T20 ವಿಶ್ವಕಪ್ | ಇತಿಹಾಸ ಸೃಷ್ಟಿಸಿ ಸೆಮಿಫೈನಲ್‌ಗೆ ಅಫ್ಘಾನ್; ತಾಲಿಬಾನ್ ನಾಡಲ್ಲಿ ಮುಗಿಲು ಮುಟ್ಟಿದ ಸಂಭ್ರಮ

Date:

ಕಿಂಗ್ಸ್ ಟೌನ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಸಿಸಿ T20 ವಿಶ್ವಕಪ್ ಟೂರ್ನಿಯ ಸೂಪರ್ 8 ಹಂತದ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 8 ರನ್ ಗಳಿಂದ ಸೋಲಿಸಿದ ಅಫ್ಘಾನಿಸ್ತಾನ, ಚೊಚ್ಚಲ ಬಾರಿಗೆ ಸೆಮಿಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸಿತು.

ಅಫ್ಘಾನಿಸ್ತಾನ ಸೆಮಿಫೈನಲ್ ಪ್ರವೇಶಿಸುವುದರೊಂದಿಗೆ ಆಸ್ಟ್ರೇಲಿಯಾ ಟೂರ್ನಿಯಿಂದ ಹೊರಬಿದ್ದಿದೆ. ಮೊದಲ ಬಾರಿಗೆ ಐಸಿಸಿ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸುವ ಮೂಲಕ ರಶೀದ್ ಖಾನ್ ಬಳಗ ಇತಿಹಾಸ ಸೃಷ್ಟಿಸಿದೆ. ಜೂನ್ 26ರಂದು ಗಯಾನದಲ್ಲಿ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಅಫ್ಘಾನಿಸ್ತಾನ ಎದುರಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲಿಬಾನ್ ನಾಡಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಸದ್ಯ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ನೇತೃತ್ವದ ಸರ್ಕಾರವು ಆಡಳಿತ ನಡೆಸುತ್ತಿದೆ. ಬಾಂಗ್ಲಾದೇಶವನ್ನು 8 ರನ್ ಗಳಿಂದ ಅಫ್ಘಾನ್ ತಂಡವು ಸೋಲಿಸುತ್ತಿದ್ದತೆಯೇ ತಂಡದ ಆಟಗಾರರು, ಕೋಚ್ ಹಾಗೂ ಇಂಗ್ಲೆಂಡ್‌ನ ಮಾಜಿ ಆಟಗಾರ ಜೋನಾಥನ್ ಟ್ರಾಟ್, ಕೋಚಿಂಗ್ ತಂಡದ ಭಾಗವಾಗಿರುವ ವೆಸ್ಟ್‌ ಇಂಡೀಸ್‌ನ ಮಾಜಿ ಆಟಗಾರ ಡ್ವೇಯ್ನ್ ಬ್ರಾವೋ ಮೈದಾನವಿಡೀ ಓಡಿ, ಕುಣಿದು ಕುಪ್ಪಳಿದರು.

ಗೆದ್ದ ಖುಷಿಯಲ್ಲಿದ್ದ ಅಫ್ಘಾನ್ ತಂಡದ ಆಟಗಾರರ ಕಣ್ಣಲ್ಲಿ ಖುಷಿಯಿಂದ ಆನಂದಬಾಷ್ಪ ಹರಿಸಿದರೆ, ತಂಡವು ಗೆಲ್ಲುತ್ತಿದ್ದಂತೆಯೇ ತಾಲಿಬಾನ್ ನಾಡಲ್ಲಿ ಜನರು ಖುಷಿಯಿಂದ ರಸ್ತೆಗಿಳಿದು, ಸಂಭ್ರಮಾಚರಣೆ ನಡೆಸಿದರು. ಇದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಹೀಗಾಗಿ ರಸ್ತೆಯಿಂದ ಜನರನ್ನು ತೆರವುಗೊಳಿಸಲು ಅಫ್ಘಾನಿಸ್ತಾನದ ಪೊಲೀಸರು, ನೆರೆದಿದ್ದ ಜನರನ್ನು ಚದುರಿಸಲು ಜಲಫಿರಂಗಿ ಬಳಸಿದರಾದರೂ, ಯಾರೂ ಕೂಡ ರಸ್ತೆಯಿಂದ ಕದಡಲಿಲ್ಲ.

ಈ ನಡುವೆ  ಸಾವಿರಾರು ಮಂದಿ ಅಫ್ಘಾನಿಸ್ತಾನದ ಜಲಾದಾಬಾದ್‌ನಲ್ಲಿ ರಸ್ತೆಗೆ ಇಳಿದಿರುವ ಫೋಟೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಈ ಫೋಟೊವನ್ನು ಖುದ್ದು ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್‌ ತನ್ನ ಸೋಷಿಯಲ್ ಮೀಡಿಯಾ ಪೇಜ್‌ನಲ್ಲೂ ಕೂಡ ಪ್ರಕಟಿಸಿದ್ದು, “ತಂಡದ ಗೆಲುವನ್ನು ಹೇಗೆ ಆಚರಿಸಬೇಕೆಂದು ನಮ್ಮವರಿಗೆ ತಿಳಿದಿದೆ” ಎಂದು ತಿಳಿಸಿದೆ.

ವಿಡಿಯೋ ಕಾಲ್ ಮಾಡಿ ನಾಯಕ ರಶೀದ್ ಖಾನ್‌ಗೆ ಅಭಿನಂದಿಸಿದ ಅಫ್ಘಾನ್ ವಿದೇಶ ಮಂತ್ರಿ

ವಿಶ್ವಕಪ್‌ನಲ್ಲಿ ಸೆಮಿಫೈನಲ್ ತಲುಪಿದ್ದಕ್ಕಾಗಿ ಅಫ್ಘಾನಿಸ್ತಾನ ತಂಡದ ನಾಯಕ ರಶೀದ್ ಖಾನ್ ಅವರನ್ನು ದೇಶದ ವಿದೇಶಾಂಗ ವ್ಯವಹಾರಗಳ ಸಚಿವ ಅಮೀರ್ ಖಾನ್ ಮುಟ್ಟಾಕಿ ಅಭಿನಂದಿಸಿದ್ದು, ತಂಡಕ್ಕೆ ಹೆಚ್ಚಿನ ಯಶಸ್ಸು ಸಿಗಲಿ ಎಂದು ಹಾರೈಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...