ಟಿ20 ವಿಶ್ವಕಪ್ | 39 ರನ್‌ಗಳಿಗೆ ಉಗಾಂಡ ಆಲೌಟ್; ಹಲವು ದಾಖಲೆಗಳನ್ನು ಬರೆದ ವಿಂಡೀಸ್

Date:

ಟಿ20 8ನೇ ಆವೃತ್ತಿಯ 18ನೇ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ತಂಡ ಉಗಾಂಡ ತಂಡವನ್ನು ಕೇವಲ 39 ರನ್‌ಗಳಿಗೆ ಆಲೌಟ್ ಮಾಡಿ 134 ರನ್‌ಗಳ ಭರ್ಜರಿ ಜಯ ದಾಖಲಿಸಿತು.

ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ಅಕೆಲ್ ಹೊಸೈನ್ ಅಮೋಘ ಐದು ವಿಕೆಟ್ ಕಬಳಿಸುವ ಮೂಲಕ ವಿಂಡೀಸ್‌ ತಂಡಕ್ಕೆ ದಾಖಲೆ ಅಂತರದ ಜಯ ನೀಡಿ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತ್ಯಂತ ಕನಿಷ್ಠ ಮೊತ್ತ ದಾಖಲಿಸಿದ ಕುಖ್ಯಾತಿಗೆ ಉಗಾಂಡ ಪಾತ್ರವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ವಿಂಡೀಸ್ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 173 ರನ್‌ ಸವಾಲಿನ ಮೊತ್ತ ದಾಖಲಿಸಿತು. ಜಾನ್ಸನ್ ಚಾರ್ಲ್ಸ್ ವೇಗಿಗಳ ವಿರುದ್ಧ ಆಕ್ರಮಣಕಾರಿ ಆಟವಾಡಿ 44 ರನ್‌ ಗಳಿಸಿ ತಂಡದಲ್ಲಿ ಹೆಚ್ಚು ರನ್‌ ಗಳಿಸಿದ ಬ್ಯಾಟರ್‌ ಎನಿಸಿದರು. ಆಲ್‌ರೌಂಡರ್‌ ಆಂಡ್ರೆ ರಸೆಲ್ (30) ಆತಿಥೇಯರ ಪರ ಉತ್ತಮ ಆಟವಾಡಿದರು.

ಈ ಸುದ್ದಿ ಓದಿದ್ದೀರಾ? ಟಿ20 ವಿಶ್ವಕಪ್ | ಕೆನಡಾ ವಿರುದ್ಧ ಅಮೆರಿಕ ಶುಭಾರಂಭ; ಮಿಂಚಿದ ಕನ್ನಡಿಗ

ಅನುಭವಿ ನಿಕೋಲಸ್ ಪೂರನ್(22) ಕೂಡಾ ವೇಗವಾಗಿ ರನ್ ಕಲೆ ಹಾಕಲು ಮುಂದಾದರು. ಉತ್ತಮ ಆರಂಭದ ಹೊರತಾಗಿಯೂ ಕೊನೆಯ ಓವರ್‌ಗಳಲ್ಲಿ ತಂಡದಿಂದ ಹೆಚ್ಚಿನ ಮೊತ್ತ ಹೆಚ್ಚಿಸಲು ಸಾಧ್ಯವಾಗಲಿಲ್ಲ.

174 ರನ್‌ಗಳ ಗುರಿ ಬೆನ್ನಟ್ಟಿದ ಉಗಾಂಡಾ, ಕೇವಲ 12 ಓವರ್‌ಗಳಲ್ಲಿ 39 ರನ್‌ಗಳಿಗೆ ಆಲೌಟ್ ಆಯಿತು. ಬೃಹತ್ ಗುರಿಗೆ ಉತ್ತರವಾಗಿ ಉಗಾಂಡಾ ಮೊದಲ 37 ಎಸೆತಗಳಲ್ಲಿ ಕೇವಲ 22 ರನ್‌ಗಳಿಗೆ ಆರು ವಿಕೆಟ್ ಕಳೆದುಕೊಂಡಿತು. ಅಂತಿಮವಾಗಿ ಕೇವಲ 39 ರನ್‌ಗಳಿಗೆ ಆಲೌಟ್ ಆಗಿ ಕಳಪೆ ದಾಖಲೆ ಬರೆಯಿತು. ಇದು ಟಿ20 ವಿಶ್ವಕಪ್ ಇತಿಹಾಸದಲ್ಲಿ ತಂಡವೊಂದು ಜಂಟಿಯಾಗಿ ದಾಖಲಿಸಿದ ಅತ್ಯಲ್ಪ ಮೊತ್ತವಾಗಿದೆ.

11 ರನ್‌ಗಳಿಗೆ 5 ವಿಕೆಟ್ ಕಬಳಿಸಿದ ಅಕೆಲ್‌ ಹೊಸೈನ್ ತಂಡದ ಗೆಲುವಿನ ರೂವಾರಿಯಾದರು. ಈ ಗೆಲುವಿನೊಂದಿಗೆ ವೆಸ್ಟ್‌ ಇಂಡೀಸ್‌ ತಂಡ ಸಿ ಗುಂಪಿನ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.

ಎರಡನೇ ಅತಿ ದೊಡ್ಡ ಗೆಲುವು

ವೆಸ್ಟ್ ಇಂಡೀಸ್ ಪಾಲಿಗೆ ಇದು ಟಿ20 ಕ್ರಿಕೆಟ್ನಲ್ಲಿ ಅತಿ ದೊಡ್ಡ ಗೆಲುವಾಗಿದೆ. ಒಟ್ಟಾರೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಇದು ಎರಡನೇ ಅತಿ ದೊಡ್ಡ ಗೆಲುವಾಗಿದೆ. 2007ರಲ್ಲಿ ಕೀನ್ಯಾ ವಿರುದ್ಧ ಶ್ರೀಲಂಕಾ 172 ರನ್‌ಗಳ ಅಂತರದಿಂದ ಗೆದ್ದಿರುವುದು ಅತಿ ದೊಡ್ಡ ಜಯವಾಗಿದೆ.

ಟಿ20 ವಿಶ್ವಕಪ್‌ನಲ್ಲಿ ಅತಿ ಕಡಿಮೆ ಮೊತ್ತಕ್ಕೆ ಆಲೌಟ್ ಆದ ತಂಡಗಳು

39 – ನೆದರ್ಲೆಂಡ್ಸ್ – ಶ್ರೀಲಂಕಾ ವಿರುದ್ಧ, ಚಟ್ಟೋಗ್ರಾಮ್ -2014

39 – ಉಗಾಂಡ – ವೆಸ್ಟ್ ಇಂಡೀಸ್ ವಿರುದ್ಧ, ಪ್ರಾವಿಡೆನ್ಸ್ -2024

44 – ನೆದರ್ಲೆಂಡ್ಸ್ – ಶ್ರೀಲಂಕಾ ವಿರುದ್ಧ, ಶಾರ್ಜಾ, 2021

55 – ವೆಸ್ಟ್ ಇಂಡೀಸ್ -ಇಂಗ್ಲೆಂಡ್ ವಿರುದ್ಧ, ದುಬೈ, 2021

58 – ಉಗಾಂಡ – ಅಫ್ಘಾನಿಸ್ತಾನ ವಿರುದ್ಧ, ಗಯಾನಾ, 2024

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...