತು 6 ಸಿಕ್ಸರ್‌ ನೆರವಿನಿಂದ 102* ಶತಕ ಹೊಡೆದು ಸಂಭ್ರಮಿಸಿದರು. ಇನ್ನೊಂದೆಡೆ ಸೂರ್ಯಕುಮಾರ್‌ ಯಾದವ್‌ ಅವರಿಗೆ ಸಾಥ್‌ ನೀಡಿದ್ದ ತಿಲಕ್‌ ವರ್ಮಾ ಅಜೇಯ 37 ರನ್‌ ಹೊಡೆದು ಮುಂಬೈ ಗೆಲುವಿಗೆ ಶ್ರಮವಹಿಸಿದರು. ಇವರಿಬ್ಬರ ಈ ಜೋಡಿಯು ಮುರಿಯದ ನಾಲ್ಕನೇ ವಿಕೆಟ್‌ಗೆ 143 ರನ್‌ಗಳ ಬೃಹತ್ ಜೊತೆಯಾಟ ನಡೆಸಿದರು.

ಹೈದರಾಬಾದ್‌ ಪರ ಮಾರ್ಕೊ ಜಾನ್ಸೆನ್, ಪ್ಯಾಟ್ ಕಮಿನ್ಸ್ ಮತ್ತು ಭುವನೇಶ್ವರ್ ಕುಮಾರ್ ತಲಾ 1 ವಿಕೆಟ್ ಪಡೆದರು.

ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು, ಹೈದರಾಬಾದ್ ವಿರುದ್ಧ ಕಳೆದ ಪಂದ್ಯದ ಸೋಲಿಗೆ ಸೇಡು ತೀರಿಸಿತು.

ಈವರೆಗೆ ಒಟ್ಟು 11 ಪಂದ್ಯಗಳನ್ನು ಆಡಿರುವ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಹೈದರಾಬಾದ್ ತಂಡವು, 6 ಗೆಲುವು ಹಾಗೂ 5 ಸೋಲಿನೊಂದಿಗೆ 4ನೇ ಸ್ಥಾನದಲ್ಲಿದ್ದರೂ ಪ್ಲೇ ಆಫ್‌ಗೆ ತಲುಪುವ ವಿಚಾರದಲ್ಲಿ ಸಂಕಷ್ಟಕ್ಕೆ ಸಿಲುಕಿದೆ. ಬೆಂಗಳೂರು, ಲಕ್ನೋ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇ ಆಫ್‌ಗೆ ಏರುವ ಕನಸು ಕಾಣುತ್ತಿದೆ. ಆದರೆ ಯಾರು ಪ್ರವೇಶಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...