ಟಿ20 ವಿಶ್ವಕಪ್ | ಟೀಮ್ ಇಂಡಿಯಾ-ಅಮೆರಿಕ ಮೊದಲ ಮುಖಾಮುಖಿ: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ರೋಹಿತ್ ಶರ್ಮಾ

Date:

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಐಸಿಸಿ ಟಿ20 ವಿಶ್ವಕಪ್‌ನ 25ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ಅಮೆರಿಕ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಟಿ20 ವಿಶ್ವಕಪ್‌ನ ಆತಿಥ್ಯ ವಹಿಸಿಕೊಂಡಿರುವ ಅಮೆರಿಕವು ಆಡಿರುವ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಎಲ್ಲರನ್ನೂ ಅಚ್ಚರಿಗೆ ಕೆಡವಿದೆ. ಯುಎಸ್‌ಎ ತನ್ನ ಆರಂಭಿಕ ಪಂದ್ಯದಲ್ಲಿ ಕೆನಡಾ ತಂಡವನ್ನು ಸೋಲಿಸುವಾಗ 195ರ ಬೃಹತ್ ಗುರಿಯನ್ನು ಬೆನ್ನಟ್ಟಿ, ಗೆದ್ದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ, ತಮ್ಮ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ರೋಚಕವಾಗಿ ಸೋಲಿಸುವ ಮೂಲಕ ಮತ್ತಷ್ಟು ನಿಬ್ಬೆರಗಾಗಿಸಿದರು. ಟೈ ಪಂದ್ಯದ ನಂತರ ಸೂಪರ್ ಓವರ್‌ನಲ್ಲಿ ಪಾಕಿಸ್ತಾನ ತಂಡಕ್ಕೆ ಹೀನಾಯ ಸೋಲನ್ನು ನೀಡಿ, ಆಘಾತ ನೀಡಿದ್ದರು.

ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ತಂಡ ಕೂಡ ಈಗಾಗಲೇ ಎರಡು ಪಂದ್ಯಗಳನ್ನಾಡಿದ್ದು, ಎರಡರಲ್ಲೂ ಜಯ ಗಳಿಸಿದೆ. ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಗೆದ್ದಿದ್ದರೆ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ನಡೆದಿದ್ದ ಅಲ್ಪಮೊತ್ತದ ಪಂದ್ಯದಲ್ಲಿ 6 ರನ್‌ಗಳಿಂದ ರೋಚಕ ಜಯ ಗಳಿಸಿತ್ತು. ಆ ಮೂಲಕ ಬಾಬರ್ ಆಝಂ ನೇತೃತ್ವದ ಪಾಕಿಸ್ತಾನ ತಂಡವು ತಮ್ಮ ಕೈಯ್ಯಲ್ಲಿದ್ದ ಪಂದ್ಯವನ್ನು ಸೋಲುವ ಮೂಲಕ ಅಭಿಮಾನಿಗಳಿಂದ ತೀವ್ರ ಟೀಕೆಗೆ ಗುರಿಯಾಗಿತ್ತು.

ಇಂದು ಒಂದು ವೇಳೆ ಅಮೆರಿಕ ಗೆದ್ದರೆ, ಪಾಕಿಸ್ತಾನ ತಂಡವು ಬಹುತೇಕ ಸೂಪರ್ 8ರ ಘಟ್ಟಕ್ಕೆ ತಲುಪುವುದು ಅಸಾಧ್ಯದ ಮಾತಾಗಲಿದೆ. ಈ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಗೆಲ್ಲುವಂತೆ ಪಾಕಿಸ್ತಾನದ ಅಭಿಮಾನಿಗಳು ಪ್ರಾರ್ಥನೆ ನಡೆಸುತ್ತಿದ್ದಾರೆ.

ಅಮೆರಿಕ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾವು ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅಮೆರಿಕದಲ್ಲಿ ಒಂದೆರಡು ಬದಲಾವಣೆಗಳಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...