ಸಿಡ್ನಿ ಟೆಸ್ಟ್ | ಟೀಮ್ ಇಂಡಿಯಾ ಮಾರಕ ಬೌಲಿಂಗ್‌ಗೆ ತತ್ತರಿಸಿದ ಆಸ್ಟ್ರೇಲಿಯಾ: 181ಕ್ಕೆ ಆಲೌಟ್

Date:

ಐದು ಟೆಸ್ಟ್‌ ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿಯ ಎರಡನೇ ದಿನದಾಟದಲ್ಲಿ ಹಂಗಾಮಿ ನಾಯಕ ಜಸ್ಪ್ರೀತ್ ಬುಮ್ರಾ ನೇತೃತ್ವದ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ತಂಡದ ವಿರುದ್ಧ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಎರಡನೇ ದಿನದ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡವು 181 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗಿದೆ.

ಟೆಸ್ಟ್ ಸರಣಿಯ ಅಂತಿಮ ಟೆಸ್ಟ್‌ ಪಂದ್ಯದ ಮೊದಲ ದಿನ ಮೊದಲು ಬ್ಯಾಟಿಂಗ್ ನಡೆಸಿದ್ದ ಟೀಮ್ ಇಂಡಿಯಾ, 185 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗಿತ್ತು. ಮೊದಲ ದಿನದ ಅಂತಿಮ ಕ್ಷಣದಲ್ಲಿ ಬ್ಯಾಟಿಂಗ್‌ಗೆ ಇಳಿದಿದ್ದ ಆಸ್ಟ್ರೇಲಿಯಾ, ಬುಮ್ರಾ ಎಸೆದಿದ್ದ ಕೊನೆಯ ಓವರ್‌ನ ಕೊನೆಯ ಎಸೆತದಲ್ಲಿ ಉಸ್ಮಾನ್ ಖ್ವಾಜಾ ವಿಕೆಟ್ ಪಡೆಯುವಲ್ಲಿ ಸಫಲರಾಗಿದ್ದರು. ಆ ಮೂಲಕ ಮೊದಲ ದಿನದಾಟದ ಅಂತ್ಯದ ವೇಳೆಗೆ ಆತಿಥೇಯ ಆಸ್ಟ್ರೇಲಿಯಾ 9 ರನ್‌ಗೆ ಒಂದು ವಿಕೆಟ್ ಕಳೆದುಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡನೇ ದಿನ 9 ರನ್‌ಗಳಿಂದ ಬ್ಯಾಟಿಂಗ್ ಮುಂದುವರಿಸಿದ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಆತಿಥೇಯ ತಂಡವು ಟೀಮ್ ಇಂಡಿಯಾದ ಮಾರಕ ಬೌಲಿಂಗ್‌ಗೆ ತತ್ತರಿಸಿ 181 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗಿದೆ. ಆ ಮೂಲಕ ಟೀಮ್ ಇಂಡಿಯಾ, 4 ರನ್‌ಗಳ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ.

ನಾಯಕ ಬುಮ್ರಾ ನೇತೃತ್ವದಲ್ಲಿ ಬೌಲಿಂಗ್ ದಾಳಿ ನಡೆಸಿದ ಟೀಮ್ ಇಂಡಿಯಾ ವೇಗದ ಬೌಲರ್‌ಗಳು, ಆಸೀಸ್‌ನ ಬ್ಯಾಟರ್‌‌ಗಳು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲು ಅವಕಾಶ ನೀಡಲಿಲ್ಲ.

ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ ಹಾಗೂ ತಲಾ ಮೂರು ವಿಕೆಟ್, ಜಸ್ಪ್ರೀತ್ ಬುಮ್ರಾ ಹಾಗೂ ನಿತೀಶ್ ಕುಮಾರ್ ರೆಡ್ಡಿ ತಲಾ ಎರಡು ವಿಕೆಟ್‌ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆಸ್ಟ್ರೇಲಿಯಾ ಪರ ಮೊದಲ ಟೆಸ್ಟ್‌ ಪಂದ್ಯವನ್ನಾಡುತ್ತಿರುವ ಬ್ಯೂ ವೆಬ್‌ಸ್ಟರ್ 57 ರನ್ ಗಳಿಸಿ, ಅರ್ಧಶತಕ ಗಳಿಸುವ ಮೂಲಕ ಮಿಂಚಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...